Home Uncategorized High Court: ಗಾರ್ಮೆಂಟ್ ಕೆಲಸಕ್ಕಾಗಿ ನಕಲಿ ಜಾತಿ ಪ್ರಮಾಣ ಸಲ್ಲಿಕೆ – ಆರೋಪಿಗೆ ಜಾಮೀನು ನೀಡಲು...

High Court: ಗಾರ್ಮೆಂಟ್ ಕೆಲಸಕ್ಕಾಗಿ ನಕಲಿ ಜಾತಿ ಪ್ರಮಾಣ ಸಲ್ಲಿಕೆ – ಆರೋಪಿಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಣೆ

52
0

ಬೆಂಗಳೂರು;- ಸರ್ಕಾರಿ ನೌಕರಿಗಾಗಿ ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಕೆ ಸಲ್ಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ನಿರೀಕ್ಷಣಾ ಜಾಮೀನು ನೀಡಲು ಹೈಕೊರ್ಟ್ ನಿರಾಕರಣೆ ಮಾಡಿದೆ.

ನ್ಯಾಯಮೂರ್ತಿ ಜೆ.ಎಂ.ಖಾಜಿ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ದಾಖಲೆಗಳನ್ನು ಪರಿಶೀಲಿಸಿ ವಾದ – ಪ್ರತಿವಾದ ಆಲಿಸಿದ ನ್ಯಾಯಪೀಠ, ಅರ್ಜಿದಾರರು ಹಿಂದುಳಿದ ವರ್ಗಗಳಿಗೆ ಸೆರಿದ್ದು, ಪರಿಶಿಷ್ಟ ಜಾತಿಯ ಪ್ರಮಾಣ ಪತ್ರ ಸಲ್ಲಿಸುವ ಮೂಲಕ ತಪ್ಪೆಸಗಿರುವ ಅಂಶ ಮೇಲ್ನೋಟಕ್ಕೆ ಸಾಬೀತಾಗಿದೆ. ಹೀಗಾಗಿ ನಿರೀಕ್ಷಣಾ ಜಾಮೀನು ನೀಡಲಾಗದು ಎಂದು ತಿಳಿಸಿ ಅರ್ಜಿ ವಜಾಗೊಳಿಸಿ ಆದೇಶಿಸಿದೆ.

ಅರ್ಜಿದಾರರು ಮೊಗೇರ್ ಜಾತಿಗೆ ಸೇರಿದ್ದರೂ ಪರಿಶಿಷ್ಟ ಜಾತಿ ಹೆಸರಿನ ಜಾತಿ ಪ್ರಮಾಣ ಪತ್ರವನ್ನು ಸಲ್ಲಿಸಿದ್ದರು. ಆದರೆ, ಜಿಲ್ಲಾ ಜಾತಿ ಪರಿಶೀಲನಾ ಸಮಿತಿ ನಡೆಸಿದ ಪರಿಶೀಲನೆ ಸಂದರ್ಭದಲ್ಲಿ ಮೇಲ್ಮನವಿದಾರರ ಮೊಗೇರಾ ಜಾತಿಗೆ ಸೇರಿದವರಾಗಿದ್ದು, ಪರಿಶಿಷ್ಟ ಜಾತಿ ಹೆಸರಿನಲ್ಲಿ ತಹಶೀಲ್ದಾರ್ ಕಚೇರಿಗೆ ಸುಳ್ಳು ಮಾಹಿತಿ ನೀಡಿ ಜಾತಿ ಪ್ರಮಾಣ ಪತ್ರ ಪಡೆದುಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ತಕ್ಷಣ ತಹಶೀಲ್ದಾರ್ ಅವರು ಅರ್ಜಿದಾರರ ಜಾತಿ ಪ್ರಮಾಣ ಪತ್ರವನ್ನು ರದ್ದುಗೊಳಿಸಿದ್ದರು. ಇದಾದ ನಂತರ ಜಿಲ್ಲಾ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ದೌರ್ಜನ್ಯ ಕಾಯಿದೆಯಡಿ ದೂರು ದಾಖಲಿಸಿದ್ದರು.

The post High Court: ಗಾರ್ಮೆಂಟ್ ಕೆಲಸಕ್ಕಾಗಿ ನಕಲಿ ಜಾತಿ ಪ್ರಮಾಣ ಸಲ್ಲಿಕೆ – ಆರೋಪಿಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಣೆ appeared first on Ain Live News.

LEAVE A REPLY

Please enter your comment!
Please enter your name here