Home ಕರ್ನಾಟಕ ಸೆಪ್ಟೆಂಬರ್ 15 ರಂದು ಸಂವಿಧಾನದ ಆಶಯವನ್ನು ಬಿಂಬಿಸುವ ಬೃಹತ್ ಮಾನವ ಸರಪಳಿ -ಸಮಾಜ ಕಲ್ಯಾಣ ಸಚಿವ...

ಸೆಪ್ಟೆಂಬರ್ 15 ರಂದು ಸಂವಿಧಾನದ ಆಶಯವನ್ನು ಬಿಂಬಿಸುವ ಬೃಹತ್ ಮಾನವ ಸರಪಳಿ -ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ

14
0

ಬೆಂಗಳೂರು, ಸೆಪ್ಟೆಂಬರ್ 14 ( ಕರ್ನಾಟಕ ವಾರ್ತೆ): ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ರಾಜ್ಯ ಸರ್ಕಾರ, ಸೆಪ್ಟೆಂಬರ್ 15ರಂದು ಬೀದರ್ ಜಿಲ್ಲೆಯ ಬಸವ ಕಲ್ಯಾಣದಿಂದ ಚಾಮರಾಜನಗರದವರೆಗೆ ಸುಮಾರು 2500 ಕಿ.ಮೀ ಉದ್ದದ ಮಾನವ ಸರಪಳಿಯನ್ನು ನಿರ್ಮಿಸುವ ಮೂಲಕ ವಿಶ್ವದಾಖಲೆ ಮಾಡಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ.ಮಹದೇವಪ್ಪ ತಿಳಿಸಿದರು

ಅವರು ಇಂದು ತಮ್ಮ ಅಧಿಕೃತ ನಿವಾಸದಲ್ಲಿ ಹಮ್ಮಿಕೊಳ್ಳಲಾದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

ಕರುನಾಡನ್ನು ಬೆಸೆಯುವ ಈ ವಿನೂತನ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು, ಜನಪ್ರತಿನಿಧಿಗಳು, ಮಂತ್ರಿಗಳು , ಅಧಿಕಾರಿಗಳು, ಸಂಘ ಸಂಸ್ಥೆಗಳ ಕಾರ್ಯಕರ್ತರು ಸೇರಿದಂತೆ ಇತರ ಎಲ್ಲ ವರ್ಗದ ಸುಮಾರು 25 ಲಕ್ಷ ಜನರು ಕೈಕೈ ಹಿಡಿದು ಮಾನವ ಸರಪಳಿ ರಚಿಸಲಿದ್ದಾರೆ ಎಂದರು

2023ರಲ್ಲಿ ಸಂವಿಧಾನ ಪೀಠಿಕೆ ವಾಚನ ಮತ್ತು ಸಂವಿಧಾನ ಜಾಗೃತಿ ಜಾಥಾವನ್ನು ಯಶಸ್ವಿ ಯಾಗಿ ನಡೆಸಿದ ಸರ್ಕಾರವು ಅದರ ಮುಂದುವರೆದ ಭಾಗವಾಗಿ ಈ ಬೃಹತ್ ಮಾನವ ಸರಪಳಿಯನ್ನು ಆಯೋಜಿಸಿದೆ‌ ಎಂದ ಅವರು ಸಂವಿಧಾನದ ಆಶಯವಾದ ಸ್ವಾತಂತ್ರ್ಯ , ಸಮಾನತೆ ಹಾಗೂ ಭ್ರಾತೃತ್ವದ ಮಹತ್ವಗಳನ್ನು ಸಾರುವ ಹಾಗೂ ಜಾಗೃತಿ ಮೂಡಿಸುವ ವಿಶ್ವಮಟ್ಟದ ಕಾರ್ಯಕ್ರಮ ಇದಾಗಿದೆ ಎಂದರು

ಸಮಸ್ತ ಜನರು ಈ ಕಾರ್ಯಕ್ರಮದಲ್ಲಿ ಭಾಗಿಯಾಗುವುದರ ಮೂಲಕ ಪ್ರಜಾಪ್ರಭುತ್ವವನ್ನು ಉಳಿಸಿ ಬೆಳೆಸಬೇಕೆಂದರು .

ರಾಜ್ಯದ 31 ಜಿಲ್ಲೆಗಳಲ್ಲಿ ಏಕಕಾಲಕ್ಕೆ ನಡೆಯುವ ಈ ಕಾರ್ಯಕ್ರಮವನ್ನು ಸೆಪ್ಟೆಂಬರ್ 15 ರ ಬೆಳಿಗ್ಗೆ 9 ಗಂಟೆಗೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಮಾನವ ಸರಪಳಿಯನ್ನು ನಿರ್ಮಿಸಲಾಗುವುದು ಹಾಗೂ ಅದೇ ಪ್ರದೇಶಗಳಲ್ಲಿ ಹೆಚ್ಚು ಸಸಿಗಳನ್ನು ನೆಡಲಾಗುವುದೆಂದರು‌. ಮಾನವ ಸರಪಳಿಯಲ್ಲಿ ಭಾಗವಹಿಸುವವರ ಸುರಕ್ಷತೆಗಾಗಿ ಅಗತ್ಯ ಪೊಲೀಸ್ ಸಿಬ್ಬಂದಿಯನ್ನು ನೇಮಿಸಲಾಗಿದೆ ಎಂದರು.

ಮಾನವ ಸರಪಳಿಯಲ್ಲಿ ಭಾಗವಹಿಸುವ
ಪ್ರತಿಯೊಬ್ಬರಿಗೂ ಪ್ರಮಾಣಪತ್ರವನ್ನು ನೀಡಲಾಗುವುದು ಎಂದರು.

ಪತ್ರಿಕಾ ಗೋಷ್ಠಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಕ್ಯಾಪ್ಟನ್ ಮಣಿವಣ್ಣನ್ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾದ ಡಾ. ಪುರುಷೋತ್ತಮ ಬಿಳಿಮಲೆ ಹಾಜರಿದ್ದರು.

LEAVE A REPLY

Please enter your comment!
Please enter your name here