Home ರಾಮನಗರ HD Kumaraswamy | ಮಹಿಳಾ ಮೀಸಲು ವಿಧೇಯಕ ಸ್ವಾಗತಿಸಿದ ಹೆಚ್.ಡಿ.ಕುಮಾರಸ್ವಾಮಿ ; ದೇವೇಗೌಡರು ಪ್ರಧಾನಿ ಆಗಿದ್ದಾಗಲೇ...

HD Kumaraswamy | ಮಹಿಳಾ ಮೀಸಲು ವಿಧೇಯಕ ಸ್ವಾಗತಿಸಿದ ಹೆಚ್.ಡಿ.ಕುಮಾರಸ್ವಾಮಿ ; ದೇವೇಗೌಡರು ಪ್ರಧಾನಿ ಆಗಿದ್ದಾಗಲೇ ವಿಧೇಯಕ ಮಂಡನೆ; ಅವರ ಕನಸು ಮೋದಿ ಕಾಲದಲ್ಲಿ ಸಾಕಾರ

182
0
HD Kumaraswamy | Former Chief Minister HD Kumaraswamy welcomed the Women's Reservation Bill, Bill was presented when Deve Gowda was the Prime Minister; His dream has come true under Modi's tenure
HD Kumaraswamy | Former Chief Minister HD Kumaraswamy welcomed the Women's Reservation Bill, Bill was presented when Deve Gowda was the Prime Minister; His dream has come true under Modi's tenure

ರಾಮನಗರ:

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ ಆಗಿರುವುದಕ್ಕೆ ನಮ್ಮ ಸ್ವಾಗತ ಇದೆ. ಹಾಗೆಯೇ, ಶಾಸನಸಭೆಗಳಲ್ಲಿ ಮಹಿಳೆಯರಿಗೆ ಮೀಸಲು ಸಿಗುವುದಕ್ಕೆ ನಮಗೆ ಸಂತಸ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ಬಿಡದಿಯ ತಮ್ಮ ತೋಟದ ಮನೆಯಲ್ಲಿ ಅವರು ಇಂದು ಮಾಧ್ಯಮಗಳ ಜತೆ ಮಾತನಾಡಿದರು.

ಇವತ್ತು ಮಹಿಳಾ ಮೀಸಲು ಬಗ್ಗೆ ಇಡೀ ದೇಶದ ಉದ್ದಗಲಕ್ಕೂ ಚರ್ಚೆ ನಡೆಯುತ್ತಿದೆ. ಇದಕ್ಕೆ ಮೂಲ ಕಾರಣ ದೇವೇಗೌಡರು. 1996 ಸೆಪ್ಟೆಂಬರ್ 12ರಂದು ಅವರು ಶಾಸನಸಭೆಗಳಲ್ಲಿ ಮಹಿಳೆಯರಿಗೆ ಅಧಿಕಾರ ನೀಡಲು ದೇವೇಗೌಡರು ಸಂಸತ್ತಿನಲ್ಲಿ ವಿಧೇಯಕ ಮಂಡಿಸಿದರು. ಅಂದು ರಾಜ್ಯಸಭೆಯಲ್ಲಿ ಅಂಗೀಕಾರವಾದ ಈ ಮಸೂದೆ ಲೋಕಸಭೆಯಲ್ಲಿ ಬಿದ್ದು ಹೋಯಿತು. ಅಂದು ಅವರ ಜತೆ ಅಧಿಕಾರ ಹಂಚಿಕೊಂಡಿದ್ದ ಮಿತ್ರಪಕ್ಷಗಳ ನಾಯಕರೇ ವಿರೋಧ ವ್ಯಕ್ತಪಡಿಸಿದರು. 24 ವರ್ಷಗಳ ನಂತರ ದೇವೇಗೌಡರ ಕನಸು ಸಾಕಾರ ಆಗುತ್ತಿದೆ. ಈ ಬಗ್ಗೆ ನಾನು ಪ್ರಧಾನಿಗಳು ಮತ್ತು ಕೇಂದ್ರ ಸರಕಾರವನ್ನು ಅಭಿನಂದಿಸುತ್ತೇನೆ ಎಂದರು ಅವರು.

ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಅಧಿಕಾರ ನೀಡಿದ್ದರು:

ಇದಕ್ಕೂ ಎಕ್ಸ್ ಜಾಲತಾಣದಲ್ಲಿ ಮಸೂದೆ ಬಗ್ಗೆ ತಮ್ಮ ಸಂತಸ ವ್ಯಕ್ತಪಡಿಸಿದ್ದ ಮಾಜಿ ಮುಖ್ಯಮಂತ್ರಿಗಳು; ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಮಸೂದೆ ಲೋಕಸಭೆಯಲ್ಲಿ ಮಂಡನೆ ಆಗುತ್ತಿರುವುದನ್ನು ನಾನು ಮುಕ್ತವಾಗಿ ಸ್ವಾಗತಿಸುತ್ತೇನೆ ಎಂದಿದ್ದರು.

ದೇವೇಗೌಡರು ಪ್ರಧಾನಮಂತ್ರಿಗಳಾಗಿದ್ದ ಸಂದರ್ಭದಲ್ಲಿಯೇ 1996 ಸೆಪ್ಟೆಂಬರ್ 12ರಂದು ರಾಜ್ಯಸಭೆಯಲ್ಲಿ ಈ ಐತಿಹಾಸಿಕ ಬಿಲ್ ಅನ್ನು ಮಂಡಿಸಲಾಗಿತ್ತು. ಆದರೆ, ಅವರ ಸಂಯುಕ್ತರಂಗ ಸರಕಾರದ ಮೈತ್ರಿಕೂಟದ ಕೆಲ ಮಿತ್ರಪಕ್ಷಗಳೇ ತೀವ್ರ ವಿರೋಧ ವ್ಯಕ್ತಪಡಿಸಿದ ಕಾರಣಕ್ಕೆ ಆ ಮಸೂದೆ ಅಂಗೀಕಾರ ಆಗಲಿಲ್ಲ. ಇವತ್ತು ಕಾಂಗ್ರೆಸ್ಸಿನ I.N.D.I.A. ಮೈತ್ರಿಕೂಟವನ್ನು ಸೇರಿಕೊಂಡಿರುವ ನಾಯಕರೇ ಅಂದು ಈ ಮಸೂದೆಗೆ ತಡೆ ಒಡ್ಡಿದ್ದರು. 27 ವರ್ಷಗಳ ನಂತರ ಮಾನ್ಯ ದೇವೇಗೌಡರ ಕನಸಿಗೆ ಮರುಜೀವ ಬಂದಿರುವುದು ನನಗೆ ಸಂತೋಷ ಉಂಟು ಮಾಡಿದೆ ಎಂದು ಅವರು ಹೇಳಿದ್ದಾರೆ.

1995ರಲ್ಲಿ ಮಾನ್ಯ ದೇವೇಗೌಡರು ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದಾಗ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲು ನೀಡಿ, ಅಧಿಕಾರ ನಡೆಸುವ ಹಕ್ಕು ಕಲ್ಪಿಸಿ ಮಹಿಳಾ ಸಬಲೀಕರಣದ ಸುವರ್ಣ ಅಧ್ಯಾಯಕ್ಕೆ ನಾಂದಿ ಹಾಡಿದ್ದರು. ಅಂದು ನಮ್ಮ ರಾಜ್ಯದಲ್ಲಿ ಘಟಿಸಿದ ಈ ಕ್ರಾಂತಿಕಾರಿ ವಿದ್ಯಮಾನವನ್ನು ಇಡೀ ದೇಶವೇ ಬೆರಗು ಕಂಗಳಿಂದ ನೋಡಿತ್ತು. ಇಂದು ಮಹಿಳಾ ಮೀಸಲು ಮಸೂದೆ ಲೋಕಸಭೆಯಲ್ಲಿ ಅಂಗೀಕಾರ ಆಗುವುದು ಖಚಿತವಾಗಿದ್ದು, ಈ ಮೂಲಕ ಮಾಜಿ ಪ್ರಧಾನಿಗಳ ಕನಸು ನನಸಾಗುತ್ತಿದೆ ಎಂದು ಅವರು ಬರೆದಿದ್ದಾರೆ.

ಮಹಿಳೆಯರಿಗೆ ಸಮಾನ ಹಕ್ಕು, ಅವಕಾಶಗಳನ್ನು ಕಲ್ಪಿಸುವುದು ಇಂದಿನ ತುರ್ತು. ಮಾನ್ಯ ಪ್ರಧಾನಿಗಳಾದ ಮೋದಿ ಅವರು, ಮತ್ತವರ ಸಂಪುಟ ಕೈಗೊಂಡ ನಿರ್ಧಾರ ಶ್ಲಾಘನೀಯ. ರಾಜಕೀಯಕ್ಕೆ ಅತೀತವಾಗಿ ಈ ಮಸೂದೆಯನ್ನು ಎಲ್ಲಾ ಪಕ್ಷಗಳು ಬೆಂಬಲಿಸಬೇಕು ಎನ್ನುವುದು ನನ್ನ ಮನವಿ ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here