Home High Court/ಹೈಕೋರ್ಟ್ 6 ವಾರಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಸಿ

6 ವಾರಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಸಿ

40
0

ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು:

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಗೆ ಹಸಿರು ನಿಶಾನೆ ತೋರಿರುವ ಹೈಕೋರ್ಟ್‌, ಹಿಂದಿನಂತೆ 198 ವಾರ್ಡ್‌ಗಳಿಗೆ ಆರು ವಾರಗಳಲ್ಲಿ ಚುನಾವಣೆ ನಡೆಸುವಂತೆ ಮಹತ್ವದ ಆದೇಶ ಹೊರಡಿಸಿದೆ.

ಚುನಾವಣೆ ನಡೆಸುವಂತೆ ಸರ್ಕಾರಕ್ಕೆ ನಿರ್ದೇಶನ ಕೋರಿ ಮಾಜಿ ಕಾರ್ಪೊರೇಟರ್‌ಗಳಾದ ಅಬ್ದುಲ್ ವಾಜಿದ್‌ ಮತ್ತು ಶಿವರಾಜ್‌ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿದೆ.

ಮೀಸಲಾತಿ ಕುರಿತು ಜೂನ್‌ 23ರಂದು ಹೊರಡಿಸಿರುವ ಅಂತಿಮ ಮೀಸಲಾತಿಯನ್ನು ಆಧರಿಸಿ ಆರು ವಾರಗಳಲ್ಲಿ ಚುನಾವಣಾ ಅಧಿಸೂಚನೆ ಹೊರಡಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.

ಈ ಚುನಾವಣೆಗೆ ಸರ್ಕಾರ ಇತ್ತೀಚಿಗೆ ಹೊರಡಿಸಿರುವ ಕೆಎಂಸಿ ಕಾಯ್ದೆ ತಿದ್ದುಪಡಿ ಇದಕ್ಕೆ ಅನ್ವಯವಾಗಲ್ಲ. ಹಾಗಾಗಿ, ಬಿಬಿಎಂಪಿ ಚುನಾವಣೆ ನಡೆಸುವಂತೆ ನ್ಯಾಯಪೀಠ ಆಯೋಗಕ್ಕೆ ನಿರ್ದೇಶನ ನೀಡಿದೆ.

ಕೆಎಂಸಿ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಸರ್ಕಾರ ಬಿಬಿಎಂಪಿ ಚುನಾವಣೆಯನ್ನು ಮುಂದೂಡಲು ಯತ್ನಿಸುತ್ತಿದೆ. 2021ರಲ್ಲಿ ಹೊಸ ಜನಗಣತಿ ವರದಿ ಹೊರಬೀಳುವುದರಿಂದ ಚುನಾವಣೆ ಮತ್ತಷ್ಟು ಮುಂದಕ್ಕೆ ಹೋಗುವ ಸಾಧ್ಯತೆಯಿದೆ ಎಂದು ಅರ್ಜಿದಾರರು ವಾದಿಸಿದ್ದರು.

LEAVE A REPLY

Please enter your comment!
Please enter your name here