Home ಹಾವೇರಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮನೆ ಆವರಣ ಈಗ 50 ಹಾಸಿಗೆ ಕೋವಿಡ್ ಆರೈಕೆ ಕೇಂದ್ರ

ಗೃಹ ಸಚಿವ ಬಸವರಾಜ ಬೊಮ್ಮಾಯಿ ಮನೆ ಆವರಣ ಈಗ 50 ಹಾಸಿಗೆ ಕೋವಿಡ್ ಆರೈಕೆ ಕೇಂದ್ರ

67
0

ಶಿಗ್ಗಾವಿ:

ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾವಿಯಲ್ಲಿರುವ ತಮ್ಮ ಮನೆಯ ಆವರಣವನ್ನು ಈಗ ಕೋವಿಡ್ ಆರೈಕೆ ಕೇಂದ್ರವಾಗಿ ಪರಿವರ್ತಿಸಿದ್ದಾರೆ.

ಶಿಗ್ಗಾವಿ ಕ್ಷೇತ್ರದ ಕೋವಿಡ್ ಸೋಂಕಿತರ ಜೀವ ರಕ್ಷಣೆಗೆ ಬೊಮ್ಮಾಯಿ ಪಣ ತೊಟ್ಟಿದ್ದಾರೆ. ಸೋಂಕು ಕಾಣಿಸಿಕೊಂಡ ವ್ಯಕ್ತಿಗೆ ಪ್ರಾಥಮಿಕ ವೈದ್ಯೋಪಚಾರ ಒದಗಿಸಲು ಶಿಗ್ಗಾವಿಯಲ್ಲಿ ಇರುವ ತಮ್ಮ ಮನೆಯನ್ನು ಕೋವಿಡ್ ಅರೈಕೆ ಕೇಂದ್ರವನ್ನಾಗಿ ಪರಿವರ್ತಿಸಿದ್ದಾರೆ. ಚಿಕಿತ್ಸೆ ನೀಡಲು ವೈದ್ಯರನ್ನು ನಿಯೋಜಿಸಲಾಗಿದೆ. 50 ಹಾಸಿಗೆ ಗಳನ್ನು ಇಲ್ಲಿ ಅಳವಡಿಸಲಾಗಿದೆ.

ಈ ಸ್ಥಳಕ್ಕೆ ಸಚಿವ ಬೊಮ್ಮಾಯಿ ಗುರುವಾರ ಭೇಟಿ ನೀಡಿ ಅಲ್ಲಿನ ಸಿದ್ಧತೆಗಳನ್ನು ಪರಿಶೀಲಿಸಿದರು. ಇಲ್ಲಿ ಆಕ್ಸಿಜನ್ ಕಾನ್ಸಂಟ್ರೇಟರ್ ಅಳವಡಿಸಿ ಜನರನ್ನು ಉಸಿರಾಟ ತೊಂದರೆಯಿಂದ ಪಾರು ಮಾಡುವ ಉದ್ದೇಶ ಸಚಿವರದ್ದು.

Home Minister Basavaraja Bommais Home Premises is now 50 bed Covid care center

ತಾಲೂಕು ಆಸ್ಪತ್ರೆಗೆ ೨೫ ಆಕ್ಸಿಜನ್ ಕಾನ್ಸಂಟ್ರೇಟರ್ ವಿತರಣೆ

ಉಸಿರಾಟದ ಸಮಸ್ಯೆಯಿಂದ ಬಳಲುವ ಕೋವಿಡ್ ಸೋಂಕಿತರ ಪ್ರಾಣ ಕಾಪಾಡುವ 25 ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ಶಿಗ್ಗಾವಿ ಸಾರ್ವಜನಿಕ ಆಸ್ಪತ್ರೆಗೆ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ್ ಬೊಮ್ಮಾಯಿ ಹಸ್ತಾಂತರಿಸಿದರು.

ಗುರುವಾರ ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಕೋವಿಡ್ ಸ್ಥಿತಿಗತಿ ಮತ್ತು ತಾಲೂಕು ಆಸ್ಪತ್ರೆಯಲ್ಲಿ ಮಾಡಲಾದ ವ್ಯವಸ್ಥೆಗಳ ಕುರಿತು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಅವರು ಆಕ್ಸಿಜನ್ ಕನ್ಸೆಂಟ್ರೇಟರ್ ಗಳನ್ನು _ಶಿಗ್ಗಾವಿ ತಾಲೂಕು ವೈದ್ಯಾಧಿಕಾರಿಗಳಿಗೆ ಸಾಂಕೇತಿಕವಾಗಿ ಹಸ್ತಾಂತರಿಸಿದರು.

ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಹೀಗಾಗಿ ಆಸ್ಪತ್ರೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬೆಡ್ ಗಳನ್ನು ಸಿದ್ದಪಡಿಸಬೇಕಾಗಿದೆ. ಆದ್ದರಿಂದ ಶಿಗ್ಗಾವಿ ತಾಲೂಕು ಆಸ್ಪತ್ರೆಯಲ್ಲಿ ತಕ್ಷಣ 46 ಹೆಚ್ಚುವರಿ ಬೆಡ್ ಗಳನ್ನು ಸಿದ್ಧಪಡಿಸುವಂತೆ ಬಸವರಾಜ್ ಬೊಮ್ಮಾಯಿ ಸೂಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬಸವರಾಜ ಬೊಮ್ಮಾಯಿ, ಸವಣೂರಿನಲ್ಲಿ ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಿ. ಸವಣೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಹೆಚ್ಚುವರಿಯಾಗಿ 20 ಹಾಸಿಗೆಗಳನ್ನು ಸಿದ್ಧಪಡಿಸಿ.‌ ಮುಂದಿನ ನಾಲ್ಕು ದಿನಗಳಲ್ಲಿ 25 ಆಕ್ಸಿಜನ್ ಕನ್ಸೆಂಟ್ರೇಟರ್ ಗಳನ್ನು ಸವಣೂರು ಆಸ್ಪತ್ರೆಗೆ ಕಳುಹಿಸಲಾಗುವುದು ಎಂದು ಅವರು ತಿಳಿಸಿದರು.

Home Minister Basavaraja Bommais Home Premises is now 50 bed Covid care center2

ಆರಂಭದಲ್ಲಿ ಕೋವಿಡ್ ಸಮಸ್ಯೆ ಅಷ್ಟು ಕಂಡುಬರುವುದಿಲ್ಲ ಆದರೆ ಉಸಿರಾಟದ ಸಮಸ್ಯೆ ಆಗುತ್ತಿದ್ದಂತೆಯೇ ರೋಗಿಯ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಉಂಟಾಗಲು ಆರಂಭವಾಗುತ್ತದೆ. ಆದ್ದರಿಂದ ಅಂಥವರಿಗೆ ತಕ್ಷಣ ಆಕ್ಸಿಜನ್ ನೀಡಬೇಕಾದ ಅಗತ್ಯ ಎದುರಾಗುತ್ತದೆ. ಅಂಥವರಿಗಾಗಿಯೇ ಆಕ್ಸಿಜನ್ ಕನ್ಸೆಂಟ್ರೇಟರ್ ಗಳನ್ನು ವಿತರಿಸಲಾಗುತ್ತಿದೆ.

ವೈದ್ಯರು ಸಮಯೋಚಿತವಾಗಿ ಸೋಂಕಿತರಿಗೆ ಆಕ್ಸಿಜನ್ ನೀಡುವ ಮೂಲಕ ಅವರ ಜೀವ ರಕ್ಷಣೆ ಮಾಡುವಂತೆ ವೈದ್ಯಾಧಿಕಾರಿಗಳಿಗೆ ಸಚಿವ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು.

LEAVE A REPLY

Please enter your comment!
Please enter your name here