ನವದೆಹಲಿ:
ಮುಂದಿನ ಮೂರು ದಿನಗಳ ಕಾಲ ಶಾಲಾ-ಕಾಲೇಜುಗಳಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರಜೆ ಘೋಷಿಸಿದ್ದಾರೆ.
ಇದನ್ನೂ ಓದಿ: ಸೌಹಾರ್ದತೆ ಹಾಗೂ ತಾಳ್ಮೆಯಿಂದ ವರ್ತಿಸುವಂತೆ ವಿದ್ಯಾರ್ಥಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಮನವಿ
“ರಾಜ್ಯದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಶಾಲೆ, ಕಾಲೇಜುಗಳ ಆಡಳಿತ ಮಂಡಳಿಗಳು ಹಾಗೂ ನಾಡಿನ ಸಮಸ್ತ ಜನತೆ ಶಾಂತಿ ಸೌಹಾರ್ದತೆ ಕಾಪಾಡುವಂತೆ ಮನವಿ ಮಾಡುತ್ತೇನೆ. ಮುಂದಿನ ಮೂರು ದಿನಗಳ ಅವಧಿಗೆ ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸುವಂತೆ ಆದೇಶಿಸಲಾಗಿದೆ. ಸಂಬಂಧಿಸಿದ ಎಲ್ಲರೂ ಸಹಕರಿಸಲು ಕೋರಿದೆ” : ಮುಖ್ಯಮಂತ್ರಿ @BSBommai
— CM of Karnataka (@CMofKarnataka) February 8, 2022
ನವದೆಹಲಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಆದೇಶ ನೀಡಿದ್ದು, ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ರಾಜ್ಯದ ಸಮಸ್ತ ಜನತೆಗೆ ಮನವಿ ಮಾಡಿದ್ದಾರೆ.
ಸಂಬಂಧಿಸಿದ ಎಲ್ಲರೂ ಸಹಕರಿಸುವಂತೆ ಅವರು ಮನವಿ ಮಾಡಿದ್ದಾರೆ.
Also Read: Hijab row: Karnataka CM declares 3-day holiday to high schools, colleges
Also Read: Everyone should follow dress code in schools; some fanatics making it an issue: Joshi on hijab row
Also Read: Hijab row: HC says mischievous people keeping the issue burning posts matter for Wednesday