ಬೆಂಗಳೂರು:
ಮಂಡ್ಯ ಮೈಶುಗರ್ ಕಾರ್ಖಾನೆಯನ್ನು ಖಾಸಗಿಯವರಿಗೆ ವಹಿಸದೇ ಸರ್ಕಾರವೇ ಅದನ್ನು ಮುಂದುವರೆಸಬೇಕೆಂದು ಒತ್ತಾಯಿಸಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಮಂಡ್ಯ ಜನಪ್ರತಿನಿಧಿಗಳ ನಿಯೋಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರನ್ನು ಭೇಟಿ ಮಾಡಿ ಸೋಮವಾರ ಮನವಿ ಸಲ್ಲಿಸಿತು.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಭೇಟಿ ಮಾಡಿದ ಹೆಚ್.ಡಿ.ಕುಮಾರಸ್ವಾಮಿ ಮಂಡ್ಯ ಮೈಶುಗರ್ ಖಾರ್ಖಾನೆಯ ಸ್ಥಿತಿಗತಿ ಅದನ್ನು ಖಾಸಗಿಯವರಿಗೆ ವಹಿಸುವುದರಿಂದ ರೈತರಿಗೆ ಅನ್ಯಾಯವಾಗುತ್ತದೆ.ಮಂಡ್ಯದ ರೈತರು ಇದನ್ನು ನಂಬಿ ಬದುಕು ನಡೆಸುತ್ತಿದ್ದಾರೆ.ಹೀಗಾಗಿ ರೈತರಿಗೆ ಅನ್ಯಾಯವಾಗುವಂತಹ ಖಾಸಗೀಕರಣದ ನಿರ್ಧಾರ ಸರಿಯಲ್ಲ ಎಂದು ಸಿಎಂ ಜೊತೆ ಚರ್ಚಿಸಿದರು.
ಭೇಟಿ ಬಳಿಕ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಮೈಶುಗರ್ ಕಾರ್ಖಾನೆ ಖಾಸಗಿ ಪಾಲಾಗಲು ಅವಕಾಶ ಕೊಡದಂತೆ ಮನವಿ ಮಾಡಿದ್ದೇವೆ. ಖಾಸಗಿಯವರಿಗೆ ವಹಿಸುವ ಬದಲು ಸರ್ಕಾರದ ಸ್ವಾಮ್ಯದಲ್ಲೇ ಇರಬೇಕು ಎಂದು ಸಿಎಂಗೆ ಭೇಟಿ ಮಾಡಿ ಮನವಿ ಮಾಡಿದ್ದು, ಸಿಎಂ ಖಾಸಗಿಯವರಿಗೆ ನೀಡಲು ಒಪ್ಪಿಗೆ ಕೊಡುವುದಿಲ್ಲ ಭರವಸೆ ಕೊಟ್ಟಿದ್ದಾರೆ ಎಂದರು.