Home ಆರೋಗ್ಯ Cholera in Bengaluru: ವೈದ್ಯಕೀಯ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಟೆಲ್‌ ವಾರ್ಡನ್‌ ಸಸ್ಪೆಂಡ್‌

Cholera in Bengaluru: ವೈದ್ಯಕೀಯ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಟೆಲ್‌ ವಾರ್ಡನ್‌ ಸಸ್ಪೆಂಡ್‌

23
0
Bangalore Medical College

ಬೆಂಗಳೂರು: ವೈದ್ಯಕೀಯ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಟೆಲ್‌ ವಾರ್ಡನ್‌ ಡಾ.ಅಖಿಲಾಂಡೇಶ್ವರಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಲು ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಸೂಚಿಸಿದ್ದಾರೆ.

ಕಲುಷಿತ ನೀರು ಸೇವನೆಯಿಂದ ಅಸ್ವಸ್ಥಗೊಂಡು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನೆ ಸಂಸ್ಥೆಯ (ಬಿಎಂಸಿಆರ್‌ಐ) ಬಾಲಕಿಯರ ಹಾಸ್ಟೆಲ್‌ನ 47 ವಿದ್ಯಾರ್ಥಿನಿಯರ ಪೈಕಿ ಇಬ್ಬರಲ್ಲಿಕಾಲರಾ ಸೋಂಕಿನ ಲಕ್ಷಣಗಳು ಕಂಡುಬಂದಿವೆ. ಮತ್ತೊಬ್ಬ ವಿದ್ಯಾರ್ಥಿನಿಯ ವರದಿ ಬರಬೇಕಿದೆ.

ಏ.5ರಂದು ವಾಂತಿ-ಭೇದಿಯಿಂದ ತೀವ್ರ ಅಸ್ವಸ್ಥಗೊಂಡಿದ್ದ 47 ವೈದ್ಯಕೀಯ ವಿದ್ಯಾರ್ಥಿನಿಯರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಹಾಸ್ಟೆಲ್‌ಗಳ ನಿರ್ವಹಣೆಗಾಗಿ ಸಮಿತಿ ರಚಿಸಲು ಮತ್ತು ಮಾಸಿಕ ಸಭೆ ನಡೆಸಲು, ತಿಂಗಳಿಗೊಮ್ಮೆ ಹಾಸ್ಟೆಲ್‌ ಆವರಣಕ್ಕೆ ಭೇಟಿ ನೀಡಲು ಬಿಎಂಸಿಆರ್‌ಐ ಡೀನ್‌ ಮತ್ತು ನಿರ್ದೇಶಕರಿಗೆ ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here