Home ಬೆಂಗಳೂರು ನಗರ ವಾಹನ ಟೋಯಿಂಗ್ ಮಾಡುವಾಗ ನಿಯಮಾವಳಿಗನನ್ನು ಪಾಲಿಸಿ: ಪೊಲೀಸರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ತಾಕೀತು

ವಾಹನ ಟೋಯಿಂಗ್ ಮಾಡುವಾಗ ನಿಯಮಾವಳಿಗನನ್ನು ಪಾಲಿಸಿ: ಪೊಲೀಸರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ತಾಕೀತು

74
0

ಬೆಂಗಳೂರು:

ಬೆಂಗಳೂರು ನಗರದಲ್ಲಿ ಟ್ರಾಫಿಕ್ ನಿಯಮ ಉಲ್ಲಂಘನೆ ನೆಪದಲ್ಲಿ ವಾಹನ ಟೋಯಿಂಗ್ ಸಿಬ್ಬಂದಿಗಳಿಂದ, ಸಾರ್ವಜನಿಕರಿಗಾಗುತ್ತಿರುವ ಕಿರುಕುಳದ ಬಗ್ಗೆ ಕೇಳಿ ಬಂದ ಆಪಾದನೆಗಳ ಹಿನ್ನೆಲೆಯಲ್ಲಿ ಕರ್ನಾಟಕ ಗೃಹ ಸಚಿವ ಆರಗ ಜ್ಞಾನೇಂದ್ರ ರವರು, ಇಂದು, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲಾ ಪಂಥ್ ಹಾಗೂ ಹೆಚ್ಚುವರಿ ಆಯುಕ್ಗ (ಸಂಚಾರ) ರವಿಕಾಂತೇಗೌಡ ಅವರ ಜೊತೆ ಸಭೆ ನಡೆಸಿ ಇನ್ನು ಮುಂದೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ತೆಗೆದು ಕೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.

ಯಾವುದೇ ವಾಹವನವನ್ನು ಟೋಯಿಂಗ್ ಮಾಡುವ ಪೂರ್ವದಲ್ಲಿ ಸ್ಥಳದಲ್ಲಿದ್ದ ಟ್ರಾಫಿಕ್ ಪೊಲೀಸರು ವಾಹನ ಮಾಲೀಕರ ಗಮನ ಸೆಳೆಯಲು ಸೈರನ್ ಅಥವಾ ಹಾರ್ನ್ ಮಾಡಬೇಕು ಹಾಗೂ ವಾಹನ ಟೋಯಿಂಗ್ ಮಾಡಬೇಕಾದ ಸಂಧರ್ಭದಲ್ಲಿ ತೆಗೆಳುಕೊಳ್ಳಬೇಕಾದ ಎಲ್ಲಾ ನಿಯಾಮಾವಳಿಗಳನ್ನು ಚಾಚೂ ತಪ್ಪದೆ ಅನುಸರಿಸಬೇಕು ಎಂದು ಸೂಚಿಸಿದ್ದಾರೆ.

ಇನ್ನು ಮುಂದೆ ಯಾವುದೇ ಸಂಧರ್ಭದಲ್ಲಿ ಟ್ರಾಫಿಕ್ ಪೊಲೀಸರು ವಾಹನ ವನ್ನು ಹೊತ್ತೊಯ್ಯುವ ಸಮಯದಲ್ಲಿ ವಾಹನದ ಮಾಲೀಕರು ಸ್ಥಳದಲ್ಲಿದ್ದರೆ ಕೇವಲ ‘ನೋ ಪಾರ್ಕಿಂಗ್’ ಶುಲ್ಕದ ಹಣವನ್ನು ಮಾತ್ರ ಪಡೆದುಕೊಳ್ಳಬೇಕು ಹಾಗೂ ವಾಹನವನ್ನು ಅಲ್ಲಿಯೇ ಅವರಿಗೆ ಬಿಟ್ಟು ಕೊಡಬೇಕು ಮತ್ತು ಟೋಯಿಂಗ್ ಮಾಡಬಾರದು ಎಂದು ಸೂಚಿಸಿದ್ದಾರೆ.

ಟೋಯಿಂಗ್ ಸಿಬ್ಬಂದಿ ಗಳು ಸಾರ್ವಜನಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಹಾಗೂ ಟೋಯಿಂಗ್ ಮಾಡಲಾಗುವ ವಾಹನಗಳನ್ನು ಅತ್ಯಂತ ಜಾಗರೂಕತೆಯಿಂದ ಯಾವುದೇ ಹಾನಿ ಗೊಳಗಾಗದಂತೆಯೂ ನೋಡಿಕೊಳ್ಳಬೇಕು ಎಂದೂ ಹೇಳಿದ್ದಾರೆ.

LEAVE A REPLY

Please enter your comment!
Please enter your name here