ಚಿಕ್ಕಬಳ್ಳಾಪುರದಲ್ಲಿ ಭಾರಿ ಮಳೆ
ಚಿಕ್ಕಬಳ್ಳಾಫುರ:
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆಯಿಂದ ತಾಲೂಕಿನ ಪ್ರಸಿದ್ದ ನಂದಿ ಗಿರಿಧಾಮದ ಗುಡ್ಡಗಳು ಕುಸಿದಿದ್ದು, ಅನೇಕ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಜನರು ಭಾದೆ ಪಡುವಂತಾಗಿದೆ.
ಧಾರಕಾರ ಮಳೆಗೆ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗಿರಿಧಾಮದ ಕೆಲವು ಗುಡ್ಡಗಳು ಕುಸಿದಿವೆ. ರಂಗಪ್ಪ ವೃತ್ತದ ಬಳಿ ಗುಡ್ಡ ಕುಸಿದು ಗಿರಿಧಾಮದ ರಸ್ತೆ ಬಂದ್ ಆಗಿದೆ. ಹೀಗಾಗಿ ನಂದಿ ಬೆಟ್ಟಕ್ಕೆ ಬರುತ್ತಿರುವ ಪ್ರವಾಸಿಗರು ಬೇರೆದಾರಿ ಕಾಣದೆ ವಾಪಸ್ ಹೋಗುತ್ತಿದ್ದಾರೆ.
Read Here: Landslide cuts access to Nandi Hills
ಚಿಕ್ಕಬಳ್ಳಾಪುದಲ್ಲೂ ನಿನ್ನೆ ರಾತ್ರಿ ಸುರಿದ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ ಅನೇಕ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಸಾಕಷ್ಟು ಹಾನಿಯಾಗಿದೆ.
ನಂದಿಬೆಟ್ಟದ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ರಸ್ತೆಗೆ ಅಡ್ಡಲಾಗಿ ಬಂಡೆಗಳು ಉರುಳಿ ನಿಂತಿವೆ. ರಸ್ತೆ ಬಂದ್ ಆಗಿದ್ದರಿಂದ ನಂದಿಬೆಟ್ಟಕ್ಕೆ ಬಂದಿರುವ ಪ್ರವಾಸಿಗರಿಗೆ ನಿರಾಸೆ ಅನುಭವಿಸುವಂತಾಗಿದೆ.
ನಿನ್ನೆ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಪ್ರಸಿದ್ಧ ಪ್ರವಾಸಿ ತಾಣವಾದ ನಂದಿ ಬೆಟ್ಟದಲ್ಲಿ ಭೂಕುಸಿತದಿಂದಾಗಿ ರಸ್ತೆ ಕೊಚ್ಚಿ ಹೋಗಿದೆ. ಸದ್ಯಕ್ಕೆ ನಂದಿ ಬೆಟ್ಟಕ್ಕೆ ಸಂಚಾರ ಸ್ಥಗಿತೊಂಡಿದ್ದು, ರಸ್ತೆ ರಿಪೇರಿ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ. #Nandi #nandihills pic.twitter.com/ZjxV85xoG4
— Dr Sudhakar K (@mla_sudhakar) August 25, 2021
ಸ್ಥಳಕ್ಕೆ ಅಧಿಕಾರಿಗಳು ಆಗಮಿಸಿದ್ದು, ಮಣ್ಣು ತೆರವು ಕೆಲಸದಲ್ಲಿ ನಿರತರಾಗಿದ್ದಾರೆ. ಇದೇ ಮೊದಲ ಬಾರಿಗೆ ಇಷ್ಟು ಪ್ರಮಾಣದ ಭೂ ಕುಸಿತವಾಗಿದೆ. ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಮಲೆನಾಡು ಭಾಗದಲ್ಲಿ ಕಾಣಿಸುತ್ತಿದ್ದ ದೃಶ್ಯಗಳನ್ನು ತಮ್ಮಲ್ಲಿ ಆಗಿರುವುದನ್ನು ಕಂಡು ಸ್ಥಳೀಯ ಜನರು ಆತಂಕಕ್ಕೊಳಗಾಗಿದ್ದಾರೆ.