ಬೆಳಗಾವಿ:
ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಮಾಜಿ ಕೇಂದ್ರ ಸಚಿವ ದಿವಂಗತ ಸುರೇಶ್ ಅಂಗಡಿ ಅವರಿಗೆ ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದು, ಅವರ ಪತ್ನಿ ಮತ್ತು ಸಂಸದೆ ಮಂಗಳಾ ಅಂಗಡಿ ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಿದರು.
ಸಮಾಜಸೇವೆಗಾಗಿ ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದರು ಹಾಗೂ ರೈಲ್ವೆ ಇಲಾಖೆಯ ರಾಜ್ಯ ಸಚಿವರಾಗಿದ್ದ ದಿ.ಸುರೇಶ ಅಂಗಡಿ ಅವರಿಗೆ (ಮರಣೋತ್ತರ) “ಡಾಕ್ಟರ್ ಆಫ್ ಲೆಟರ್ಸ್” ಗೌರವ ಡಾಕ್ಟರೇಟ್ ಪದವಿ ಹಾಗೂ ಪ್ರೋ. ಮಲ್ಲೇಪುರಂ ಜಿ. ವೆಂಕಟೇಶ್ ಅವರಿಗೆ “ಡಾಕ್ಟರ್ ಆಫ್ ಲೆಟರ್ಸ್” ಗೌರವ ಡಾಕ್ಟರೇಟ್ ಪದವಿ ಪ್ರಧಾನ ಮಾಡಲಾಯಿತು. ಸಂಸದರೂ ಆಗಿರುವ ಮಂಗಳ ಸುರೇಶ್ ಅಂಗಡಿ ಅವರು ದಿ.ಸುರೇಶ್ ಅಂಗಡಿ ಅವರಿಗೆ ವಿಶ್ವವಿದ್ಯಾಲಯ ವತಿಯಿಂದ ಘೋಷಿಸಲಾದ ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ನಡೆದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 11ನೇ ಘಟಿಕೋತ್ಸವ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೂಟ್ ಅವರು ಮಂಗಳಾ ಅಂಗಡಿ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು. ಸುರೇಶ್ ಅಂಗಡಿ ಮಾತ್ರವಲ್ಲದೇ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ರಾಮಚಂದ್ರಗೌಡ ಅವರಿಗೂ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗಿದೆ.
Once again I whole heartedly thank our Honourable Governor Shri.Thaawar Chand Gehlotji, Chancellor, Vice-Chancellor and Syndicate members of Rani Chennamma University, Belagavi for recognising the contribution of Late Shri.Suresh Angadiji.#prouddaughtermoment
— Shradha Angadi (@ShradhaAngadi) March 20, 2023
ಘಟಿಕೋತ್ಸವದಲ್ಲಿ ಒಟ್ಟು 47,185 ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಯಿತು. ಸ್ನಾತಕೋತ್ತರ ಹಾಗೂ ಸ್ನಾತಕ ವಿದ್ಯಾರ್ಥಿಗಳಿಗೆ 11 ಸ್ವರ್ಣ ಪದಕಗಳು, 27 ಪಿಹೆಚ್.ಡಿ. ಪದವಿಗಳನ್ನು ಪ್ರದಾನ ಮಾಡಲಾಯಿತು.
11 ಸ್ವರ್ಣ ಪದಕ; 27 ಪಿಎಚ್.ಡಿ ಪ್ರದಾನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ರಾಮಚಂದ್ರಗೌಡ ಸ್ವಾಗತ ಭಾಷಣದಲ್ಲಿ ವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ಶೈಕ್ಷಣಿಕ ಸಾಧನೆ ಹಾಗೂ ಕ್ರೀಡಾ ಸಾಧನೆ ಕುರಿತು ಮಾತನಾಡಿದರು. ವಿವಿಯ ನೂತನ ಕ್ಯಾಂಪಸ್ ನಿರ್ಮಾಣ ಕಾಮಗಾರಿ ಭರದಿಂದ ಸಾಗುತ್ತಿದೆ ಎಂದು ಅವರು ವಿವರಿಸಿದರು. ಪ್ರಾಸ್ತಾವಿಕ ನುಡಿಗಳಲ್ಲಿ ಪ್ರಸಕ್ತ ವರ್ಷದಲ್ಲಿ 27 ಪಿಎಚ್.ಡಿ; 2611 ಸ್ನಾತಕೋತ್ತರ ಮತ್ತು 44,498 ಸ್ನಾತಕ ಪದವಿಗಳನ್ನು ನೀಡಲಾಗುತ್ತಿದೆ ಇದರೊಂದಿಗೆ 11 ಬಂಗಾರದ ಪದಕಗಳು ಮತ್ತು 149 ರ್ಯಾಂಕ್ ಗಳನ್ನು ಪ್ರದಾನ ಮಾಡಲಾಗುತ್ತಿದೆ ಎಂದು ಹೇಳಿದರು.
ಘಟಿಕೋತ್ಸವದಲ್ಲಿ ವಿಶ್ರಾಂತ ಕುಲಪತಿ ಹಾಗೂ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಮಂಡಳಿಯ ಮಾಜಿ ಉಪಾಧ್ಯಕ್ಷರಾದ ಡಾ.ಬಿ.ತಿಮ್ಮೇಗೌಡ, ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಸಚಿವರಾದ ರಾಜಶ್ರೀ ಜೈನಾಪುರ, ಕುಲಸಚಿವರು(ಮೌಲ್ಯಮಾಪನ) ಪ್ರೊ.ಶಿವನಾಂದ ಗೊರನಾಳೆ, ಹಣಕಾಸು ಅಧಿಕಾರಿಗಳಾದ ಪ್ರೊ. ಎಸ್.ಬಿ.ಆಕಾಶ, ಸಿಂಡಿಕೇಟ್ ಹಾಗೂ ವಿದ್ಯಾವಿಷಯಕ ಪರಿಷತ್ತಿನ ಸದಸ್ಯರು, ವಿವಿಧ ವಿಭಾಗಗಳ ಡೀನ್, ವಿಭಾಗ ಮುಖ್ಯಸ್ಥರು, ವಿದ್ಯಾರ್ಥಿಗಳು ಮತ್ತು ಪಾಲಕರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.