ಬೆಂಗಳೂರು:
ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರನ್ನು ಶನಿವಾರ ಸಂಜೆ ಭೇಟಿ ಮಾಡಿ ಆರೋಗ್ಯ ಮತ್ತು ಯೋಗಕ್ಷೇಮದ ಬಗ್ಗೆ ಕೇಂದ್ರ ಬಜೆಟ್ ಗಮನಹರಿಸಿದ್ದನ್ನು ಅಭಿನಂದಿಸಿದರು. ನಂತರ ಅವರು ಕರ್ನಾಟಕಕ್ಕೆ ಏಮ್ಸ್ ಮತ್ತು ಕಲ್ಯಾಣ ಕರ್ನಾಟಕಕ್ಕೆ ನಿಮ್ಹಾನ್ಸ್ನ ಉಪ ಕೇಂದ್ರ ಸ್ಥಾಪಿಸಿಲು ಸಹಾಯ ಕೋರಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
ಕೇಂದ್ರ ವಿತ್ತ ಸಚಿವೆ ಶ್ರೀಮತಿ @nsitharaman ಆವರನ್ನು ಇಂದು ಬೆಂಗಳೂರಿನಲ್ಲಿ ಭೇಟಿಯಾಗಿ ಆರೋಗ್ಯ ಕೇಂದ್ರಿತ ಬಜೆಟ್ ಮಂಡಿಸಿದ್ದಕ್ಕಾಗಿ ಅಭಿನಂದನೆ ಸಲ್ಲಿಸಲಾಯಿತು. ಕರ್ನಾಟಕಕ್ಕೆ ಏಮ್ಸ್ ಸಂಸ್ಥೆ ತರಲು ಮತ್ತು ಕಲ್ಯಾಣ ಕರ್ನಾಟಕದಲ್ಲಿ ನಿಮ್ಹಾನ್ಸ್ ನ ಪ್ರಾದೇಶಿಕ ಕೇಂದ್ರ ಸ್ಥಾಪಿಸಲು ನೆರವು ಕೋರಲಾಯಿತು. (1/3) pic.twitter.com/PWkdugFppX
— Dr Sudhakar K (@mla_sudhakar) February 20, 2021
ರಸ್ತೆ ಅಪಘಾತಗಳಿಂದ ಉಂಟಾಗುವ ಪ್ರಾಣ ಹಾನಿಯನ್ನು ತಗ್ಗಿಸಲು ರಾಷ್ಟ್ರೀಯ ಹೆದ್ದಾರಿಗಳಿಗೆ ಹೊಂದಿಕೊಂಡಂತೆ 4 ಕಡೆ ಸುಸಜ್ಜಿತ ಟ್ರಾಮಾ ಕೇರ್ ಸೆಂಟರ್ ಗಳನ್ನು ಸ್ಥಾಪಿಸುವ ಹಾಗೂ ಕ್ಯಾನ್ಸರ್, ಕಿಡ್ನಿ, ಹೃದ್ರೋಗಳಿಗೆ ಚಿಕಿತ್ಸೆ ಒದಗಿಸಲು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನೊಳಗೊಂಡ ಹೆಲ್ತ್ ಸಿಟಿ ನಿರ್ಮಿಸುವ ಕುರಿತಂತೆ ಚರ್ಚಿಸಲಾಯಿತು. (2/3) pic.twitter.com/WZUcPja5mE
— Dr Sudhakar K (@mla_sudhakar) February 20, 2021
ಮಳೆಯಾಶ್ರಿತ ಜಿಲ್ಲೆಗಳಾದ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ ನೀರಾವರಿ ವ್ಯವಸ್ಥೆ ಕಲ್ಪಿಸಲು ಹಾಗೂ ಕೋಚಿಮುಲ್ ಮತ್ತು ಡಿಸಿಸಿ ಬ್ಯಾಂಕ್ ವಿಭಜನೆ ಮಾಡಲು ಕೇಂದ್ರ ಸರ್ಕಾರದ ಸಹಕಾರ ಕೋರಲಾಯಿತು. (3/3)@FinMinIndia @nsitharamanoffc pic.twitter.com/JAAYYi3bKj
— Dr Sudhakar K (@mla_sudhakar) February 20, 2021