Home Uncategorized Hyundai Ioniq 5: ಹ್ಯುಂಡೈ ಐಯಾನಿಕ್ 5 ಎಲೆಕ್ಟ್ರಿಕ್ ಕಾರು ಬಿಡುಗಡೆ ಮಾಹಿತಿ ಬಹಿರಂಗ

Hyundai Ioniq 5: ಹ್ಯುಂಡೈ ಐಯಾನಿಕ್ 5 ಎಲೆಕ್ಟ್ರಿಕ್ ಕಾರು ಬಿಡುಗಡೆ ಮಾಹಿತಿ ಬಹಿರಂಗ

39
0

ಮಧ್ಯಮ ಕ್ರಮಾಂಕದ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಹ್ಯುಂಡೈ(Hyundai) ಕಂಪನಿಯು ಸಾಮಾನ್ಯ ಕಾರುಗಳ ಜೊತೆಗೆ ಎಲೆಕ್ಟ್ರಿಕ್ ಕಾರುಗಳ(Electric Cars) ಮೇಲೂ ಗಮನಹರಿಸುತ್ತಿದ್ದು, ಕಂಪನಿಯು ಮುಂದಿನ ಕೆಲವೇ ದಿನಗಳಲ್ಲಿ ತನ್ನ ಬಹುನೀರಿಕ್ಷಿತ ಐಯಾನಿಕ್ 5 (Ioniq 5) ಎಲೆಕ್ಟ್ರಿಕ್ ಎಸ್ ಯುವಿಯನ್ನು ಬಿಡುಗಡೆ ಮಾಡುವ ಸುಳಿವು ನೀಡಿದೆ. ಹೊಸ ಕಾರು ಖರೀದಿಗಾಗಿ ಡಿಸೆಂಬರ್ 10ರಿಂದ ಅಧಿಕೃತ ಬುಕಿಂಗ್ ಆರಂಭಿಸಲಾಗುತ್ತಿದ್ದು, ಹೊಸ ಕಾರು 2023ರ ಜನವರಿಯಲ್ಲಿ ನಡೆಯಲಿರುವ ದೆಹಲಿ ಆಟೋ ಎಕ್ಸ್ ಪೋದಲ್ಲಿ ಅಧಿಕೃತವಾಗಿ ಬಿಡುಗಡೆಗೊಳ್ಳುವ ನೀರಿಕ್ಷೆಯಿದೆ.

ಭಾರತದಲ್ಲಿ ಈಗಾಗಲೇ ಕೊನಾ ಎಲೆಕ್ಟ್ರಿಕ್ ಕಾರು ಮಾರಾಟದೊಂದಿಗೆ ಇವಿ ಮಾರುಕಟ್ಟೆಯಲ್ಲಿನ ಗ್ರಾಹಕರ ಬೇಡಿಕೆಗಳನ್ನು ಅರಿತುಕೊಂಡಿರುವ ಹ್ಯುಂಡೈ ಕಂಪನಿಯು ಹೊಸ ಐಯಾನಿಕ್ 5 ಬಿಡುಗಡೆಗಾಗಿ ಸಿದ್ದವಾಗುತ್ತಿದ್ದು, ಐಷಾರಾಮಿ ಸೌಲಭ್ಯಗಳನ್ನು ಒಳಗೊಂಡಿರುವ ಹೊಸ ಕಾರು ಹಲವಾರು ವಿಶೇಷ ತಂತ್ರಜ್ಞಾನ ಪ್ರೇರಣೆ ಹೊಂದಿದೆ.

ತಂತ್ರಜ್ಞಾನ ಪ್ರೇರಣೆ ಮತ್ತು ಪ್ಲ್ಯಾಟ್ ಫಾರ್ಮ್

ಸುಧಾರಿತ ವೈಶಿಷ್ಟ್ಯತೆಗಳೊಂದಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಈಗಾಗಲೇ ಭಾರೀ ಬೇಡಿಕೆ ಪಡೆದುಕೊಳ್ಳುತ್ತಿರುವ ಐಯಾನಿಕ್ 5 ಎಲೆಕ್ಟ್ರಿಕ್ ಕ್ರಾಸ್ ಓವರ್ ಎಸ್‌ಯುವಿ ಮಾದರಿಯು ಪ್ರತಿಸ್ಪರ್ಧಿಕಿಯಾ ಇವಿ6 ಮಾದರಿಗಿಂತಲೂ ಆಕರ್ಷಕ ಬೆಲೆಯಲ್ಲಿ ಬಿಡುಗಡೆಯಾಗುವ ಸುಳಿವು ನೀಡಿದೆ. ಆಧುನಿಕ ತಂತ್ರಜ್ಞಾನ ಪ್ರೇರಿತ ಗ್ಲೋಬಲ್ ಮಾಡ್ಯುಲರ್ ಪ್ಲಾಟ್‌ಫಾರ್ಮ್ (ಇ-ಜಿಎಂಪಿ) ಪ್ಲ್ಯಾಟ್‌ಫಾರ್ಮ್ ಅಡಿಯಲ್ಲಿ ಹೊಸ ಕಾರು ನಿರ್ಮಾಣಗೊಂಡಿದ್ದು, ಹೊಸ ಕಾರು ಮಾದರಿ ಭಾರತದಲ್ಲಿ ಮಾತ್ರವಲ್ಲ ವಿಶ್ವದ ಪ್ರಮುಖ ಮಾರುಕಟ್ಟೆಗಳಿಗೆ ಲಗ್ಗೆಯಿಡಲು ಸಜ್ಜಾಗುತ್ತಿದೆ.

ಹೊಸ ಐಯಾನಿಕ್ 5 ಮಾದರಿ ಈಗಾಗಲೇ ಯುಎಸ್ಎ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿದ್ದು, ಒಂದೇ ಪ್ಲ್ಯಾಟ್‌ಫಾರ್ಮ್ ಅಡಿಯಲ್ಲಿ ನಿರ್ಮಾಣವಾಗಿರುವ ಕಿಯಾ ಇವಿ6 ಮಾದರಿಗಿಂತಲೂ ಐಯಾನಿಕ್ 5 ಭಾರತದಲ್ಲಿ ಬೆಲೆ ವಿಚಾರವಾಗಿ ಗಮನಸೆಳೆಯಲಿದೆ. ಕಿಯಾ ಕಂಪನಿಯು ಹೊಸ ಇವಿ6 ಮಾದರಿಯನ್ನು ವಿದೇಶಿ ಮಾರುಕಟ್ಟೆಯಿಂದ ಹೊಸ ಕಾರನ್ನು ಆಮದು ಮಾಡಿಕೊಂಡು ಭಾರತದಲ್ಲಿ ಮಾರಾಟ ಮಾಡುತ್ತಿದ್ದು, ಹ್ಯುಂಡೈ ಕಂಪನಿಯು ಹೊಸ ಐಯಾನಿಕ್ 5 ಕಾರನ್ನು ವಿದೇಶಿಯ ಮಾರುಕಟ್ಟೆಯಿಂದ ಆಮದು ಮಾಡಿಕೊಳ್ಳುವ ಬದಲಾಗಿ ಸಿಕೆಡಿ ಆಮದು ನೀತಿ ಅಡಿ ಭಾರತದಲ್ಲಿಯೇ ಮರುಜೋಡಣೆ ಮಾಡಿ ಮಾರಾಟ ಮಾಡಲು ಮುಂದಾಗಿದೆ.

ಬ್ಯಾಟರಿ ಪ್ಯಾಕ್ ಮತ್ತು ಬೆಲೆ

ಹೊಸ ಐಯಾನಿಕ್ 5 ಇವಿ ಕಾರು ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ 58 ಕಿ.ವ್ಯಾ ಮತ್ತು 72.6 ಕಿ.ವ್ಯಾ ಬ್ಯಾಟರಿ ಪ್ಯಾಕ್ ಜೋಡಣೆ ಹೊಂದಿರಲಿದ್ದು, ಯಎಸ್ ಎನ್ವಿರೋನ್ಮೆಂಟ್ ಪ್ರೊಟೆಕ್ಷನ್ ಎಜೆನ್ಸಿ(EPA) ಸಂಸ್ಥೆಯು ನೀಡಿರುವ ಪ್ರಮಾಣ ಪತ್ರದಲ್ಲಿ ಹೊಸ ಕಾರು ಪ್ರತಿ ಚಾರ್ಜ್‌ಗೆ 488 ಕಿ.ಮೀ ಮೈಲೇಜ್ ನೀಡುವುದಾಗಿ ನಮೂದಿಸಿದೆ. ಇದರೊಂದಿಗೆ ಐಷಾರಾಮಿ ಎಲೆಕ್ಟ್ರಿಕ್ ಕಾರುಗಳಿಗೆ ಸಮನಾದ ಫೀಚರ್ಸ್ ಹೊಂದಿರವ ಹೊಸ ಐಯಾನಿಕ್ 5 ಕಾರು ಭಾರತದಲ್ಲಿ ಎಕ್ಸ್ ಶೋರೂಂ ಪ್ರಕಾರ ರೂ. 40 ಲಕ್ಷದಿಂದ ರೂ. 50 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳಬಹುದಾಗಿದ್ದು, ಐಷಾರಾಮಿ ಕಾರು ಮಾದರಿಗಳಿಗೂ ಭರ್ಜರಿ ಪೈಪೋಟಿ ನೀಡುವ ತವಕದಲ್ಲಿದೆ.

ಹೊಸ ಕಾರಿನಲ್ಲಿ ಆರಂಭಿಕ ಮಾದರಿಯು 167 ಬಿಹೆಚ್‌ಪಿ ಉತ್ಪಾದಿಯೊಂದಿಗೆ ಕೇವಲ 8.5 ಸೆಕೆಂಡುಗಳಲ್ಲಿ ಗಂಟೆಗೆ ಸೊನ್ನೆಯಿಂದ ನೂರು ಕಿಮೀ ವೇಗವನ್ನು ತಲುಪಲಿದ್ದರೆ ದೊಡ್ಡ ಬ್ಯಾಟರಿ ಪ್ಯಾಕ್‌ ಜೋಡಣೆ ಹೊಂದಿರುವ ಐಯಾನಿಕ್ 5 ಮಾದರಿಯು 302 ಬಿಹೆಚ್‌ಪಿ ಮತ್ತು 605 ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಈ ಕೇವಲ 5.2 ಸೆಕೆಂಡುಗಳಲ್ಲಿ ಗಂಟೆಗೆ 0-100 ಕಿ.ಮೀ ವೇಗದೊಂದಿಗೆ ಪ್ರತಿ ಗಂಟೆಗೆ 185 ಕಿ.ಮೀ ಟಾಪ್ ಸ್ಪೀಡ್ ತಲುಪುತ್ತದೆ.

LEAVE A REPLY

Please enter your comment!
Please enter your name here