Home ರಾಜಕೀಯ ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಶ್ರೇಯಸ್‌ ಪಟೇಲ್‌ಗೆ ಹೈಕೋರ್ಟ್...

ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಶ್ರೇಯಸ್‌ ಪಟೇಲ್‌ಗೆ ಹೈಕೋರ್ಟ್ ನೋಟಿಸ್

37
0

ಬೆಂಗಳೂರು : ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಹಾಸನ ಕಾಂಗ್ರೆಸ್​ ಸಂಸದ ಶ್ರೇಯಸ್ ಪಟೇಲ್​ಗೆ ಹೈಕೋರ್ಟ್​ ನೋಟಿಸ್ ಜಾರಿ ಮಾಡಿದೆ.

ತಪ್ಪು ಮಾಹಿತಿ ನೀಡಿರುವ ಹಾಸನ ಸಂಸದ ಶ್ರೇಯಸ್ ಪಟೇಲ್ ಆಯ್ಕೆ ಅಸಿಂಧು ಕೋರಿ ವಕೀಲ ದೇವರಾಜೇಗೌಡ ಪುತ್ರ ಡಿ.ಚರಣ್ ಅವರು ಸಲ್ಲಿಸಿದ್ದರು.

ಆ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್, ಕಾಂಗ್ರೆಸ್ ಸಂಸದ ಶ್ರೇಯಸ್ ಪಟೇಲ್​ಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಶ್ರೇಯಸ್‌ ಪಟೇಲ್‌ ಅವರ ನಾಮಪತ್ರ ಕ್ರಮಬದ್ಧವಾಗಿಲ್ಲ. ಅವರು ಹಿಂದಿನ ಐದು ವರ್ಷಗಳ ಆದಾಯ ತೆರಿಗೆ ರಿಟರ್ನ್ಸ್‌ ಸಲ್ಲಿಸಿಲ್ಲ. ಪ್ರಮಾಣ ಪತ್ರದಲ್ಲಿ ಸಂಪೂರ್ಣ ಮಾಹಿತಿ ನೀಡಿಲ್ಲ. ಚುನಾವಣಾ ವೆಚ್ಚದ ಬಗ್ಗೆಯೂ ತಪ್ಪು ಮಾಹಿತಿ ನೀಡಿದ್ದಾರೆ. ನಿಗಧಿಗಿಂತ ಹೆಚ್ಚಿನ ಹಣ ವ್ಯಯಿಸಿದ್ದು, ಸರಿಯಾದ ಲೆಕ್ಕವನ್ನು ಆಯೋಗಕ್ಕೆ ಸಲ್ಲಿಕೆ ಮಾಡಿಲ್ಲ. ಹಾಗಾಗಿ ಅವರ ಆಯ್ಕೆಯನ್ನೇ ರದ್ದುಗೊಳಿಸಬೇಕು ಎಂದು ಮನವಿ ಮಾಡಲಾಗಿದೆ.

LEAVE A REPLY

Please enter your comment!
Please enter your name here