ಬೆಂಗಳೂರು:
ಗೃಹಲಕ್ಷ್ಮೀ ಯೋಜನೆಯಡಿ ಆಗಸ್ಟ್ 15ಕ್ಕೆ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಸಂದಾಯ ಆಗಲಿದೆ. ರೇಷನ್ ಕಾರ್ಡ್ನಲ್ಲಿ ಮನೆಯ ಯಜಮಾನಿಯಾಗಿರುವವರು ಯೋಜನೆಯ ಫಲಾನುಭವಿಯಾಗಲಿದ್ದಾರೆ. ಅವರ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿರಬೇಕು. ಅವರ ಪತಿಯ ಆಧಾರ್ ಕಾರ್ಡ್ ನೀಡಬೇಕು. ಜಿಎಸ್ಟಿ ಹಾಗೂ ಆದಾಯ ತೆರಿಗೆ ಪಾವತಿದಾರರ ಪತ್ನಿಯರಿಗೆ ಈ ಯೋಜನೆ ಅನ್ವಯವಾಗುವುದಿಲ್ಲ. ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್, ಗ್ರಾಪಂಗಳಲ್ಲಿರುವ ಬಾಪೂಜಿ ಸೇವಾ ಕೇಂದ್ರಗಳಲ್ಲಿ ನೋಂದಣಿಗೆ ಅವಕಾಶ ಇದೆ. ಸರ್ಕಾರ ನೇಮಕ ಮಾಡಿರುವ ಪ್ರಜಾಪ್ರತಿನಿಧಿಗಳು ಮನೆ ಬಾಗಿಲಿಗೆ ಬಂದು ನೋಂದಣಿ ಮಾಡಲಿದ್ದಾರೆ.
- ರೇಷನ್ ಕಾರ್ಡ್ನಲ್ಲಿ ಗುರುತಿಸಿರುವ ಮಹಿಳೆ ಮೊಬೈಲ್ ಸಂಖ್ಯೆಗೆನೋಂದಣಿ ದಿನಾಂಕ, ಸಮಯ, ಸ್ಥಳದ ವಿವರ ಎಸ್ಎಂಎಸ್ ಮೂಲಕ ಕಳುಹಿಸಲಾಗುತ್ತದೆ.
- ನೋಂದಣಿ ಮಾಡಿಸಲು ಯಾವುದೇ ರೀತಿಯ ಶುಲ್ಕ ಇರುವುದಿಲ್ಲ.
- ಪ್ರಜಾಪ್ರತಿನಿಧಿಗಳು ಮನೆ ಬಾಗಿಲಿಗೆ ತೆರಳಿ ನೋಂದಣಿ ಮಾಡಲಿದ್ದಾರೆ.
- ಸಮಸ್ಯೆಗಳಿದ್ದಲ್ಲಿ 1902ಗೆ ಕರೆ ಮಾಡಿ ಅಥವಾ 8147500500 ಸಂಖ್ಯೆಗೆ ಎಸ್ಎಂಎಸ್ ಮಾಡಿ ಮಾಹಿತಿ ಪಡೆಯಬಹುದು.
- ನಿಗದಿತ ಸಮಯಕ್ಕೆ ಹೋಗಲು ಸಾಧ್ಯವಾಗದಿದ್ದರೆ ಮುಂದಿನ ಯಾವುದೇ ದಿನಾಂಕದಂದು ಸಂಜೆ 5 -7 ಗಂಟೆಯೊಳಗೆ ಭೇಟಿ ನೀಡಿ.
- ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಬಿಟ್ಟು ಬೇರೆ ಬ್ಯಾಂಕ್ಗೆ ನೋಂದಣಿ ಮಾಡಿಸಬಹುದು.
- ನೋಂದಣಿ ಆದಾಗ ಮಂಜೂರಾತಿ ಪತ್ರ ನೀಡಲಾಗುತ್ತದೆ.
- ಪ್ರಜಾಪ್ರತಿನಿಧಿಗಳಲ್ಲಿ ನೋಂದಣಿ ಯಾದರೆ ಮಂಜೂರಾತಿ ಪತ್ರ ತಡವಾಗಿ ತಲುಪಲಿದೆ.