ಬೆಂಗಳೂರು:
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇರಳ ಮುಖ್ಯಮಂತ್ರಿ ಪಿನರಾಯಿ ವಿಜಯನ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಅಲ್ಲಿ ಪ್ರವಾಹ ಮತ್ತು ಭೂಕುಸಿತ ದಿಂದ ಸಂಭವಿಸಿರುವ ಹಾನಿಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದರು.
ಕೇರಳದಲ್ಲಿ ಪ್ರವಾಹ ಪರಿಹಾರ ಕಾರ್ಯಾಚರಣೆಗೆ ಎಲ್ಲ ರೀತಿಯಿಂದಲೂ ಸಹಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.
Spoke to Kerala CM @vijayanpinarayi & expressed deep grief over the loss of lives due to heavy rains & landslides.I have asked the Chief Secretary to be touch with Kerala Chief Secretary for all support in relief & rehabilitation.Our Prayers are with Kerala in this hour of crisis
— Basavaraj S Bommai (@BSBommai) October 20, 2021
ಈ ಬಗ್ಗೆ ಕೇರಳ ಸರ್ಕಾರದ ಮುಖ್ಯ ಕಾರ್ಯದರ್ಶಿಯವರೊಂದಿಗೆ ಸಂಪರ್ಕದಲ್ಲಿದ್ದು ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ ತಿಳಿಸಿದ್ದಾರೆ. ಕೇರಳ ಜನರ ಸುರಕ್ಷತೆಗಾಗಿ ಪ್ರಾರ್ಥಿಸು ವುದಾಗಿ ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ತಿಳಿಸಿದ್ದಾರೆ.