ಬೆಂಗಳೂರು:
ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಹಾಗೂ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಬರುವ ಶಿಕ್ಷಣ ಸಂಸ್ಥೆಗಳಿಗೆ ನೀಡಿದ್ದ ರಜೆಯನ್ನು ಮುಂಜಾಗ್ರತಾ ಕ್ರಮವಾಗಿ ಫೆ.16ರವರೆಗೂ ಮುಂದುವರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಶುಕ್ರವಾರ ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, `ಇಲಾಖೆ ವ್ಯಾಪ್ತಿಗೆ ಬರುವ ಎಲ್ಲ ವಿಶ್ವವಿದ್ಯಾಲಯಗಳು, ಸರಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಥಮ ದರ್ಜೆ ಕಾಲೇಜುಗಳು, ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಕಾಲೇಜುಗಳಿಗೆ ಇದು ಅನ್ವಯಿಸುತ್ತದೆ. ಆದರೆ, ಈ ಅವಧಿಯಲ್ಲಿ ಆನ್ಲೈನ್ ಬೋಧನೆ ಎಂದಿನಂತೆಯೇ ನಡೆಯಲಿದೆ. ಜೊತೆಗೆ, ಈಗಾಗಲೇ ನಡೆಯುತ್ತಿರುವ ಮತ್ತು ನಿಗದಿಯಾಗಿರುವ ಪರೀಕ್ಷೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.
ರಾಜ್ಯದಲ್ಲಿ ಹಿಂಸಾಚಾರ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯ ವಿಶ್ವವಿದ್ಯಾಲಯ, ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಕಾಲೇಜು, ಡಿಪ್ಲೋಮಾ ಕಾಲೇಜುಗಳಿಗೆ ಅನ್ವಯವಾಗುವಂತೆ ನೀಡಿರುವ ರಜೆಯನ್ನು ಫೆ.16 ವರೆಗೆ ಮುಂದುವರೆಸಲಾಗಿದೆ.
— Dr. Ashwathnarayan C. N. (@drashwathcn) February 11, 2022
ಕಾನೂನು ಸುವ್ಯವಸ್ಥೆ ಕಾಪಾಡಬೇಕಾಗಿ ಕೋರಿಕೆ. ಮಾಹಿತಿಗಾಗಿ: pic.twitter.com/sa2a5jKxM4
ಪರಿಸ್ಥಿತಿಯನ್ನು ಅವಲೋಕಿಸಿ, ಕಾಲೇಜು ಪುನಾರಂಭದ ಬಗ್ಗೆ ಫೆ.16ರ ಹೊತ್ತಿಗೆ ತೀರ್ಮಾನಿಸಲಾಗುವುದು ಎಂದು ಅವರು ಹೇಳಿದ್ದಾರೆ.
Also Read: Hijab row: Closure of Karnataka varsities, colleges extended till Feb 16