ಬೆಂಗಳೂರು ಗ್ರಾಮಾಂತರ ಜಿಲ್ಲೆ:
ರಾಜ್ಯದಲ್ಲಿ ಹಿಜಾಬ್ ವಸ್ತ್ರ ವಿಷಯವಾಗಿ ಉಚ್ಚ ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಜಿಲ್ಲಾ ವ್ಯಾಪ್ತಿಯ ಶಿಕ್ಷಣ ಇಲಾಖೆಯ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ವ್ಯಾಪ್ತಿಗೆ ಒಳಪಡುವ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರೌಢಶಾಲೆಯ ಸುತ್ತ-ಮುತ್ತ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ ಕಲಂ 144ರಡಿ 2022ರ ಫೆಬ್ರವರಿ 14ರ ಬೆಳಗ್ಗೆ 6.00 ಗಂಟೆಯಿಂದ ವಿವಿಧ ನಿಬಂಧನೆಗಳನ್ನು ವಿಧಿಸಿ, ನಿಷೇದಾಜ್ಞೆಯನ್ನು ಜಾರಿಗೊಳಿಸಿ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಶ್ರೀನಿವಾಸ್ ಅವರು ಆದೇಶಿಸಿದ್ದಾರೆ.
ನಿಷೇದಾಜ್ಞೆಯ ಅವಧಿಯಲ್ಲಿ ಅಧಿಕೃತ ಗುರುತಿನ ಚೀಟಿ ಹೊಂದಿರುವ ಶಾಲೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳ ಪ್ರವೇಶಕ್ಕೆ ಮಾತ್ರ ಅನುಮತಿ ನೀಡಲಾಗಿದೆ.
ನಿಷೇದಾಜ್ಞೆಯ ಅವಧಿಯಲ್ಲಿ ಶಾಲಾ ಆವರಣದಲ್ಲಿ ಶಾಲಾ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳನ್ನು ಹೊರತುಪಡಿಸಿ, ಇತರೆ ಯಾವುದೇ ವ್ಯಕ್ತಿಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಕೆಲವು ಅವಶ್ಯಕ ಸಂದರ್ಭಗಳಲ್ಲಿ ಮಾತ್ರ ವಿದ್ಯಾರ್ಥಿಗಳ ಪಾಲಕರು/ ಪೋಷಕರು ಶಾಲೆಯ ಮುಖ್ಯ ಶಿಕ್ಷಕರು, ಪ್ರಾಂಶುಪಾಲರು ಹಾಗೂ ಆಡಳಿತ ಮಂಡಳಿಯ ಅನುಮತಿ ಪಡೆದು ಶಾಲೆಯ ಒಳಗೆ ಹೋಗಲು ಅನುಮತಿ ನೀಡಲಾಗಿದೆ.
https://t.co/5ExSMakzEx
— Deputy Commissioner Bengaluru Rural (@DC_Bng_Rural) February 13, 2022
ಫೆಬ್ರವರಿ 14ರಂದು ನಿಷೇಧಾಜ್ಞೆ ಜಾರಿಗೊಳಿಸಿ, ಆದೇಶ
ನಿಷೇದಾಜ್ಞೆಯ ಅವಧಿಯಲ್ಲಿ ನಿಷೇಧಿತ ಪ್ರದೇಶದಲ್ಲಿರುವ ಎಲ್ಲಾ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಿದ್ದು, ಆದರೆ ಗುಂಪುಗೂಡುವುದನ್ನು ನಿಷೇಧಿಸಲಾಗಿದೆ ಹಾಗೂ ಯಾವುದೇ ಮತೀಯ ಭಾವನೆಗಳಿಗೆ ಭಂಗ ತರುವಂತಹ ಚಟುವಟಿಕೆಗಳು ನಡೆದ್ದಲ್ಲಿ, ಸಂಬಂಧಪಟ್ಟ ಅಂಗಡಿ ಮಾಲೀಕರ ಮೇಲೆ ಕಾನೂನು ರೀತ್ಯಾ ಕ್ರಮ ವಹಿಸಲಾಗುವುದು.
ನಿಷೇದಾಜ್ಞೆಯ ಅವಧಿಯಲ್ಲಿ ಐದು ಜನರ ಮೇಲ್ಪಟ್ಟು ಗುಂಪುಗಾರಿಕೆ ಮಾಡುವುದಾಗಲಿ, ಇತರೆ ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುವಂತಿಲ್ಲ.
ನಿಷೇದಾಜ್ಞೆಯ ಅವಧಿಯಲ್ಲಿ ಯಾವುದೇ ಸ್ಫೋಟಕ ವಸ್ತುಗಳು ಮತ್ತು ಮಾರಕಾಸ್ತ್ರಗಳನ್ನು ಕೊಂಡೊಯ್ಯುವುದಾಗಲಿ ಅಥವಾ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಓಡಾಡುವಂತಿಲ್ಲ.
ಶಾಲಾ ಆವರಣದ 200 ಮೀಟರ್ ಧಾರ್ಮಿಕ/ ಮತೀಯ ಬಗ್ಗೆ ಯಾವುದೇ ಬಹಿರಂಗ ಪ್ರಚಾರ ಸಭೆ ಮತ್ತು ಮೆರವಣಿಗೆ ಮಾಡುವಂತಿಲ್ಲ.
ನಿಷೇದಾಜ್ಞೆಯನ್ನು ಉಲ್ಲಂಘಿಸಿದ ವ್ಯಕ್ತಿಗಳನ್ನು ಕೂಡಲೇ ಬಂಧಿಸಿ, ಅವರ ವಿರುದ್ಧ ಸೂಕ್ತ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಶ್ರೀನಿವಾಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.