ಬೆಂಗಳೂರು:
ವಿವಿಧ ವಸತಿ ಯೋಜನೆಗಳಡಿ 4 ಲಕ್ಷ ಮನೆಗಳಿಗೆ ಅರ್ಹ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಕೂಡಲೇ ಪ್ರಾರಂಭಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದ್ದಾರೆ.
ಈ ಬಗ್ಗೆ ಸರ್ಕಾರಿ ಆದೇಶ ಹೊರಡಿಸಲಾಗಿದ್ದು, ಕೇಂದ್ರ ಸರ್ಕಾರದಿಂದ 4 ಲಕ್ಷ ಹೊಸ ಮನೆಗಳ ಗುರಿಗೆ ಅನುಮೋದನೆ ದೊರೆಯದಿದ್ದಲ್ಲಿ ಅಥವಾ ಅದಕ್ಕಿಂತ ಕಡಿಮೆ ಮನೆಗಳಿಗೆ ಅನುಮೋದನೆ ದೊರೆತಲ್ಲಿ ಉಳಿದ ಮನೆಗಳನ್ನು ರಾಜ್ಯದ ವಸತಿ ಯೋಜನೆಗಳಡಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿತ್ತು.
ಮುಖ್ಯಮಂತ್ರಿ @BSBommai ಅವರು ಇಂದು ಬೆಂಗಳೂರಿನಲ್ಲಿ ತಮ್ಮ ನಿವಾಸದ ಬಳಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ಕುಂದುಕೊರತೆಗಳನ್ನು ಆಲಿಸಿದರು. pic.twitter.com/jnDArJhkGf
— CM of Karnataka (@CMofKarnataka) September 10, 2021
ಅದರಂತೆ ರಾಜ್ಯದಾದ್ಯಂತ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದ ದುರ್ಬಲ ವರ್ಗದ ವಸತಿ ರಹಿತರಿಗಾಗಿ ವಸತಿ ಯೋಜನೆಯಡಿ 4 ಲಕ್ಷ ಹೊಸ ಮನೆಗಳಿಗೆ ಎದುರಾಗಿ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಪ್ರಾರಂಭಿಸಲು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.