
ಬೆಂಗಳೂರು:
ಬಿಜೆಪಿ ಪಕ್ಷ ನನಗೆ ಎಲ್ಲವನ್ನೂ ನೀಡಿದೆ, ಹೆಚ್ಚಿನದಕ್ಕೆ ಆಸೆ ಪಡುವುದಿಲ್ಲ. ಚುನಾವಣಾ ರಾಜಕೀಯದಲ್ಲಿ ಮುಂದುವರಿಯದಿರಲು ನಿರ್ಧರಿಸಿದ್ದೇನೆ ಎಂದು ಮಾಜಿ ಸಿಎಂ ಸದಾನಂದ ಗೌಡ ಘೋಷಿಸಿದ್ದಾರೆ.
“ನನ್ನ 30 ವರ್ಷಗಳ ರಾಜಕೀಯ ಜೀವನದಲ್ಲಿ ಪಕ್ಷ ನನಗೆ ಎಲ್ಲವನ್ನೂ ನೀಡಿದೆ. ನಾನು 10 ವರ್ಷ ಶಾಸಕನಾಗಿ, 20 ವರ್ಷ ಸಂಸದನಾಗಿ, ಒಂದು ವರ್ಷ ಮುಖ್ಯಮಂತ್ರಿಯಾಗಿ, 4 ವರ್ಷ ರಾಜ್ಯ ಪಕ್ಷದ ಅಧ್ಯಕ್ಷನಾಗಿ ಕಾರ್ಯನಿರ್ವಹಿಸಿದ್ದೇನೆ,” ಎಂದು ಹೇಳಿದರು.