Home ಹುಬ್ಬಳ್ಳಿ Hubli | ನೇಹಾ ಹಿರೇಮಠ್ ಮನೆಗೆ ಸಿಐಡಿ ಅಧಿಕಾರಿಗಳ ಭೇಟಿ

Hubli | ನೇಹಾ ಹಿರೇಮಠ್ ಮನೆಗೆ ಸಿಐಡಿ ಅಧಿಕಾರಿಗಳ ಭೇಟಿ

27
0

ಹುಬ್ಬಳ್ಳಿ :  ಬಿವಿಬಿ ಕಾಲೇಜಿನಲ್ಲಿ ಕೊಲೆಯಾದ ನೇಹಾ ಹಿರೇಮಠ್ ಮನೆಗೆ ಆಗಮಿಸಿದ ಸಿಐಡಿ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ

ಇಂದು ಸಿಎಂ ಸಿದ್ದರಾಮಯ್ಯ ಅವರು ನೇಹಾ ಹಿರೇಮಠ್ ಮನೆಗೆ ಬೇಟಿ ನೀಡಲಿದ್ದು, ಅದಕ್ಕೂ  ಮುನ್ನವೇ ಸಿಐಡಿ ಎಸ್ಪಿ ವೆಂಕಟೇಶ್ ನೇತೃತ್ವದಲ್ಲಿ ನೇಹಾ ಮನೆಗೆ ಆಗಮಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ನೇಹಾ ಹಿರೇಮಠ್ ಪೋಷಕರೊಂದಿಗೆ ಮಾಹಿತಿ ಪಡೆದುಕೊಂಡಿದ್ದಾರೆ.

ಹುಬ್ಬಳ್ಳಿಯ ಬಿಡನಾಳದಲ್ಲಿರುವ ನೇಹಾ ಹಿರೇಮಠ್ ಮನೆಗೆ ಸಿಎಂ ಸಿದ್ಧರಾಮಯ್ಯ ಅವರು ಇಂದು ಭೇಟಿ ನೀಡಲಿದ್ದಾರೆ. ಸೆಕ್ಯೂರಿಟಿ ಹೈ ಅಲರ್ಟ್ ಘೋಷಣೆ ಮಾಡಿದ್ದು, ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.

ಬೆಂಗಳೂರಿನಿಂದ ತಡಸ ಗ್ರಾಮದ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಸಿಎಂ ಸಿದ್ಧರಾಮಯ್ಯನವರು, ನೇಹಾ ಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ.

LEAVE A REPLY

Please enter your comment!
Please enter your name here