Home ಬೆಂಗಳೂರು ನಗರ ಗುತ್ತಿಗೆದಾರರ ಮನೆಗಳಲ್ಲಿ ಸಿಕ್ಕ ಹಣ ಯಾರದ್ದೆಂದು ಹೇಳದಿದ್ದರೆ ʼಶಿವʼ ಮೆಚ್ಚುತ್ತಾನೆಯೇ ಎಂದು ಟಾಂಗ್‌: ಡಿಸಿಎಂ ಡಿಕೆಶಿಗೆ...

ಗುತ್ತಿಗೆದಾರರ ಮನೆಗಳಲ್ಲಿ ಸಿಕ್ಕ ಹಣ ಯಾರದ್ದೆಂದು ಹೇಳದಿದ್ದರೆ ʼಶಿವʼ ಮೆಚ್ಚುತ್ತಾನೆಯೇ ಎಂದು ಟಾಂಗ್‌: ಡಿಸಿಎಂ ಡಿಕೆಶಿಗೆ ಟಾಂಗ್‌ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

18
0
HD Kumaraswamy's sarcastic reply to DCM DK Shivakumar | ``Shiva'' would appreciate it if he did not tell who the money found in the contractor's houses belonged to
Advertisement
bengaluru
  • ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಂಡನಂತೆ…, ಕಳ್ಳನ ಮನಸ್ಸು ಹುಳ್ಳುಳ್ಳಗೆ ಎಂದು ಕಿಡಿ

ಬೆಂಗಳೂರು:

ರಾಜ್ಯ ಕಾಂಗ್ರೆಸ್‌ ಸರಕಾರ ಪರ್ಸಂಟೇಜ್ ಪಟಾಲಂ ಎಂದು ಚಾಟಿ ಬೀಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಕುಮಾರಸ್ವಾಮಿ ಅವರೇನು ಆದಾಯ ತೆರಿಗೆ ಇಲಾಖೆಯ ಪ್ರತಿನಿಧಿಯೇ ಎಂದಿದ್ದಕ್ಕೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಂಡನಂತೆ…, ಕಳ್ಳನ ಮನಸ್ಸು ಹುಳ್ಳುಳ್ಳಗೆ… ಎನ್ನುವ ಈ ಗಾದೆಮಾತುಗಳು ಯಾರಿಗೆ ಅನ್ವಯ ಆಗುತ್ತವೋ ಇಲ್ಲವೋ ಗೊತ್ತಿಲ್ಲ. ಡಿಕೆ ಸಹೋದರರಿಗಂತೂ ಕರಾರುವಕ್ಕಾಗಿ ಅನ್ವಯಿಸುತ್ತವೆ ಎಂದು ಟಾಂಗ್‌ ನೀಡಿದ್ದಾರೆ.

“ಕುಮಾರಸ್ವಾಮಿ ಅವರು ಆದಾಯ ತೆರಿಗೆ ಇಲಾಖೆಯ ಪ್ರತಿನಿಧಿಯೇನೂ ಅಲ್ಲ” ಎಂದಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ಹತಾಶೆಯ ಹಳಹಳಿಕೆಯಷ್ಟೇ. ಗುತ್ತಿಗೆದಾರನ ಮನೆಯಲ್ಲಿ ಸಿಕ್ಕಿದ ಇಡುಗಂಟು ಡಿಕೆಶಿ ಅವರದ್ದು ಎಂದು ನಾನು ಹೇಳಿದ್ದೇನೆಯೇ? ನಗದು ಅಭಿವೃದ್ಧಿ ಇಲಾಖೆ ಎಂದರೆ ಅವರದ್ದೇನಾ? ಅವರು ತಿಹಾರ್‌ ಜೈಲಿನ ವಿಷಯವನ್ನೂ ಪ್ರಸ್ತಾಪ ಮಾಡಿದ್ದಾರೆ, ಸರಿ. ಆದರೆ, ತಿಹಾರಿಗೆ ಹೋಗುವ ಭಯ ಅಥವಾ ಗ್ಯಾರಂಟಿ ಸ್ವತಃ ಅವರಿಗೇ ಇದೆ ಎನ್ನುವುದು ನನ್ನ ಸ್ಪಷ್ಟ ಅನುಮಾನ. ಇಲ್ಲದಿದ್ದರೆ ಅವರು ಇಷ್ಟು ತೀವ್ರವಾಗಿ ನನ್ನ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡುವ ಅಗತ್ಯವಿರಲಿಲ್ಲ. ಅಂದಹಾಗೆ, ನಾನು ಐಟಿ ಪ್ರತಿನಿಧಿಯೂ ಅಲ್ಲ, ಈಡಿ ಉದ್ಯೋಗಿಯೂ ಅಲ್ಲ. ಒಬ್ಬ ಹುಲು ಮಾನವನಷ್ಟೇ.. ಕೆಲವರ ಭ್ರಮೆಗಳಿಗೆ ನಾನೇನು ಮಾಡಲಿ?‌ ಎಂದು ಅವರು ಕೇಳಿದ್ದಾರೆ.

bengaluru bengaluru

40% ಕಮೀಷನ್ ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದವರು ಇವರಲ್ಲವೇ? ಆದರೆ, ಇವರ ಪರ್ಸಂಟೇಜ್‌ ಬಗ್ಗೆಯೇ ಹೇಳಿದರೆ ಕೋಪ ಬರುತ್ತದೆ. ಗುತ್ತಿಗೆದಾರನ ಮನೆಯಲ್ಲಿ ಸಿಕ್ಕಿದ ಆ ಕಪ್ಪು ಹಣ ಯಾರದ್ದು? ಆ ಗುತ್ತಿಗೆದಾರ ಯಾರ ಪರಮಾಪ್ತ ಎನ್ನುವುದು ಜಗಜ್ಜಾಹೀರು. ಹೀಗಿದ್ದ ಮೇಲೆ ಸತ್ಯ ಮುಚ್ಚಿಟ್ಟರೆ ಶಿವ ಮೆಚ್ಟುತ್ತಾನೆಯೇ? ಎಂದು ಡಿಸಿಎಂ ಕಾಲೆಳೆದಿದ್ದಾರೆ ಅವರು.

ಮಾತೆತ್ತಿದರೆ ತನಿಖೆ, ಆಯೋಗ ಎಂದು ಜಪಿಸುವ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಈಗ ಗುತ್ತಿಗೆದಾರರ ಮನೆಗಳಲ್ಲಿ ಕಂತೆಕಂತೆಯಾಗಿ ಸಿಕ್ಕಿಬಿದ್ದಿರುವ ಕನಕ ಮಹಾಲಕ್ಷ್ಮೀ ಬಗ್ಗೆ ಸತ್ಯ ಹೇಳಬೇಕಲ್ಲವೇ? ಎಷ್ಟೇ ಆಗಲಿ, ಒಬ್ಬರು ಸಿದ್ದಪುರುಷರು! ಇನ್ನೊಬ್ಬರು ಸತ್ಯಪುರುಷರು!! ಸತ್ಯಕ್ಕೆ ಸಮಾಧಿ ಕಟ್ಟುವ ಬದಲು ತನಿಖೆ ಮಾಡಿಸಲಿ. ಅದು ಯಾವ ತನಿಖೆ ಎಂದು ಅವರೇ ಬಾಯಿ ಬಿಟ್ಟು ಹೇಳಲಿ ಎಂದು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದ್ದಾರೆ.


bengaluru

LEAVE A REPLY

Please enter your comment!
Please enter your name here