
HD Kumaraswamy | HDK says that he will not contest for Lok Sabha 2024 polls
ಚನ್ನಪಟ್ಟಣ/ರಾಮನಗರ:
ಯಾವುದೇ ಕಾರಣಕ್ಕೂ ಮುಂದಿನ ಲೋಕಸಭೆ HD Kumaraswamyಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಪಷ್ಟಪಡಿಸಿದರು.
ನಾನು ವಿಧಾನಸಭೆಯಲ್ಲಿ ಚನ್ನಪಟ್ಟಣದಿಂದ ಗೆದ್ದಿದ್ದೇನೆ. ಚನ್ನಪಟ್ಟಣದ ಜನರು ನನಗೆ ಆಶೀರ್ವಾದ ಮಾಡಿದ್ದಾರೆ. ಹೀಗಾಗಿ ನಾನು ಲೋಕಸಭೆಗೆ ಸ್ಪರ್ಧೆ ಮಾಡುವ ಪ್ರಶ್ನೆಯೇ ಇಲ್ಲ. ಅಂತಹ ಆಲೋಚನೆಯೂ ಇಲ್ಲ ಎಂದು ಅವರು ತಿಳಿಸಿದರು.
ಬಿಜೆಪಿ ಜತೆ ಮೈತ್ರಿ ಕುರಿತ ಚರ್ಚೆಗೆ ಗುರುವಾರ ದೆಹಲಿಗೆ ಹೋಗುತ್ತಿದ್ದೇನೆ. ಆ ಪಕ್ಷದ ಹೈಕಮಾಂಡ್ ನ ಕೆಲ ಉನ್ನತ ನಾಯಕರನ್ನು ಭೇಟಿ ಮಾಡುತ್ತೇನೆ. ಭೇಟಿ ಬಳಿಕ ಏನು ಚರ್ಚೆ ಆಗುತ್ತದೋ ನೋಡೊಣ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.