ಬೆಂಗಳೂರು:
ನಗರದ ಡೈರಿ ಸರ್ಕಲ್ ಬಳಿ ಅನ್ಯಕೋಮಿನ ಯುವತಿಗೆ ಬೈಕ್ನಲ್ಲಿ ಡ್ರಾಪ್ ಕೊಡುವಾಗ ವ್ಯಕ್ತಿ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ ಶ್ರೀನಾಥ್ ಮಹದೇವ್ ಜೋಶಿ ತಿಳಿಸಿದ್ದಾರೆ.
ಬಂಧಿತರು 26 ವರ್ಷ ಹಾಗೂ 24 ವರ್ಷದ ಆರೋಪಿಗಳು.
ಮುಸ್ಲಿಂ ಯುವತಿಗೆ ವ್ಯಕ್ತಿಯೋರ್ವ ಬೈಕ್ನಲ್ಲಿ ಡ್ರಾಪ್ ನೀಡುತ್ತಿದ್ದಾಗಈ ವೇಳೆ ಕೆಲ ದುಷ್ಕರ್ಮಿಗಳು ಆತನನ್ನು ಹಿಂಬಾಲಿಸಿಕೊಂಡು ಬಂದು ಬೈಕ್ ನಿಲ್ಲಿಸಿ ಹಲ್ಲೆ ನಡೆಸಿದ್ದರು.
In Bangalore, a Hindu man was assaulted by peacefuls for giving a lift to his female Mus!im colleague
— Mahesh Vikram Hegde 🇮🇳 (@mvmeet) September 19, 2021
Dear authorities,
take action against these peacefuls (instead of demolishing temples) pic.twitter.com/RgbnLLuZMj
ಮುಸ್ಲಿಂ ಯುವತಿಯನ್ನು ಎಲ್ಲಿಗೆ ಕರೆದುಕೊಂಡು ಹೋಗುತ್ತಿರುವೆ ? ಎಂದು ಪ್ರಶ್ನಿಸಿ ಹಲ್ಲೆ ನಡೆಸಿದ್ದಲ್ಲದೇ ಘಟನೆಯ ಕುರಿತು ವಿಡಿಯೋ ಮಾಡಿದ್ದರು. ವಿಡಿಯೋ ಸಾಕಷ್ಟು ವೈರಲ್ ಆಗಿತ್ತು.
ಘಟನೆಗೆ ಸಂಬಂಧಿಸಿದಂತೆ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಜಾಡು ಹಿಡಿದ ಪೊಲೀಸರು ಇಬ್ಬರೂ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
In connection with the case of assault on a bike rider travelling alongwith a woman of different faith,@BlrCityPolice has acted swiftly, identified & secured 2 accused persons. A case is registered & legal action is initiated. My Govt. deals with such incidents with an iron hand.
— Basavaraj S Bommai (@BSBommai) September 19, 2021
ಈ ಘಟನೆ ನಡೆದ 12 ಗಂಟೆಯೊಳಗಾಗಿ ಮೈಕೋಲೇಔಟ್ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಕರಿಬಸವನಗೌಡ ಮಾರ್ಗದರ್ಶನದಲ್ಲಿ ಸುದ್ದಿಗುಂಟೆಪಾಳ್ಯ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಡಿ.ಎಸ್ ನಟರಾಜ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಬಾರದಿತ್ತು. ನಮ್ಮ ಸಮುದಾಯದ ಮಹಿಳೆ ಬೇರೆಯವರ ಜೊತೆ ಹೋಗುತ್ತಾ ಇರೋದಕ್ಕೆ ಹಾಗೆ ಮಾಡಿದೆ. ಮುಂದೆ ಈ ತರಹದ ಯಾವುದೇ ತಪ್ಪು ಮಾಡುವುದಿಲ್ಲ’ಎಂದು ಕಣ್ಣೀರಿಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮಹಿಳೆಯೊಂದಿಗೆ ಪ್ರಯಾಣಿಸುತ್ತಿದ್ದ ಬೈಕ್ ಸವಾರನ ಮೇಲೆ ಹಲ್ಲೆ ಮಾಡಿ, ಅನುಚಿತವಾಗಿ ವರ್ತಿಸಿದ ಇಬ್ಬರು ಆರೋಪಿಗಳನ್ನು @BlrCityPolice ಪೊಲೀಸ್ ತಕ್ಷಣವೇ ಕಾರ್ಯಪ್ರವೃತ್ತರಾಗಿ ಪತ್ತೆಹಚ್ಚಿ ವಶಕ್ಕೆ ಪಡೆದಿದ್ದು, ಪ್ರಕರಣವನ್ನು ದಾಖಲಿಸಲಾಗಿದೆ.
— Kamal Pant, IPS (@CPBlr) September 19, 2021
ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಸುದ್ದುಗುಂಟೆಪಾಳ್ಯ ಪೊಲೀಸರು ರಹಸ್ಯ ಸ್ಥಳದಲ್ಲಿ ಆರೋಪಿಗಳ ವಿಚಾರಣೆ ಮಾಡುತ್ತಿದ್ದಾರೆ. ಡಿಸಿಪಿ ಶ್ರೀನಾಥ್ ಮಹದೇವ್ ಜೋಶಿ ಹಾಗೂ ಎಸಿಪಿ ಕರಿಬಸವನಗೌಡ ಇಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆ ಮಾಡುತ್ತಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು, ‘ವಿಡಿಯೋ ಮಾಡಿದ್ದು ತಪ್ಪಾಯಿತು ಸರ್ ಎಂದು ಕಣ್ಣೀರು ಹಾಕಿದ್ದಾರೆ.
Also Read: Bengaluru’s Taliban ‘cops’: Muslim youths bash up Hindu man in company of Muslim woman