Home ಬೆಂಗಳೂರು ನಗರ ನಾನೆಲ್ಲಿಯೂ ನನ್ನನ್ನು ಮುಖ್ಯಮಂತ್ರಿ ಮಾಡಿ ಎಂದಿಲ್ಲ: ಬಸವರಾಜ ಬೊಮ್ಮಾಯಿ

ನಾನೆಲ್ಲಿಯೂ ನನ್ನನ್ನು ಮುಖ್ಯಮಂತ್ರಿ ಮಾಡಿ ಎಂದಿಲ್ಲ: ಬಸವರಾಜ ಬೊಮ್ಮಾಯಿ

55
0
I did not demand anywhere to make me as Chief Minister: Basavaraj Bommai

ಬೆಂಗಳೂರು:

ಸಿಎಂ ಸ್ಥಾನಕ್ಕೆ ನನ್ನ ಹೆಸರು ಪ್ರಸ್ತಾಪವಾಗುತ್ತಿರುವ ಬಗ್ಗೆ ಮಾಧ್ಯಮಗಳಿಂದಲೇ ನನಗೆ ತಿಳಿದುಬಂದಿದೆಯೇ ಹೊರತು ನಾನೆಲ್ಲಿಯೂ ನನ್ನನ್ನು ಮುಖ್ಯಮಂತ್ರಿ ಮಾಡಿ ಎಂದು ಕೇಳಿಲ್ಲ ಎಂದು ಮಾಜಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕೆಕೆ ಅತಿಥಿಗೃಹದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ಯಾರನ್ನು ಸಿಎಂ ಮಾಡಬೇಕು?ಸಂಪುಟಕ್ಕೆ ಸೇರಿಸಿಕೊಳ್ಳಬೇಕು? ಎಂಬುದೆಲ್ಲವೂ ನಿರ್ಣಯವೆಲ್ಲವೂ ವರಿಷ್ಠರಿಗೆ ಬಿಟ್ಟಿದ್ದು, ಆ ಬಗ್ಗೆ ನಾನೇನು ಹೇಳಲು ಬರುವುದಿಲ್ಲ. ಊಹಾಪೋಹದ ಪ್ರಶ್ನೆಗಳಿಗೆಲ್ಲ ಉತ್ತರಿಸುವುದಿಲ್ಲ ಎಂದರು.

ಇಂದು ಸಂಜೆ ಶಾಸಕಾಂಗ ಪಕ್ಷದ ಸಭೆ ಇದ್ದು, ಸಭೆಯಲ್ಲಿ ಎಲ್ಲಾ ಶಾಸಕರ ಅಭಿಪ್ರಾಯಗಳನ್ನು ಸಂಗ್ರಹಿಸಲಾಗುವುದು. ಬಿಜೆಪಿ ಪಕ್ಷದಲ್ಲಿ ವಿವಿಧ ಹಂತಗಳಲ್ಲಿ ನಿರ್ಣಯಗಳಾಗುತ್ತವೆ. ಅಂತಿಮ ನಿರ್ಣಯ ಸಂಸದೀಯ ಮಂಡಳಿ ಸಭೆಯಲ್ಲಿ ನಿರ್ಧಾರವಾಗುತ್ತದೆ ಎಂದು ಬೊಮ್ಮಾಯಿ ಹೇಳಿದರು.

LEAVE A REPLY

Please enter your comment!
Please enter your name here