ಬೆಂಗಳೂರು: ರಾತ್ರಿ ಸುರಿದ ಮಳೆಯಿಂದ ಬೆಂಗಳೂರಿನ ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಏರ್ಪೋರ್ಟ್ ರಸ್ತೆಯ ಹೆಣ್ಣೂರು ಬಂಡೆ ಬಳಿ ರಸ್ತೆ ಸಂಪೂರ್ಣ ಜಲಾವೃತಗೊಂಡಿದ್ದು ಕೆರೆಯಂತಾಗಿದೆ. ಈ ಹಿನ್ನೆಲೆ ಸಂಚಾರಕ್ಕೆ ತೊಡಕು ಉಂಟಾಗಿದೆ. ಹೆಣ್ಣೂರು-ಬಾಗಲೂರು ಮುಖ್ಯರಸ್ತೆಯಲ್ಲಿ ಟ್ರಾಫಿಕ್ ಸಾಧ್ಯತೆ.
Gruhalakshmi Scheme: ಗೃಹಲಕ್ಷ್ಮೀ ಯೋಜನೆ ಬಗ್ಗೆ ಅಪಸ್ವರ: ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರಿನಲ್ಲಿ ನಿನ್ನೆ ಸುರಿದ ಧಾರಾಕಾರ ಮಳೆಯಿಂದ ಅರಮನೆ ರಸ್ತೆಯ ಲೀ ಮೆರಿಡಿಯನ್ ಅಂಡರ್ಪಾಸ್ ಜಲಾವೃತಗೊಂಡಿದೆ. ಅಂಡರ್ಪಾಸ್ ಬಳಿ ವಾಹನ ಓಡಾಡದಂತೆ ಬ್ಯಾರಿಕೇಡ್ ಹಾಕಿ ಕ್ಲೋಸ್ ಮಾಡಲಾಗಿದೆ. ಇತ್ತೀಚಿಗಷ್ಟೇ ಲಕ್ಷಾಂತರ ವೆಚ್ಚದಲ್ಲಿ ಅಂಡರ್ಪಾಸ್ ನಿರ್ಮಿಸಲಾಗಿತ್ತು. ನಿನ್ನೆ ಸಂಜೆ ಸುರಿದ ಮಳೆಯಿಂದ ನೀರು ನುಗ್ಗಿ ಅವಾಂತರವಾಗಿದೆ. ಬಿಬಿಎಂಪಿ ಕಳಪೆ ಕಾಮಗಾರಿ ಮತ್ತೊಮ್ಮೆ ಬಟಾಬಯಲಾಗಿದೆ.
The post Heavy Rainfall: ಬೆಂಗಳೂರಲ್ಲಿ ಸುರಿದ ಭಾರೀ ಮಳೆ: ಏರ್ಪೋರ್ಟ್ ರಸ್ತೆಯ ಹೆಣ್ಣೂರು ಬಂಡೆ ಬಳಿ ಕೆರೆಯಂತಾದ ರಸ್ತೆ! appeared first on Ain Live News.