Home ರಾಜಕೀಯ ಡಿನೋಟಿಫಿಕೇಷನ್‌ ಪ್ರಕರಣ: ಸಿಎಂ ಯಡಿಯೂರಪ್ಪ ವಿರುದ್ಧದ ಎಫ್‌ಐಆರ್‌ ರದ್ದುಗೊಳಿಸಲು ಹೈಕೋರ್ಟ್‌ ನಿರಾಕರಣೆ

ಡಿನೋಟಿಫಿಕೇಷನ್‌ ಪ್ರಕರಣ: ಸಿಎಂ ಯಡಿಯೂರಪ್ಪ ವಿರುದ್ಧದ ಎಫ್‌ಐಆರ್‌ ರದ್ದುಗೊಳಿಸಲು ಹೈಕೋರ್ಟ್‌ ನಿರಾಕರಣೆ

136
0
Karnataka High Court

ಬೆಂಗಳೂರು:

ಜಮೀನು ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ಎಫ್‍ಐಆರ್ ರದ್ದುಗೊಳಿಸುವಂತೆ ಕೋರಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.

ಜಯಕುಮಾರ್‌ ಹಿರೇಮಠ್‌ ಎಂಬುವರು ಲೋಕಾಯುಕ್ತಕ್ಕೆ ಸಲ್ಲಿಸಿದ್ದ ದೂರಿನ ಆಧಾರದ ಮೇಲೆ ದಾಖಲಾಗಿರುವ ಎಫ್‌ಐಆರ್‌ ರದ್ದುಗೊಳಿಸುವಂತೆ ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಮೈಕೆಲ್‌ ಡಿ.ಕುನ್ಹಾ ಅವರಿದ್ದ ನ್ಯಾಯಪೀಠ ಪ್ರಕಟಿಸಿದೆ.

ಜೊತೆಗೆ, ದೂರಿನ ಸಂಬಂಧ ತನಿಖೆ ಮುಂದುವರಿಸುವಂತೆ ಲೋಕಾಯುಕ್ತಕ್ಕೆ ಸೂಚನೆ ನೀಡಿದೆ. ಇದು ಯಡಿಯೂರಪ್ಪ ಅವರಿಗೆ ಭಾರಿ ಹಿನ್ನೆಡೆಯಾಗಿದೆ. UNI

LEAVE A REPLY

Please enter your comment!
Please enter your name here