Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • ಆರೋಗ್ಯಕರ ಬೆಂಗಳೂರು: ಸಾರ್ವಜನಿಕರಿಂದ ಬಂದಂತಹ 8059 ಸಲಹೆಗಳ ಅಧ್ಯಯನ: ಬಿಬಿಎಂಪಿ ವಿಶೇಷ ಆಯುಕ್ತ (ಆರೋಗ್ಯ) ಡಾ. ಕೆ.ವಿ ತ್ರಿಲೋಕ್ ಚಂದ್ರ
  • ಬೆಂಗಳೂರು ನಗರ

ಆರೋಗ್ಯಕರ ಬೆಂಗಳೂರು: ಸಾರ್ವಜನಿಕರಿಂದ ಬಂದಂತಹ 8059 ಸಲಹೆಗಳ ಅಧ್ಯಯನ: ಬಿಬಿಎಂಪಿ ವಿಶೇಷ ಆಯುಕ್ತ (ಆರೋಗ್ಯ) ಡಾ. ಕೆ.ವಿ ತ್ರಿಲೋಕ್ ಚಂದ್ರ

Vighnesh Pawar September 14, 2023 6:30 PM 1 minute read
Healthy Bengaluru: BBMP Received 8059 suggestions from public: Special Commissioner (Health) Dr. KV Trilok Chandra

Healthy Bengaluru: BBMP Received 8059 suggestions from public: Special Commissioner (Health) Dr. KV Trilok Chandra

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿ “ಆರೋಗ್ಯಕರ ಬೆಂಗಳೂರು” ವಿಷಯಕ್ಕೆ ಸಂಬಂಧಿಸಿದ ವಿಚಾರ ಸಂಕಿರಣ

ಬೆಂಗಳೂರು:

ನಗರದ ನಾಗರಿಕರಿಗೆ ಅತ್ಯತ್ತುಮ ಆರೋಗ್ಯ ಸೇವೆ ಕಲ್ಪಿಸುವ ನಿಟ್ಟಿನಲ್ಲಿ ಸೂಕ್ತ ರೀತಿಯ ಯೋಜನೆಗಳನ್ನು ಜಾರಿಗೊಳಿಸಿ ಅದನ್ನು ಅನುಷ್ಠಾನಕ್ಕೆ ತರಬೇಕೆಂದು ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಹಾಗೂ ಆರೋಗ್ಯಕರ ಬೆಂಗಳೂರಿನ ನೋಡಲ್ ಅಧಿಕಾರಿಯಾದ ಡಾ. ಕೆ.ವಿ ತ್ರಿಲೋಕ್ ಚಂದ್ರ ರವರು ತಿಳಿಸಿದರು.

ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿ “ಆರೋಗ್ಯಕರ ಬೆಂಗಳೂರು” ವಿಷಯಕ್ಕೆ ಸಂಬಂಧಿಸಿದಂತೆ ವಿಕ್ಟೋರಿಯಾ ಆಸ್ಪತ್ರೆಯ PMSSY(ಪ್ರಧಾನ ಮಂತ್ರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ) ಆಡಿಟೋರಿಯಂನಲ್ಲಿ ನಡೆದ ವಿಚಾರ ಸಂಕಿರಣವನ್ನು ಉದ್ದೇಶಿಸಿ ಮಾತನಾಡಿದ ಅವರು, ಭಾರತೀಯ ವಿಜ್ಞಾನ ಸಂಸ್ಥೆಯ ಆರ್ಟ್ ಪಾರ್ಕ್ ನ ಪಾಲುದಾರಿಕೆಯಲ್ಲಿ ಆರೋಗ್ಯಕರ ಬೆಂಗಳೂರಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಬಂದಂತಹ ಸುಮಾರು 10,478 ಸಲಹೆಗಳನ್ನು ಅಧ್ಯಯನ ನಡೆಸಿ ಒಂದೇ ರೀತಿಯ ಸಲಹೆಗಳನ್ನು ತೆಗೆದ ನಂತರ ಒಟ್ಟಾರೆ 8059 ಸಲಹೆ/ಅಭಿಪ್ರಾಯಗಳನ್ನು ಬೇರೆ ಬೇರೆ ವರ್ಗಗಳಾಗಿ ವಿಂಗಡಿಸಿ ವರದಿಯನ್ನು ಸಿದ್ದಪಡಿಸಲಾಗಿದ್ದು, ಅಂತಿಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಬೆಂಗಳೂರಿನಲ್ಲಿರುವ ನಾಗರಿಕರಿಗೆ ಸುಲಭವಾಗಿ ಆರೋಗ್ಯ ಸೇವೆ ಪಡೆಯಲು ಮತ್ತು ಅತ್ಯಂತ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆಯನ್ನು ಹೊಂದುವ ಹಾಗೆ ಮಾಡಬೇಕು. ಹೆಚ್ಚು ಸುರಕ್ಷಿತ ಮತ್ತು ಆರೋಗ್ಯಕರ ನಗರವನ್ನು ಸ್ಥಾಪಿಸುವ ಸಲುವಾಗಿ ನಾವು ಸೂಕ್ತ‌ ಕ್ರಮಗಳನ್ನು ಕೈಗೊಳ್ಳಬೆಕಿದೆ ಎಂದರು.

ಜನರ ಆರೋಗ್ಯದ ಜೊತೆಗೆ ಪ್ರಾಣಿಗಳ ಆರೋಗ್ಯವೂ ಕೂಡ ಅಷ್ಟೇ ಪ್ರಾಮುಖ್ಯತೆಯನ್ನು ಹೊಂದಿದ್ದು, ಎಲ್ಲಾ ರೀತಿಯ ವೈದ್ಯಕೀಯ ವ್ಯವಸ್ಥೆಯನ್ನು ಬಲಪಡಿಸಬೇಕು. ಸಾರ್ವಜನಿಕ ಆರೋಗ್ಯದ ವಿಚಾರವಾಗಿ ಕೋವಿಡ್ ನಂತಹ ತುರ್ತು ರೋಗಗಳನ್ನು ನಾವು ಎದುರಿಸುವ ನಿಟ್ಟಿನಲ್ಲಿ ಆರೋಗ್ಯ ಸೇವೆಯನ್ನು ಬಲಪಡಿಸಿಕೊಳ್ಳಬೇಕು ಎಂದು ಹೇಳಿದರು

WhatsApp Image 2023 09 14 at 10.23.51 PM

ಪ್ರಾಥಮಿಕ ಆರೋಗ್ಯ ಘಟಕದಿಂದ ತೃತೀಯ ಸೇವೆ ನೀಡುತ್ತಿರುವ ಪ್ರಮುಖ ಆಸ್ಪತ್ರೆಗಳಿಗೆ ಇರುವ ಅಂತರವನ್ನು ಕಡಿಮೆ ಮಾಡಿ‌ ನಾಗರಿಕರಿಗೆ ಸುಲಭ ರೀತಿಯಲ್ಲಿ ಆರೋಗ್ಯ ಸೇವೆ ಸಿಗುವಂತೆ ಮಾಡಬೇಕೆಂದು ಹೇಳಿದರು.

ಪಾಲಿಕೆ ವ್ಯಾಪ್ತಿಯಲ್ಲಿರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಹೆರಿಗೆ ಆಸ್ಪತ್ರೆಗಳಲ್ಲಿ ಇನ್ನೂ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಬೇಕು. ನಗರದಲ್ಲಿ 232 ನಮ್ಮ ಕ್ಲಿನಿಕ್‌ಗಳು ಕಾರ್ಯನಿರ್ವಹಿಸುತ್ತಿದ್ದು, ನಾವು ಅದನ್ನು ಮತ್ತಷ್ಟು ಬಲಪಡಿಸಲು ಮತ್ತು ಕೆಲಸದ ಸಮಯವನ್ನು ಹೆಚ್ಚಿಸುವ ಉದ್ದೇಶದಿಂದ ಈಗಾಗಲೇ ಕೆಲ ಕ್ಲಿನಿಕ್ ಗಳಲ್ಲಿ 8 ರಿಂದ 8 ರವರೆಗೆ ತೆರೆಯಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಕ್ಲಿನಿಕ್ ಗಳನ್ನು ಸಮಯವನ್ನು ವಿಸ್ತರಿಸಲಾಗುವುದು ಎಂದು ತಿಳಿಸಿದರು.

ಆರೋಗ್ಯ ಬೆಂಗಳೂರಿನ ಪ್ರಮುಖ ದ್ಯೇಯ:

  • ಆರೋಗ್ಯ ಸೇವೆಯಲ್ಲಿ ಹೂಡಿಕೆಯನ್ನು ಹೆಚ್ಚಿಸುವುದು.
  • ತುರ್ತು ಆರೋಗ್ಯ ಸೇವೆಗಳ ವ್ಯವಸ್ಥೆ.
  • CSR ಪಾಲುದಾರರೊಂದಿಗೆ ಸಹಯೋಗ ಹೊಂದುವುದು.
  • ಬೆಂಗಳೂರು ಆರೋಗ್ಯ ವ್ಯವಸ್ಥೆ ಜಾರಿಗೊಳಿಸುವುದು.
  • ಒಂದು ಆರೋಗ್ಯ ವಿಧಾನ ಜಾರಿಗೊಳಿಸುವುದು.
  • ವಾರ್ ರೂಮ್ ಮತ್ತು ಕಣ್ಗಾವಲು ವ್ಯವಸ್ಥೆಗಳ ವ್ಯವಸ್ಥೆ.
  • ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪ್ರಯೋಗಾಲಯ ಸೇವೆಗಳನ್ನು ಹೆಚ್ಚಿಸುವುದು.
  • ಬೆಂಗಳೂರಿಗೆ ಆಂಟಿಮೈಕ್ರೊಬಿಯಲ್ ನೀತಿ ಜಾರಿತರುವುದು.
  • ಹವಾಮಾನಕ್ಕನುಗುಣವಾಗಿ ಆರೋಗ್ಯ ವ್ಯವಸ್ಥೆ
  • ಬೆಂಗಳೂರಿನಲ್ಲಿ ಪಶುವೈದ್ಯಕೀಯ ಆರೈಕೆ ವ್ಯವಸ್ಥೆ.
  • ಮಾಹಿತಿ ತಂತ್ರಜ್ಞಾನವನ್ನು ಬಳಸಿಕೊಂಡು ಜನರಿಗೆ ಮನೆಯಲ್ಲಿಯೇ ಚಿಕಿತ್ಸೆಗೆ ಸಂಬಂಧಪಟ್ಟಂತಹ ಸಮಾಲೋಚನೆ ನಡೆಸುವ ವ್ಯವಸ್ಥೆಯನ್ನು ಜಾರಿಗೊಳಿಸುವುದು.

ಈ ವೇಳೆ ಮುಖ್ಯ ಆರೋಗ್ಯಾಧಿಕಾರಿಗಳಾದ ಡಾ. ಬಾಲಸುಂದರ್, ಡಾ. ನಿರ್ಮಲಾ ಬುಗ್ಗಿ, ಭಾರತೀಯ ವಿಜ್ಞಾನ ಸಂಸ್ಥೆಯ ಆರ್ಟ್ ಪಾರ್ಕ್ ನ ಆರೋಗ್ಯ ನಿರ್ದೇಶಕ ಡಾ. ಭಾಸ್ಕರ್ ರಾಜ್ ಕುಮಾರ್, ಎಲ್ಲಾ ವಲಯ ಆರೋಗ್ಯಾಧಿಕಾರಿಗಳು, ಆರೋಗ್ಯ ತಜ್ಞರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

About the Author

Vighnesh Pawar

Subscriber

View All Posts

Post navigation

Previous: Karnataka CM Siddaramaiah: ಗಡಿಗಳಲ್ಲಿ ತೀವ್ರ ನಿಗಾ ವಹಿಸಿ ಅಕ್ರಮ ಮದ್ಯ ನುಸುಳುವಿಕೆ ತಪ್ಪಿಸಿ: ಅಬಕಾರಿ ಅಧಿಕಾರಿಗಳಿಗೆ ಸಿಎಂ ಸೂಚನೆ
Next: Cauvery Water to Tamil Nadu: ಆದೇಶ ಪುನರ್ ಪರಿಶೀಲಿಸಲು ಕಾವೇರಿ ಪ್ರಾಧಿಕಾರಕ್ಕೆ ನಿರ್ದೇಶನ ನೀಡುವಂತೆ ಕೇಂದ್ರ ಜಲಶಕ್ತಿ ಸಚಿವರಿಗೆ ಡಿಸಿಎಂ ಮನವಿ ಪತ್ರ ಸಲ್ಲಿಕೆ

Related Stories

ಪತ್ರಿಕಾಗೋಷ್ಠಿಯಲ್ಲಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನ ಐದು ನಗರ ಪಾಲಿಕೆಗಳ ಸುಮಾರು 24 ಲಕ್ಷ ಆಸ್ತಿ ಮಾಲೀಕರಿಗೆ ವಾಟ್ಸಾಪ್‌ನಲ್ಲಿ ಉಚಿತ ಇ-ಖಾತಾ ವಿತರಣೆ: ಜಿಬಿಎ

The Bengaluru Live November 17, 2026 8:24 PM
ಪತ್ರಿಕಾಗೋಷ್ಠಿಯಲ್ಲಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಜಕ್ಕೂರು ರೈಲ್ವೆ ಮೇಲ್ಸೇತುವೆ, ಗೆದ್ದಲಹಳ್ಳಿ ರೈಲ್ವೆ ವೆಂಟ್ ಉದ್ಘಾಟನೆ; ₹436 ಕೋಟಿ ವೆಚ್ಚದ ಐಓಸಿ ಜಂಕ್ಷನ್ ರೋಟರಿ ಮೇಲ್ಸೇತುವೆಗೆ ನ.18ರಂದು ಶಂಕುಸ್ಥಾಪನೆ

The Bengaluru Live November 17, 2026 8:21 PM
ಬೆಂಗಳೂರಿನ ಕರ್ನಾಟಕ ಲೋಕಾಯುಕ್ತ ಕಚೇರಿಯ ಕಮಾನು ಪ್ರವೇಶದ್ವಾರ
  • ಬೆಂಗಳೂರು ನಗರ

ತಲಘಟ್ಟಪುರ ಕೆರೆ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳದ ಅಧಿಕಾರಿಗಳ ಬಗ್ಗೆ ಲೋಕಾಯುಕ್ತ ಅಸಮಾಧಾನ; ದಕ್ಷಿಣ ನಗರ ಪಾಲಿಕೆಗೆ ಮತ್ತೊಂದು ಅವಕಾಶ

The Bengaluru Live November 17, 2026 6:07 PM

Latest Post

ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ ಬೆಂಗಳೂರಿನಲ್ಲಿ ಗೋಲ್ಡನ್ ಅಂಬೇಡ್ಕರ್ ಫೌಂಡೇಷನ್ ಸನ್ಮಾನ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿರುವವರು
  • ಕರ್ನಾಟಕ

ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ

November 17, 2026 11:59 PM
ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರೊಂದಿಗೆ ಜಿಲ್ಲಾವಾರು ಕಾರ್ಯಕ್ರಮ ಪರಿಶೀಲಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್: ನಿಗದಿತ ಸಮಯದಲ್ಲಿ ಅನುಷ್ಠಾನಕ್ಕೆ ಸೂಚನೆ ಬೆಂಗಳೂರಿನ ಆರೋಗ್ಯ ಸೌಧದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡುತ್ತಿರುವ ಆರೋಗ್ಯ ಸಚಿವರು
  • ಕರ್ನಾಟಕ

ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರೊಂದಿಗೆ ಜಿಲ್ಲಾವಾರು ಕಾರ್ಯಕ್ರಮ ಪರಿಶೀಲಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್: ನಿಗದಿತ ಸಮಯದಲ್ಲಿ ಅನುಷ್ಠಾನಕ್ಕೆ ಸೂಚನೆ

November 17, 2026 11:02 PM
ಬೈಕಂಪಾಡಿಯ ಬೋಲಾಸ್ ಆಗ್ರೋದಿಂದ 1,240 ಕೆ.ಜಿ ಅಡುಗೆ ಎಣ್ಣೆ ವಶ: ಹಸಿ ಕಡಲೆಕಾಯಿ ಎಣ್ಣೆಯನ್ನು ‘ಕೋಲ್ಡ್ ಪ್ರೆಸ್ಡ್’ ಎಂದು ಮರುಪ್ಯಾಕ್ ಬೈಕಂಪಾಡಿಯ ಸಂಗ್ರಹಾಗಾರದಲ್ಲಿ ವಶಪಡಿಸಿಕೊಂಡ ಅಡುಗೆ ಎಣ್ಣೆಯ ಕ್ಯಾನ್‌ಗಳ ರಾಶಿ
  • ಕರ್ನಾಟಕ

ಬೈಕಂಪಾಡಿಯ ಬೋಲಾಸ್ ಆಗ್ರೋದಿಂದ 1,240 ಕೆ.ಜಿ ಅಡುಗೆ ಎಣ್ಣೆ ವಶ: ಹಸಿ ಕಡಲೆಕಾಯಿ ಎಣ್ಣೆಯನ್ನು ‘ಕೋಲ್ಡ್ ಪ್ರೆಸ್ಡ್’ ಎಂದು ಮರುಪ್ಯಾಕ್

November 17, 2026 11:02 PM
ಕರ್ನಾಟಕ ಇಸ್ರೇಲ್ ಸಹಭಾಗಿತ್ವ: ಕ್ವಾಂಟಮ್, ಜಲ ನಿರ್ವಹಣೆ ಸಂಶೋಧನೆಗೆ ಆಸಕ್ತಿ; ಕ್ವಾಂಟಮ್ ಸಿಟಿ, ಕ್ವಾಂಟಮ್ ಇಂಡಿಯಾ ಬೆಂಗಳೂರು 2027ಕ್ಕೆ ಇಸ್ರೇಲ್ ಕಂಪನಿಗಳಿಗೆ ಆಹ್ವಾನ ಬೆಂಗಳೂರು ಟೆಕ್ ಸಮ್ಮಿಟ್ 2026ರ ಮಳಿಗೆಯಲ್ಲಿ ಕರ್ನಾಟಕದ ಅಧಿಕಾರಿಗಳು ಮತ್ತು ಇಸ್ರೇಲ್ ಪ್ರತಿನಿಧಿಗಳ ಗುಂಪು ಚಿತ್ರ
  • ಕರ್ನಾಟಕ

ಕರ್ನಾಟಕ ಇಸ್ರೇಲ್ ಸಹಭಾಗಿತ್ವ: ಕ್ವಾಂಟಮ್, ಜಲ ನಿರ್ವಹಣೆ ಸಂಶೋಧನೆಗೆ ಆಸಕ್ತಿ; ಕ್ವಾಂಟಮ್ ಸಿಟಿ, ಕ್ವಾಂಟಮ್ ಇಂಡಿಯಾ ಬೆಂಗಳೂರು 2027ಕ್ಕೆ ಇಸ್ರೇಲ್ ಕಂಪನಿಗಳಿಗೆ ಆಹ್ವಾನ

November 17, 2026 10:57 PM
ಬೆಳಗಾವಿ ಲೋಕಾಯುಕ್ತ ಬಲೆಗೆ ಸಹಾಯಕ ಆಯುಕ್ತರ ಕಚೇರಿ ಗುಮಾಸ್ತ ಪದ್ಮಾಕರ ಪಾಟೀಲ: ಕಾನೂನು ವಿದ್ಯಾರ್ಥಿಯಿಂದ ₹2,000 ಲಂಚ ಸ್ವೀಕಾರ, 38 ಪ್ರಕರಣಗಳಿಗೆ ₹30,000 ಬೇಡಿಕೆ ಬೆಂಗಳೂರಿನ ಕರ್ನಾಟಕ ಲೋಕಾಯುಕ್ತ ಕಚೇರಿಯ ಕಮಾನು ಪ್ರವೇಶದ್ವಾರ
  • ಕರ್ನಾಟಕ

ಬೆಳಗಾವಿ ಲೋಕಾಯುಕ್ತ ಬಲೆಗೆ ಸಹಾಯಕ ಆಯುಕ್ತರ ಕಚೇರಿ ಗುಮಾಸ್ತ ಪದ್ಮಾಕರ ಪಾಟೀಲ: ಕಾನೂನು ವಿದ್ಯಾರ್ಥಿಯಿಂದ ₹2,000 ಲಂಚ ಸ್ವೀಕಾರ, 38 ಪ್ರಕರಣಗಳಿಗೆ ₹30,000 ಬೇಡಿಕೆ

November 17, 2026 10:49 PM
ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆ: 31 ಜಿಲ್ಲೆಗಳ 15,000 ಕಿ.ಮೀ. ರಸ್ತೆಗೆ ₹10,000 ಕೋಟಿ; 15 ತಿಂಗಳಲ್ಲಿ ಕಾಮಗಾರಿ ಪೂರ್ಣ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆ: 31 ಜಿಲ್ಲೆಗಳ 15,000 ಕಿ.ಮೀ. ರಸ್ತೆಗೆ ₹10,000 ಕೋಟಿ; 15 ತಿಂಗಳಲ್ಲಿ ಕಾಮಗಾರಿ ಪೂರ್ಣ

November 17, 2026 8:49 PM

ನೀವು ತಪ್ಪಿಸಿಕೊಂಡಿರಬಹುದು

ಬೆಂಗಳೂರಿನಲ್ಲಿ ಗೋಲ್ಡನ್ ಅಂಬೇಡ್ಕರ್ ಫೌಂಡೇಷನ್ ಸನ್ಮಾನ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿರುವವರು
  • ಕರ್ನಾಟಕ

ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ

The Bengaluru Live November 17, 2026 11:59 PM
ಬೆಂಗಳೂರಿನ ಆರೋಗ್ಯ ಸೌಧದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡುತ್ತಿರುವ ಆರೋಗ್ಯ ಸಚಿವರು
  • ಕರ್ನಾಟಕ

ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರೊಂದಿಗೆ ಜಿಲ್ಲಾವಾರು ಕಾರ್ಯಕ್ರಮ ಪರಿಶೀಲಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್: ನಿಗದಿತ ಸಮಯದಲ್ಲಿ ಅನುಷ್ಠಾನಕ್ಕೆ ಸೂಚನೆ

The Bengaluru Live November 17, 2026 11:02 PM
ಬೈಕಂಪಾಡಿಯ ಸಂಗ್ರಹಾಗಾರದಲ್ಲಿ ವಶಪಡಿಸಿಕೊಂಡ ಅಡುಗೆ ಎಣ್ಣೆಯ ಕ್ಯಾನ್‌ಗಳ ರಾಶಿ
  • ಕರ್ನಾಟಕ

ಬೈಕಂಪಾಡಿಯ ಬೋಲಾಸ್ ಆಗ್ರೋದಿಂದ 1,240 ಕೆ.ಜಿ ಅಡುಗೆ ಎಣ್ಣೆ ವಶ: ಹಸಿ ಕಡಲೆಕಾಯಿ ಎಣ್ಣೆಯನ್ನು ‘ಕೋಲ್ಡ್ ಪ್ರೆಸ್ಡ್’ ಎಂದು ಮರುಪ್ಯಾಕ್

The Bengaluru Live November 17, 2026 11:02 PM
ಬೆಂಗಳೂರು ಟೆಕ್ ಸಮ್ಮಿಟ್ 2026ರ ಮಳಿಗೆಯಲ್ಲಿ ಕರ್ನಾಟಕದ ಅಧಿಕಾರಿಗಳು ಮತ್ತು ಇಸ್ರೇಲ್ ಪ್ರತಿನಿಧಿಗಳ ಗುಂಪು ಚಿತ್ರ
  • ಕರ್ನಾಟಕ

ಕರ್ನಾಟಕ ಇಸ್ರೇಲ್ ಸಹಭಾಗಿತ್ವ: ಕ್ವಾಂಟಮ್, ಜಲ ನಿರ್ವಹಣೆ ಸಂಶೋಧನೆಗೆ ಆಸಕ್ತಿ; ಕ್ವಾಂಟಮ್ ಸಿಟಿ, ಕ್ವಾಂಟಮ್ ಇಂಡಿಯಾ ಬೆಂಗಳೂರು 2027ಕ್ಕೆ ಇಸ್ರೇಲ್ ಕಂಪನಿಗಳಿಗೆ ಆಹ್ವಾನ

The Bengaluru Live November 17, 2026 10:57 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ
  • ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರೊಂದಿಗೆ ಜಿಲ್ಲಾವಾರು ಕಾರ್ಯಕ್ರಮ ಪರಿಶೀಲಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್: ನಿಗದಿತ ಸಮಯದಲ್ಲಿ ಅನುಷ್ಠಾನಕ್ಕೆ ಸೂಚನೆ
  • ಬೈಕಂಪಾಡಿಯ ಬೋಲಾಸ್ ಆಗ್ರೋದಿಂದ 1,240 ಕೆ.ಜಿ ಅಡುಗೆ ಎಣ್ಣೆ ವಶ: ಹಸಿ ಕಡಲೆಕಾಯಿ ಎಣ್ಣೆಯನ್ನು ‘ಕೋಲ್ಡ್ ಪ್ರೆಸ್ಡ್’ ಎಂದು ಮರುಪ್ಯಾಕ್
  • ಕರ್ನಾಟಕ ಇಸ್ರೇಲ್ ಸಹಭಾಗಿತ್ವ: ಕ್ವಾಂಟಮ್, ಜಲ ನಿರ್ವಹಣೆ ಸಂಶೋಧನೆಗೆ ಆಸಕ್ತಿ; ಕ್ವಾಂಟಮ್ ಸಿಟಿ, ಕ್ವಾಂಟಮ್ ಇಂಡಿಯಾ ಬೆಂಗಳೂರು 2027ಕ್ಕೆ ಇಸ್ರೇಲ್ ಕಂಪನಿಗಳಿಗೆ ಆಹ್ವಾನ
©Copyright 2025 The Bengaluru Live All rights reserved. | MoreNews by AF themes.