Himachal Pradesh Rains: Karnataka CM Siddaramaiah orders release of Rs.15 crore to Himachal Pradesh
ಬೆಂಗಳೂರು:
ಪ್ರವಾಹ ಹಾಗೂ ಭೂ ಕುಸಿತದಿಂದ ತತ್ತರಿಸಿರುವ ಹಿಮಾಚಲ ಪ್ರದೇಶಕ್ಕೆ ಕರ್ನಾಟಕ ಆರ್ಥಿಕ ನೆರವು ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆದೇಶದಂತೆ 15 ಕೋಟಿ ರೂಪಾಯಿಯನ್ನು ಹಣಕಾಸು ಇಲಾಖೆ ಹಣ ಬಿಡುಗಡೆ ಮಾಡಿದೆ.
ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ, ಸಂಕಷ್ಟದ ಸಮಯದಲ್ಲಿ ನಮ್ಮ ಸಹೋದರ ಸಹೋದರಿಯರೊಂದಿಗೆ ನಿಲ್ಲುವುದು ಮುಖ್ಯವಾಗಿದೆ. ಕರ್ನಾಟಕದ ಜನರು ಹಿಮಾಚಲ ಪ್ರದೇಶದ ಜನರ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತಾರೆ ಎಂದು ಹೇಳಿದ್ದಾರೆ.
ನೈಸರ್ಗಿಕ ವಿಕೋಪದಿಂದಾಗಿ ಸಂಕಷ್ಟ ಎದುರಿಸುತ್ತಿರುವ ಹಿಮಾಚಲ ಪ್ರದೇಶಕ್ಕೆ 15 ಕೋಟಿ ರೂ. ಗಳ ಆರ್ಥಿಕ ನೆರವು ನೀಡಲು ಮುಖ್ಯಮಂತ್ರಿ @siddaramaiah ಅವರು ಆದೇಶಿಸಿದ್ದಾರೆ. ಇಂದು ಅವರ ಆದೇಶದನ್ವಯ ಹಣ ಬಿಡುಗಡೆ ಮಾಡಲಾಗಿದೆ. pic.twitter.com/7NT7MzQYwK
— CM of Karnataka (@CMofKarnataka) August 21, 2023
