Home Uncategorized HSRP ನಂಬರ್​ ಪ್ಲೇಟ್​​ ಅಳವಡಿಸುವ ಅವಧಿ ವಿಸ್ತರಣೆ

HSRP ನಂಬರ್​ ಪ್ಲೇಟ್​​ ಅಳವಡಿಸುವ ಅವಧಿ ವಿಸ್ತರಣೆ

20
0

ಬೆಂಗಳೂರು : ಅತಿ ಸುರಕ್ಷಿತ ನೋಂದಣಿ ಫಲಕ (HSRP) ಅಳವಡಿಕೆಗೆ ನೀಡಲಾಗಿದ್ದ ಗಡುವನ್ನು ಮೂರು ತಿಂಗಳು ವಿಸ್ತರಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

2019ರ ಎಪ್ರಿಲ್ 1 ಕ್ಕಿಂತ ಮೊದಲು ನೋಂದಣಿಯಾಗಿರುವ ವಾಹನಗಳ ಮಾಲಕರಿಗೆ ಅತಿ ಸುರಕ್ಷಿತ ನೋಂದಣಿ ಫಲಕ (HSRP) ಅಳವಡಿಕೆಗೆ ನೀಡಲಾಗಿದ್ದ ಗಡುವನ್ನು ಮೂರು ತಿಂಗಳ ಕಾಲ ವಿಸ್ತರಣೆ ಮಾಡಿದ್ದು, ವಾಹನ ಸವಾರರು ತರಾತುರಿಯಿಲ್ಲದೆ ಎಚ್.ಎಸ್.ಆರ್.ಪಿ ಅಳವಡಿಸಿಕೊಳ್ಳಬಹುದಾಗಿದೆ.

ವಿಧಾನ್​ ಪರಿಷತ್​​ನಲ್ಲಿ  ಪ್ರಶ್ನೋತ್ತರ ಕಲಾಪದ ವೇಳೆ ಸದಸ್ಯ ಮಾದೇಗೌಡ ಅವರು ಮಾತನಾಡಿ “ರಾಜ್ಯದಲ್ಲಿ ಎರಡು ಕೋಟಿಗೂ ಹೆಚ್ಚಿನ ವಾಹನಗಳಿದ್ದು, ಹಳ್ಳಿ ಜನರು ವಾಹನಗಳಿಗೆ ಇನ್ನೂ HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳಬೇಕಾಗಿದೆ. ಆನ್​ಲೈನ್​ನಲ್ಲಿ ನೊಂದಣಿ ಮಾಡಬೇಕಿರುವ ಹಿನ್ನೆಲೆಯಲ್ಲಿ ಫೇಕ್​ ವೆಬ್ ಸೈಟ್ ಹಾವಳಿ ಹೆಚ್ಚಾಗಿದೆ ಇದರ ಬಗ್ಗೆ ಸಾರಿಗೆ ಇಲಾಖೆ ಕ್ರಮ ಕೈಗೊಳ್ಳಬೇಕು. ಅಲ್ಲದೆ HSRP ನಂಬರ್​ ಪ್ಲೇಟ್​ ಅಳವಡಿಕೆಗೆ ಅವಧಿಯನ್ನು ಸರಕಾರ ನೀಡಿರುವ ಗಡುವು ವಿಸ್ತರಿಸಬೇಕು” ಎಂದು ಹೇಳಿದರು.

ಮಾದೇಗೌಡ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಅತಿ ಸುರಕ್ಷಿತ ನೋಂದಣಿ ಫಲಕ (HSRP)​​ ಅಳವಡಿಸುವ ಗಡುವನ್ನು ಮೂರು ತಿಂಗಳು ವಿಸ್ತರಿಸಲಾಗುತ್ತದೆ. ಇನ್ನು ಫೇಕ್​ ವೆಬ್ ಸೈಟ್ ಬಗ್ಗೆ   ಸರಕಾರದಿಂದ ಎಚ್ಚರಿಕೆ ವಹಿಸಲಾಗುತ್ತದೆ ಎಂದು ಸದನಕ್ಕೆ ತಿಳಿಸಿದರು.

ಫೆ. 17ಕ್ಕೆ ಅಂತಿಮ ಗಡುವು ನೀಡಿದ್ದ ಸಾರಿಗೆ ಇಲಾಖೆ

ಅತಿ ಸುರಕ್ಷಿತ ನೋಂದಣಿ ಫಲಕ (HSRP) ಅಳವಡಿಕೆಗೆ ಈ ಹಿಂದೆ  2024ರ ಫೆಬ್ರವರಿ 17ಕ್ಕೆ ಅಂತಿಮ ಗಡುವು ನಿಗಧಿ ಮಾಡಲಾಗಿತ್ತು.

HSRP ಅಳವಡಿಕೆಯ ಕಾರ್ಯವಿಧಾನ:

https://transport.karnataka.gov.in ಅಥವಾ www.siam.in ಗೆ ಭೇಟಿ ನೀಡಿ BOOK HSRP ಅನ್ನು ಕ್ಲಿಕ್ ಮಾಡಿ.

► ನಿಮ್ಮ ವಾಹನ ತಯಾರಕರನ್ನು ಆಯ್ಕೆ ಮಾಡಿ. ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ, HSRP ಶುಲ್ಕವನ್ನು ಆನ್‍ಲೈನ್ ನಲ್ಲಿ ಪಾವತಿಸಿ.

► ಶುಲ್ಕ ಪಾವತಿಯನ್ನು ನಗದು ರೂಪದಲ್ಲಿ ಪಾವತಿ ಮಾಡುವಂತಿಲ್ಲ, ನಿಮ್ಮ ಅನುಕೂಲಕ್ಕೆ ತಕ್ಕಂತೆ HSRP ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆ ಮಾಡಿ.

► ನಿಮ್ಮ ವಾಹನದ ಯಾವುದೆ ತಯಾರಕ/ಡೀಲರ್ ಸಂಸ್ಥೆಗೆ ಭೇಟಿ ನೀಡಿ ವಾಹನ ಮಾಲಕರ ಕಚೇರಿ ಆವರಣ/ ಮನೆಯ ಸ್ಥಳದಲ್ಲಿ HSRP ಅಳವಡಿಕೆಗಾಗಿ ಆಯ್ಕೆ ಮಾಡಬಹುದು.

ಯಾವುದೇ ತೆರೆದ ಮಾರುಕಟ್ಟೆಯ ರಸ್ತೆ ಬದಿಯ ಮಾರಾಟಗಾರರಿಂದ ನಕಲಿ ಹೊಲೊಗ್ರಾಮ್, IND ಮಾರ್ಕ್, ಇಂಡಿಯಾ ಎಂದು ಕೆತ್ತಲಾದ ಅಥವಾ ಕೆತ್ತಿದಂತಹ ಅನುಕರಣೆಯ HSRP/ ಒಂದೇ ರೀತಿಯ ಪ್ಲೇಟ್ ಗಳು/ ಸ್ಮಾರ್ಟ್ ನಂಬರ್ ಪ್ಲೇಟ್ ಗಳನ್ನು ಅಳವಡಿಸುವಂತಿಲ್ಲ.

LEAVE A REPLY

Please enter your comment!
Please enter your name here