HD Kumaraswamy vows | Fast unto death if name of Ramanagara district is changed
ಬೆಂಗಳೂರು:
ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ಮಾಡಿದರೆ ನಾನು ಅಮರಣಾಂತ ಉಪವಾಸ ಸತ್ಯಾಗ್ರಹ ಮಾಡುತ್ತೇನೆ ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಪ್ರತಿಜ್ಞೆ ಮಾಡಿದ್ದಾರೆ.
ರಾಮನಗರ ಜಿಲ್ಲೆ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ನಗರದಲ್ಲಿ ಮಾತನಾಡಿದ ಕುಮಾರಸ್ವಾಮಿ, ನಾನು ಸವಾಲು ಸ್ವೀಕರಿಸುತ್ತೇನೆ. ನನ್ನ ಆರೋಗ್ಯ ಲೆಕ್ಕಿಸದೇ ಉಪವಾಸ ಸತ್ಯಾಗ್ರಹ ಮಾಡುತ್ತೇನೆ. ಡಿಕೆ ಶಿವಕುಮಾರ್ ಬೆಂಗಳೂರು ಮೂಲದವರಲ್ಲ. ಬೆಂಗಳೂರು ಇಡೀ ಕರ್ನಾಟಕ ರಾಜ್ಯದ ಭಾಗ. ಬೆಂಗಳೂರಿನ ಆರ್ಥಿಕ ಶಕ್ತಿ ಇಡೀ ಕರ್ನಾಟಕ ಅಭಿವೃದ್ಧಿಗೆ ಕಾರಣ ಎಂದು ವಾಗ್ದಾಳಿ ನಡೆಸಿದರು.
ಎಷ್ಟೆಲ್ಲಾ ಕೆರೆ-ಕಟ್ಟೆ ನುಂಗಿ ಹಾಕಿದ್ದೀರಾ? ಯಾವ್ ಯಾವ್ ಕೆರೆ ನುಂಗಿದ್ದೀರಾ ಪಟ್ಟಿ ಬೇಕಾ? ಯಾವ ಮುಖ ಇಟ್ಟುಕೊಂಡು ಕೆಂಪೇಗೌಡರ ಹೆಸರು ಹೇಳ್ತೀರಾ? ಈ ಬಗ್ಗೆ ಚರ್ಚೆ ನಡೆಸಲು ಪಾಪ ಅವರು ಬ್ಯುಸಿ ಇದ್ದಾರೆ. ಅವರು ಯಾವಾಗ ಬೇಕಾದರೂ ಸಮಯ ಫಿಕ್ಸ್ ಮಾಡಲಿ ಎಂದು ಡಿಕೆಶಿಗೆ ತಿರುಗೇಟು ನೀಡಿದರು.
