Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಳಗಾವಿ
  • High preference for white topping; Discussion with Bengaluru MLAs soon: DCM D.K. Shivakumar | ವೈಟ್ ಟ್ಯಾಪಿಂಗ್ ಗೆ ಹೆಚ್ಚಿನ ಆದ್ಯತೆ; ಸದ್ಯದಲ್ಲೇ ಬೆಂಗಳೂರು ಶಾಸಕರ ಜೊತೆ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್
  • ಬೆಳಗಾವಿ

High preference for white topping; Discussion with Bengaluru MLAs soon: DCM D.K. Shivakumar | ವೈಟ್ ಟ್ಯಾಪಿಂಗ್ ಗೆ ಹೆಚ್ಚಿನ ಆದ್ಯತೆ; ಸದ್ಯದಲ್ಲೇ ಬೆಂಗಳೂರು ಶಾಸಕರ ಜೊತೆ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್

The Bengaluru Live December 14, 2023 4:30 PM 1 minute read
DK Shivakumar in Belagavi Assembly

High preference for white topping; Discussion with Bengaluru MLAs soon: DCM D.K. Shivakumar | ವೈಟ್ ಟ್ಯಾಪಿಂಗ್ ಗೆ ಹೆಚ್ಚಿನ ಆದ್ಯತೆ; ಸದ್ಯದಲ್ಲೇ ಬೆಂಗಳೂರು ಶಾಸಕರ ಜೊತೆ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಳಗಾವಿ:

“ಬೆಂಗಳೂರಿನ ರಸ್ತೆ ಹಾಗೂ ಚರಂಡಿಗಳನ್ನು ಅಭಿವೃದ್ಧಿಪಡಿಸಲು ವೈಟ್ ಟ್ಯಾಪಿಂಗ್ ಗೆ ಆದ್ಯತೆ ನೀಡಲಾಗುತ್ತಿದ್ದು, ಈ ಬಗ್ಗೆ ಸದ್ಯದಲ್ಲೇ ಬೆಂಗಳೂರಿನ ಶಾಸಕರ ಸಭೆ ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯರಾದ ಹೆಚ್. ಎಸ್ ಗೋಪಿನಾಥ್ ಅವರ ಪ್ರಶ್ನೆಗೆ ಅವರು ಉತ್ತರಿಸಿದರು.

“ಬೆಂಗಳೂರಿನಲ್ಲಿ 1.14 ಕೋಟಿ ವಾಹನಗಳು ಇವೆ. ಬೆಂಗಳೂರಿನ ಜನಸಂಖ್ಯೆಯಷ್ಟೇ ವಾಹನಗಳ ಸಂಖ್ಯೆ ಕೂಡ ಇದೆ. ನಗರದಲ್ಲಿ ನಿತ್ಯ ಸರಾಸರಿ 1300 ದ್ವಿಚಕ್ರ ವಾಹನಗಳು ಹಾಗೂ 490 ಕಾರುಗಳು ನೊಂದಣಿಯಾಗುತ್ತಿವೆ.

ವಾಹನಗಳ ಒತ್ತಡದಿಂದ ರಸ್ತೆಗಳು ಹಾಳಾಗುತ್ತಿದ್ದು, ರಸ್ತೆಗುಂಡಿ ಮುಚ್ಚುವುದೇ ದೊಡ್ಡ ಕೆಲಸವಾಗಿದೆ. ಹೀಗಾಗಿ ರಸ್ತೆಗುಂಡಿ ಮುಚ್ಚುವ ಕೆಲಸವನ್ನು ವಿಕೇಂದ್ರೀಕರಣ ಮಾಡಲಾಗಿದೆ. ಸಾರ್ವಜನಿಕರು ಅಥವಾ ಪೊಲೀಸ್ ಸಿಬ್ಬಂದಿ ಫೋಟೋ ತೆಗೆದು ಕಳುಹಿಸುವ ಗುಂಡಿಗಳನ್ನು ಪಾಲಿಕೆ ಅಧಿಕಾರಿಗಳು ಮುಚ್ಚಿಸುತ್ತಿದ್ದಾರೆ.

ವೈಟ್ ಟಾಪಿಂಗ್ ಗೆ 1000 ಕೋಟಿ ಅನುದಾನವಿದ್ದು, ಮುಖ್ಯರಸ್ತೆಗಳಲ್ಲದೆ ಬೇರೆ ರಸ್ತೆಗಳನ್ನು ಮಾಡಬೇಕೆಂಬ ಬೇಡಿಕೆ ಇದೆ. ಬೆಂಗಳೂರಿನಲ್ಲಿ ಕೇಬಲ್ ಗಳ ಹಾವಳಿ ಹೆಚ್ಚಾಗಿದೆ. ಇದಕ್ಕಾಗಿ ರಸ್ತೆ ಅಗೆಯಲಾಗುತ್ತಿದೆ. ಹೀಗಾಗಿ ಯೋಜಿತ ರೂಪದಲ್ಲಿ ವೈಟ್ ಟ್ಯಾಪಿಂಗ್ ಕೆಲಸ ಮಾಡಬೇಕಿದೆ.

25 ರಿಂದ 40 ವರ್ಷಗಳ ಕಾಲ ರಸ್ತೆಗಳು ಬಾಳಿಕೆ ಬರುವ ಹಿನ್ನೆಲೆಯಲ್ಲಿ ವೈಟ್ ಟಾಪಿಂಗ್ ಗೆ ಆದ್ಯತೆ ನೀಡಲಾಗಿದೆ. ಎಲ್ಲೆಲ್ಲಿಇದರ ಅಗತ್ಯವಿದೆ ಎಂಬುದರ ಚರ್ಚೆಗೆ ಸದ್ಯದಲ್ಲೇ ಬೆಂಗಳೂರಿನ ಶಾಸಕರ ಸಭೆ ಕರೆಯಲಿದ್ದೇನೆ. ಸರ್ಕಾರ ಎಷ್ಟೇ ಅನುದಾನ ನೀಡಿದರೂ ಪಾಲಿಕೆ ಹೆಚ್ಚಿನ ಆದಾಯ ಗಳಿಸುವ ಅಗತ್ಯವಿದೆ. ಇದಕ್ಕಾಗಿ ತೆರಿಗೆ ಹೆಚ್ಚಳಕ್ಕೆ ಮುಂದಾಗಿದ್ದೇವೆ. ಆ ಮೂಲಕ ಪಾಲಿಕೆಗೆ ಆರ್ಥಿಕ ಶಕ್ತಿ ತುಂಬ ಕೆಲಸ ಮಾಡುತಿದ್ದೇವೆ. ಈ ಬಗ್ಗೆ ನಿಮ್ಮ ಬಳಿ ಸಲಹೆಗಳಿದ್ದರೆ ನೀಡಿ. ಬೆಂಗಳೂರಿನ ಗೌರವ, ಸ್ವಾಭಿಮಾನ ಉಳಿಸಲು ಒಟ್ಟಾಗಿ ಕೆಲಸ ಮಾಡೋಣ.”

ಅಪರಾಧ ತಡೆಗೆ ಗೃಹ ಇಲಾಖೆ ಸಹಯೋಗದಲ್ಲಿ ಕ್ರಮ

ಬೆಂಗಳೂರಿನ ಸ್ವಚ್ಛತೆ, ಮೂಲಭೂತ ಸೌಕರ್ಯ ಅಭಿವೃದ್ಧಿ, ಅಪರಾಧ ತಡೆ ಹಾಗೂ ಜಾಗತಿಕ ಮಟ್ಟದಲ್ಲಿ ಬೆಂಗಳೂರಿನ ಘನತೆ ಉಳಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಭಾರತಿ ಶೆಟ್ಟಿ ಅವರು ಕೇಳಿದ ಪ್ರಶ್ನೆಗೆ, “ಭಾರತಿ ಶೆಟ್ಟಿ ಅವರು ಮೂಲತಃ ಮಂಗಳೂರಿನವರಾದರೂ ಬೆಂಗಳೂರಿನ ಬಗ್ಗೆ ಬಹಳ ಆಸಕ್ತಿ ಹೊಂದಿದ್ದಾರೆ. ಸ್ವಚ್ಛತೆ ವಿಚಾರದಲ್ಲಿ ಮಂಗಳೂರು, ಬೆಳಗಾವಿ ಬೆಂಗಳೂರಿಗಿಂತ ಉತ್ತಮವಾಗಿವೆ. ಜಯನಗರ, ಚಾಮರಾಜಪೇಟೆ, ಮಲ್ಲೇಶ್ವರಂ ಪ್ರದೇಶಗಳ ಹೊರತಾಗಿ ಬೆಂಗಳೂರು ಯೋಜಿತ ನಗರವಲ್ಲ.

ನಾನು ಹಿಂದೆ ನಗರಾಭಿವೃದ್ಧಿ ಸಚಿವನಾಗಿದ್ದಾಗ ಬೆಂಗಳೂರಿನ ಜನಸಂಖ್ಯೆ 60 ಲಕ್ಷ ಇತ್ತು. ಈಗ 1.40 ಕೋಟಿ ಆಗಿದೆ. ಇಷ್ಟು ದೊಡ್ಡ ಜನಸಂಖ್ಯೆಗೆ ಕುಡಿಯುವ ನೀರು ಪೂರೈಕೆ. ಘನತ್ಯಾಜ್ಯ ವಿಲೇವಾರಿ ದೊಡ್ಡ ಸವಾಲು. ಕಸ ತೆಗೆಯುವುದೇ ದೊಡ್ಡ ಸಮಸ್ಯೆ, ದಂಧೆ ಆಗಿದೆ. ಕಸ ವಿಲೇವಾರಿಗೆ ಬೇರೆ ರಾಜ್ಯಗಳಲ್ಲಿ ಅಳವಡಿಸಿರುವ ವ್ಯವಸ್ಥೆಗಳನ್ನು ಅಧ್ಯಯನ ಮಾಡಲಾಗುತ್ತಿದೆ. ದೆಹಲಿ, ಹೈದರಾಬಾದ್ ನಲ್ಲಿ ಅಧ್ಯಯನ ಮಾಡಲಾಗಿದೆ. ಇಂಧೋರ್ ಗೆ ತೆರಳಬೇಕಿದೆ. ಈ ಬಗ್ಗೆ ಎಲ್ಲಾ ಪಕ್ಷದ ನಾಯಕರು ಹಾಗೂ ಸಾರ್ವಜನಿಕರ ಸಲಹೆ ಪಡೆದಿದ್ದೇನೆ.

ಬ್ರಾಂಡ್ ಬೆಂಗಳೂರು ಪರಿಕಲ್ಪನೆಯಲ್ಲಿ ಸಾರ್ವಜನಿಕರಿಂದ 70 ಸಾವಿರ ಸಲಹೆ ಸಂಗ್ರಹವಾಗಿದೆ. ಆರೋಗ್ಯ, ಕುಡಿಯುವ ನೀರು, ತಂತ್ರಜ್ಞಾನ, ಪರಿಸರ ಕ್ಷೇತ್ರಗಳಾಗಿ ವಿಭಜನೆ ಮಾಡಿ ಬೆಂಗಳೂರಿನ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುತ್ತಿದೆ. ಬೆಂಗಳೂರು ಎಲ್ಲರ ನೆಚ್ಚಿನ ನಗರ. ಬೆಂಗಳೂರಿನ ಆದಾಯ ಹಳ್ಳಿಗಳ ಅಭಿವೃದ್ಧಿಗೆ ನೆರವಾಗುತ್ತಿದೆ. ದೇಶದ ರಫ್ತ್ತು ಆದಾಯದಲ್ಲಿ 39 % ರಷ್ಟು ಬೆಂಗಳೂರಿನಿಂದ ಸಂಗ್ರಹವಾಗುತ್ತಿದೆ. ಹೀಗಾಗಿ ಬೆಂಗಳೂರಿಗೆ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ.

ಸಾರ್ವಜನಿಕರ ಸಲಹೆಗಳನ್ನು ಪರಿಶೀಲಿಸಲು ಕೆಲವು ಸಂಸ್ಥೆಗಳಿಗೆ ಜವಾಬ್ದಾರಿ ನೀಡಲಾಗಿದೆ. ನಾವು ಹೆಬ್ಬಾಳ ಮೇಲ್ಸೇತುವೆ ನಿರ್ಮಾಣಕ್ಕೆ ಅನುಮೋದನೆ ನೀಡಿದಾಗ ದೇವನಹಳ್ಳಿಯಲ್ಲಿ ವಿಮಾನ ನಿಲ್ದಾಣ ಇರಲಿಲ್ಲ. ಈಗ ವಿಮಾನ ನಿಲ್ದಾಣವಾಗಿದ್ದು, ವಾಹನ ದಟ್ಟಣೆ ಹೆಚ್ಚಾಗಿದೆ. ಬೆಂಗಳೂರು ಉತ್ತರ ಭಾಗ ಬೆಳೆಯುತ್ತಿದೆ.

ಬೆಂಗಳೂರಿನ ಸಂಚಾರ ಸಮಸ್ಯೆ ಬಗೆಹರಿಸಲು 9 ಸಂಸ್ಥೆಗಳ ಜೊತೆ ಚರ್ಚೆ ಮಾಡಲಾಗಿದೆ. ಈ ವಿಚಾರವಾಗಿ ನಿನ್ನೆ ಕೂಡ ಸಭೆ ಮಾಡಿದ್ದೇನೆ. ಸಂಚಾರ ಹಾಗೂ ಅಪರಾಧ ತಡೆಗಟ್ಟಲು ಆರ್ಟಿಫಿಷಲ್ ಇಂಟಲಿಜೆನ್ಸ್ ನಂತಹ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲಾಗುತ್ತಿದೆ. ಗೃಹ ಸಚಿವಾಲಯದ ಜತೆ ಸೇರಿ ಯೋಜನೆ ರೂಪಿಸುತ್ತಿದ್ದೇವೆ.

ಐದು ಪ್ರಮುಖ ರಸ್ತೆಗಳಿಂದ ನಗರದ ಒಳಗೆ ಸಂಚಾರಿ ದಟ್ಟಣೆ ಹೆಚ್ಚಾಗಿದೆ. ಇದಕ್ಕೆ ದೀರ್ಘಾವಧಿಯ ಯೋಜನೆ ಬೇಕಾಗಿದೆ. ಬೆಂಗಳೂರನ್ನು ಪ್ರವಾಸಿ ತಾಣ ಮಾಡಲು ಯೋಜನೆ ರೂಪಿಸಲಾಗಿಲ್ಲ. ವಿದೇಶಿ ಪ್ರವಾಸಿಗರಿಗೆ ವಿಧಾನಸೌಧ ಹಾಗೂ ಹೈಕೋರ್ಟ್ ಬಿಟ್ಟರೆ ಬೇರೆ ಆಯ್ಕೆಗಳೇ ಇಲ್ಲ.

ಸರ್ಕಾರಿ ಆಸ್ತಿ ರಕ್ಷಣೆಗೆ ಪ್ರತ್ಯೇಕ ವಿಭಾಗ ರಚನೆ

ಬಿಡಿಎ ಸ್ವತ್ತು ವ್ಯಾಜ್ಯಗಳಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ಖಾಸಗಿ ವ್ಯಕ್ತಿಗಳ ಪರ ತೀರ್ಪು ಬರುತ್ತಿರುವುದರ ಬಗ್ಗೆ ಮರೀತಿಬ್ಬೆಗೌಡರ ಪ್ರಶ್ನೆಗೆ ಉತ್ತರಿಸಿ, “ನಾನು ಮರಿತಿಬ್ಬೆಗೌಡರ ವಾದ ಒಪ್ಪುತ್ತೇನೆ. ಅಲ್ಲಿ ದೊಡ್ಡ ಮಾಫಿಯಾ ಇದೆ. ಯಾವುದೇ ಹೊಣೆಗಾರಿಕೆ ಇಲ್ಲವಾಗಿದೆ. ಈ ಹಿಂದಿನ ಸರ್ಕಾರಗಳು ಅಡ್ವೊಕೇಟ್ ಗಳನ್ನು ನೇಮಕ ಮಾಡಿದರೂ ಶೇ.90 ರಷ್ಟು ತೀರ್ಪು ಖಾಸಗಿಯವರ ಪರವಾಗಿವೆ. ಇತ್ತೀಚೆಗೆ ಸಚಿವ ಹೆಚ್.ಕೆ. ಪಾಟೀಲರು ರಾಜ್ಯದ ಅಡ್ವೊಕೇಟ್ ಗಳ ಜತೆ ಚರ್ಚೆ ಮಾಡಿದ್ದಾರೆ. ಬಿಡಿಎ ಹಾಗೂ ಪಾಲಿಕೆ ವಿಚಾರದಲ್ಲಿ ಮುಂದಿನ ಶನಿವಾರ ಅಡ್ವೊಕೇಟ್ ಗಳ ಸಭೆ ನಿಗದಿ ಮಾಡಿದ್ದು, ಯಾರು ಎಷ್ಟು ಕೇಸ್ ವಾದ ಮಾಡಿದ್ದಾರೆ, ಎಷ್ಟು ಕೇಸ್ ಗೆದ್ದಿದ್ದಾರೆ, ಮುಂದೆ ಅವರ ಕಾರ್ಯಯೋಜನೆ ಏನು ಎಂದು ಪರಿಶೀಲನೆ ಮಾಡಲಾಗುವುದು. ನಾವು ಏಕಾಏಕಿ ಒಂದೇ ದಿನ ತೆಗೆದುಹಾಕುವುದಿಲ್ಲ. ಸದಸ್ಯರು ಹೇಳಿದ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಬಿಡಿಎ ಆಸ್ತಿ ಕುರಿತ ಪ್ರಕರಣಗಳ ಪರಿಶೀಲನೆಗೆ ಪ್ರತ್ಯೇಕ ವಿಭಾಗ ರೂಪಿಸಲು ಅಡ್ವೊಕೇಟ್ ಜನರಲ್ ಅವರಿಗೆ ಸೂಚನೆ ನೀಡಲಾಗಿದೆ. ಸರ್ಕಾರಿ ಅಡ್ವೊಕೇಟ್ ಗಳಿಗೆ ಹೊಣೆಗರಿಕೆ ನಿಗದಿ ಮಾಡುತ್ತೇವೆ” ಎಂದು ತಿಳಿಸಿದರು.

About the Author

The Bengaluru Live

Administrator

Visit Website View All Posts

Post navigation

Previous: BBMP and other law amendment bill also approved in upper house | ಬಿಬಿಎಂಪಿ ಮತ್ತು ಇತರೆ ಕಾನೂನು ತಿದ್ದುಪಡಿ ವಿಧೇಯಕಕ್ಕೆ ಮೇಲ್ಮನೆಯಲ್ಲೂ ಅನುಮೋದನೆ
Next: Karnataka | Farmers are not allowed to be treated unfairly- They are not allowed to get land in the name of the company and conduct real estate business | Karnataka | ರೈತರಿಗೆ ಅನ್ಯಾಯ ಆಗಲು ಬಿಡುವುದಿಲ್ಲ- ಕಂಪನಿ ಹೆಸರಲ್ಲಿ ಭೂಮಿ ಪಡೆದು ರಿಯಲ್ ಎಸ್ಟೇಟ್ ವ್ಯವಹಾರ ನಡೆಸಲು ಅವಕಾಶ ಕೊಡುವುದಿಲ್ಲ

Related Stories

ಬೆಂಗಳೂರಿನ ಜಾರಿ ನಿರ್ದೇಶನಾಲಯ ಕಚೇರಿಯ ಪ್ರವೇಶದ್ವಾರ — ಸಂಗ್ರಹ ಚಿತ್ರ
  • ಅಪರಾಧ
  • ಕರ್ನಾಟಕ
  • ಬೆಳಗಾವಿ

ಬೆಳಗಾವಿ ಹೂಡಿಕೆ ವಂಚನೆ ಪ್ರಕರಣ: ₹427.16 ಕೋಟಿ ಆಸ್ತಿ ತಾತ್ಕಾಲಿಕ ಜಪ್ತಿ ಮಾಡಿದ ಇಡಿ

The Bengaluru Live October 31, 2026 1:11 PM
ಕರ್ನಾಟಕದ ಮಾಜಿ ಸಚಿವ ಶಿವಾನಂದ ಕೌಜಲಗಿ ಅವರ ಭಾವಚಿತ್ರ.
  • ಬೆಂಗಳೂರು ನಗರ
  • ಕರ್ನಾಟಕ
  • ಬೆಳಗಾವಿ
  • ರಾಜಕೀಯ

ಮಾಜಿ ಸಚಿವ ಶಿವಾನಂದ ಕೌಜಲಗಿ ನಿಧನ; ಸಿಎಂ ಸಂತಾಪ

The Bengaluru Live October 30, 2026 10:30 AM
ಅಕ್ಟೋಬರ್ 27ರಂದು ಬೆಳಗಾವಿಯ ರಾಷ್ಟ್ರೀಯ ಮಿಲಿಟರಿ ಶಾಲೆಯಲ್ಲಿ ಬಾಸ್ಕೆಟ್‌ಬಾಲ್ ಆಡುತ್ತಿರುವ ಕೆಡೆಟ್‌ಗಳು.
  • ಕರ್ನಾಟಕ
  • ಕ್ರೀಡೆ
  • ಬೆಳಗಾವಿ

ಬೆಳಗಾವಿಯಲ್ಲಿ ಐದು ಮಿಲಿಟರಿ ಶಾಲೆಗಳ 175 ಕೆಡೆಟ್‌ಗಳ ಕ್ರೀಡಾ–ಶೈಕ್ಷಣಿಕ ಸ್ಪರ್ಧೆ

The Bengaluru Live October 27, 2026 7:30 PM

Latest Post

ಕರ್ನಾಟಕ ಹವಾಮಾನ: ಒಣ ಹವೆ ಮುಂದುವರಿಕೆ, ನವೆಂಬರ್ 24ರಿಂದ 26ರವರೆಗೆ ಕೆಲವೆಡೆ ಮಳೆ ಸಾಧ್ಯತೆ ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ಕರ್ನಾಟಕ ಹವಾಮಾನ: ಒಣ ಹವೆ ಮುಂದುವರಿಕೆ, ನವೆಂಬರ್ 24ರಿಂದ 26ರವರೆಗೆ ಕೆಲವೆಡೆ ಮಳೆ ಸಾಧ್ಯತೆ

November 22, 2026 2:01 PM
ನವೆಂಬರ್ 23ರಿಂದ ಕರ್ನಾಟಕದ ಕೆಲವೆಡೆ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ನವೆಂಬರ್ 23ರಿಂದ ಕರ್ನಾಟಕದ ಕೆಲವೆಡೆ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ

November 22, 2026 11:32 AM
ಕಾಂಗೋದಲ್ಲಿ 95 ಹಕ್ಕಿಪಿಕ್ಕಿ ಸಮುದಾಯದವರು ವಶಕ್ಕೆ ಎಂಬ ವರದಿ: ನೆರವಿಗೆ ಮನವಿ ಸಾಂಪ್ರದಾಯಿಕ ಉಡುಪಿನಲ್ಲಿರುವ ಮಹಿಳೆಯೊಂದಿಗೆ ಮೈಕ್‌ನಲ್ಲಿ ಮಾತನಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಸುತ್ತ ಕುಳಿತಿರುವ ಜನರು
  • ಕರ್ನಾಟಕ

ಕಾಂಗೋದಲ್ಲಿ 95 ಹಕ್ಕಿಪಿಕ್ಕಿ ಸಮುದಾಯದವರು ವಶಕ್ಕೆ ಎಂಬ ವರದಿ: ನೆರವಿಗೆ ಮನವಿ

November 22, 2026 11:16 AM
ಕಾನ್ಪುರ ಸೆಂಟ್ರಲ್–ಎಸ್‌ಎಂವಿಟಿ ಬೆಂಗಳೂರು ನಡುವಿನ ಸಾಪ್ತಾಹಿಕ ವಿಶೇಷ ರೈಲು ಡಿ.30ರವರೆಗೆ ವಿಸ್ತರಣೆ, ಪ್ರತಿ ದಿಕ್ಕಿನಲ್ಲಿ ಆರು ಟ್ರಿಪ್ ರೈಲು ನಿಲ್ದಾಣದ ಟಿಕೆಟ್ ಕೌಂಟರ್‌ಗಳ ಮುಂದೆ ಸರತಿ ಸಾಲಿನ ಕಂಬಗಳ ಬಳಿ ನಿಂತಿರುವ ಪ್ರಯಾಣಿಕರು
  • ಕರ್ನಾಟಕ
  • ಬೆಂಗಳೂರು ನಗರ

ಕಾನ್ಪುರ ಸೆಂಟ್ರಲ್–ಎಸ್‌ಎಂವಿಟಿ ಬೆಂಗಳೂರು ನಡುವಿನ ಸಾಪ್ತಾಹಿಕ ವಿಶೇಷ ರೈಲು ಡಿ.30ರವರೆಗೆ ವಿಸ್ತರಣೆ, ಪ್ರತಿ ದಿಕ್ಕಿನಲ್ಲಿ ಆರು ಟ್ರಿಪ್

November 22, 2026 8:08 AM
ಪಿಜಿ ಆಯುಷ್: ಮೊದಲ ಸುತ್ತಿನ ಸೀಟು ಹಂಚಿಕೆಯ ಅಣಕು ಫಲಿತಾಂಶ ಪ್ರಕಟ, 887 ಮಂದಿಗೆ ಸೀಟು, ನ.24ರವರೆಗೆ ಆಯ್ಕೆ ಬದಲಾವಣೆಗೆ ಅವಕಾಶ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಹೆಸರಿನ ಫಲಕ ಮತ್ತು ಲಾಂಛನದ ಮುಂದೆ ತಮ್ಮ ಮೇಜಿನ ಬಳಿ ಮಾತನಾಡುತ್ತಿರುವ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ
  • ಶಿಕ್ಷಣ

ಪಿಜಿ ಆಯುಷ್: ಮೊದಲ ಸುತ್ತಿನ ಸೀಟು ಹಂಚಿಕೆಯ ಅಣಕು ಫಲಿತಾಂಶ ಪ್ರಕಟ, 887 ಮಂದಿಗೆ ಸೀಟು, ನ.24ರವರೆಗೆ ಆಯ್ಕೆ ಬದಲಾವಣೆಗೆ ಅವಕಾಶ

November 22, 2026 8:06 AM
ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟಿಸಿದ ಕೆಪಿಎಸ್‌ಸಿ: ನವೆಂಬರ್ 23ರ ಬೆಳಿಗ್ಗೆ 11ರವರೆಗೆ ಆಕ್ಷೇಪಣೆಗೆ ಅವಕಾಶ ಕಮಾನು ಬಾಲ್ಕನಿಗಳು ಮತ್ತು ಪ್ರವೇಶದ್ವಾರದಲ್ಲಿ ಪ್ರತಿಮೆ ಇರುವ ಬೂದು ಕಲ್ಲಿನ ಕಟ್ಟಡ, ಕರ್ನಾಟಕ ಲೋಕಸೇವಾ ಆಯೋಗದ ಕಚೇರಿ
  • ಕರ್ನಾಟಕ

ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟಿಸಿದ ಕೆಪಿಎಸ್‌ಸಿ: ನವೆಂಬರ್ 23ರ ಬೆಳಿಗ್ಗೆ 11ರವರೆಗೆ ಆಕ್ಷೇಪಣೆಗೆ ಅವಕಾಶ

November 22, 2026 7:42 AM

ನೀವು ತಪ್ಪಿಸಿಕೊಂಡಿರಬಹುದು

ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ಕರ್ನಾಟಕ ಹವಾಮಾನ: ಒಣ ಹವೆ ಮುಂದುವರಿಕೆ, ನವೆಂಬರ್ 24ರಿಂದ 26ರವರೆಗೆ ಕೆಲವೆಡೆ ಮಳೆ ಸಾಧ್ಯತೆ

The Bengaluru Live November 22, 2026 2:01 PM
ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ನವೆಂಬರ್ 23ರಿಂದ ಕರ್ನಾಟಕದ ಕೆಲವೆಡೆ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ

The Bengaluru Live November 22, 2026 11:32 AM
ಸಾಂಪ್ರದಾಯಿಕ ಉಡುಪಿನಲ್ಲಿರುವ ಮಹಿಳೆಯೊಂದಿಗೆ ಮೈಕ್‌ನಲ್ಲಿ ಮಾತನಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಸುತ್ತ ಕುಳಿತಿರುವ ಜನರು
  • ಕರ್ನಾಟಕ

ಕಾಂಗೋದಲ್ಲಿ 95 ಹಕ್ಕಿಪಿಕ್ಕಿ ಸಮುದಾಯದವರು ವಶಕ್ಕೆ ಎಂಬ ವರದಿ: ನೆರವಿಗೆ ಮನವಿ

The Bengaluru Live November 22, 2026 11:16 AM
ರೈಲು ನಿಲ್ದಾಣದ ಟಿಕೆಟ್ ಕೌಂಟರ್‌ಗಳ ಮುಂದೆ ಸರತಿ ಸಾಲಿನ ಕಂಬಗಳ ಬಳಿ ನಿಂತಿರುವ ಪ್ರಯಾಣಿಕರು
  • ಕರ್ನಾಟಕ
  • ಬೆಂಗಳೂರು ನಗರ

ಕಾನ್ಪುರ ಸೆಂಟ್ರಲ್–ಎಸ್‌ಎಂವಿಟಿ ಬೆಂಗಳೂರು ನಡುವಿನ ಸಾಪ್ತಾಹಿಕ ವಿಶೇಷ ರೈಲು ಡಿ.30ರವರೆಗೆ ವಿಸ್ತರಣೆ, ಪ್ರತಿ ದಿಕ್ಕಿನಲ್ಲಿ ಆರು ಟ್ರಿಪ್

The Bengaluru Live November 22, 2026 8:08 AM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಕರ್ನಾಟಕ ಹವಾಮಾನ: ಒಣ ಹವೆ ಮುಂದುವರಿಕೆ, ನವೆಂಬರ್ 24ರಿಂದ 26ರವರೆಗೆ ಕೆಲವೆಡೆ ಮಳೆ ಸಾಧ್ಯತೆ
  • ನವೆಂಬರ್ 23ರಿಂದ ಕರ್ನಾಟಕದ ಕೆಲವೆಡೆ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ
  • ಕಾಂಗೋದಲ್ಲಿ 95 ಹಕ್ಕಿಪಿಕ್ಕಿ ಸಮುದಾಯದವರು ವಶಕ್ಕೆ ಎಂಬ ವರದಿ: ನೆರವಿಗೆ ಮನವಿ
  • ಕಾನ್ಪುರ ಸೆಂಟ್ರಲ್–ಎಸ್‌ಎಂವಿಟಿ ಬೆಂಗಳೂರು ನಡುವಿನ ಸಾಪ್ತಾಹಿಕ ವಿಶೇಷ ರೈಲು ಡಿ.30ರವರೆಗೆ ವಿಸ್ತರಣೆ, ಪ್ರತಿ ದಿಕ್ಕಿನಲ್ಲಿ ಆರು ಟ್ರಿಪ್
©Copyright 2025 The Bengaluru Live All rights reserved. | MoreNews by AF themes.