Home ಬೆಂಗಳೂರು ನಗರ ಮರ್ಯಾದೆಗೇಡು ಹತ್ಯೆಯಂತಹ ಪ್ರಕರಣಗಳ ವಿಚಾರದಲ್ಲಿ ಸರ್ಕಾರ ಕಾನೂನಾತ್ಮಕ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ: ಸಿಎಂ ಸಿದ್ದರಾಮಯ್ಯ

ಮರ್ಯಾದೆಗೇಡು ಹತ್ಯೆಯಂತಹ ಪ್ರಕರಣಗಳ ವಿಚಾರದಲ್ಲಿ ಸರ್ಕಾರ ಕಾನೂನಾತ್ಮಕ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ: ಸಿಎಂ ಸಿದ್ದರಾಮಯ್ಯ

37
0
Cauvery Water to Tamil Nadu: Petition filed by Tamil Nadu is not maintainable, we will present a strong argument: Siddaramaiah
Cauvery Water to Tamil Nadu: Petition filed by Tamil Nadu is not maintainable, we will present a strong argument: Siddaramaiah

ಬೆಂಗಳೂರು:

ಮರ್ಯಾದೆಗೇಡು ಹತ್ಯೆಯಂತಹ ಪ್ರಕರಣಗಳ ವಿಚಾರದಲ್ಲಿ ಸರ್ಕಾರವು ಕಾನೂನಾತ್ಮಕವಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಇಂದು ಅವರು ಟ್ವಿಟರ್ ಮೂಲಕ ಸಂದೇಶ ರವಾನಿಸಿರುವ ಅವರು, ಇಂತಹ ಪ್ರಕರಣದ ವಿಚಾರಣೆಯಲ್ಲಿ ಯಾವುದೇ ಲೋಪವಾಗದಂತೆ ಸರ್ಕಾರ ಎಚ್ಚರವಹಿಸಲಿದೆ ಎಂದು ಕೂಡ ಹೇಳಿದ್ದಾರೆ.

“ಕಳೆದ ಕೆಲ ವಾರಗಳಲ್ಲಿ ರಾಜ್ಯದ ಎರಡು ಕಡೆಗಳಲ್ಲಿ ಮರ್ಯಾದೆಗೇಡು ಹತ್ಯೆ ಪ್ರಕರಣಗಳು ನಡೆದಿರುವ ಸುದ್ದಿ ನಮ್ಮೆಲ್ಲರ ಮನ ಕಲಕಿದೆ. ನಮ್ಮ ಸಮಾಜದಲ್ಲಿ ಅಂತರ್ಗತವಾಗಿರುವ ಜಾತಿ ವ್ಯವಸ್ಥೆ, ಸಾಮಾಜಿಕ ಕಟ್ಟುಪಾಡುಗಳ ಹೀನ ಮನಸ್ಥಿತಿಯನ್ನು ಇಂತಹ ಘಟನೆಗಳು ಪ್ರತಿಫಲಿಸುತ್ತವೆ…

… ಮರ್ಯಾದೆಗೇಡು ಹತ್ಯೆಯಂತಹ ಪ್ರಕರಣಗಳ ವಿಚಾರದಲ್ಲಿ ನಮ್ಮ ಸರ್ಕಾರವು ಕಾನೂನಾತ್ಮಕವಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಿದೆ. ಪ್ರಕರಣದ ತನಿಖೆ, ವಿಚಾರಣೆಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರವಹಿಸಲಿದೆ…

… ಮರ್ಯಾದೆಗೇಡು ಹತ್ಯೆಗಳನ್ನು ಮಾಡುವಂತಹ ಮನಸ್ಥಿತಿಯನ್ನು ಸೃಷ್ಟಿಸಿರುವ ಜಾತಿಗ್ರಸ್ತ ಸಮಾಜದಲ್ಲಿ ಪರಿವರ್ತನೆ, ಜಾಗೃತಿಯನ್ನು ಮೂಡಿಸುವುದು ಅತ್ಯವಶ್ಯಕವಾಗಿದೆ. ಮನುಷ್ಯ ಚಂದ್ರನ ಮೇಲೆ ಕಾಲಿರಿಸಿದ್ದರೂ ದಲಿತರಿಗೆ ದೇವಸ್ಥಾನಗಳಲ್ಲಿ, ಮನೆಗಳಲ್ಲಿ ಕಾಲಿರಿಸಲು ಅವಕಾಶವನ್ನು ನೀಡದಂತಹ ಆಚರಣೆ, ಸಂಪ್ರದಾಯಗಳು ನಮ್ಮಲ್ಲಿವೆ. “ಜಾತಿ ಸಂರಚನೆಯ ಕಟ್ಟುಪಾಡುಗಳನ್ನು ಮೀರಲು ಮಾನವೀಯತೆ, ವಿಚಾರಪರತೆಯೇ ದಾರಿ; ಜಾಗೃತಿಯೇ ಅಸ್ತ್ರ”.

ಸಮಾಜವನ್ನು ಜಾತಿ ಸಂಕೋಲೆಗಳಿಂದ ಬಿಡುಗಡೆಗೊಳಿಸಲು ಪ್ರಯತ್ನಿಸಿದ ಎಲ್ಲ ಸಮಾಜ ಸುಧಾರಕರ ಆಶಯಗಳನ್ನು ವ್ಯಾಪಕವಾಗಿ ಪ್ರಚುರಪಡಿಸುವುದು ಇಂದಿನ ಅಗತ್ಯವಾಗಿದೆ. ಈ ದಿಕ್ಕಿನಲ್ಲಿ ಸರ್ಕಾರವು ರಚನಾತ್ಮಕ ಕಾರ್ಯಕ್ರಮಗಳಿಗೆ ಮುಂದಾಗಲಿದೆ ಎಂದು ಟ್ವೀಟ್ ಮಾಡಿದ್ದಾರೆ.

LEAVE A REPLY

Please enter your comment!
Please enter your name here