Home ರಾಜಕೀಯ ನನಗೆ ಎಕ್ಸಿಟ್ ಪೋಲ್ ಮೇಲೆ ವಿಶ್ವಾಸವಿಲ್ಲ, ರಾಜ್ಯದಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನಗಳನ್ನು ಗೆಲ್ಲಲಿದೆ : ಡಿಕೆಶಿ

ನನಗೆ ಎಕ್ಸಿಟ್ ಪೋಲ್ ಮೇಲೆ ವಿಶ್ವಾಸವಿಲ್ಲ, ರಾಜ್ಯದಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನಗಳನ್ನು ಗೆಲ್ಲಲಿದೆ : ಡಿಕೆಶಿ

20
0

ಬೆಂಗಳೂರು: “ನನಗೆ ಚುನಾವಣೋತ್ತರ ಸಮೀಕ್ಷೆ ಮೇಲೆ ವಿಶ್ವಾಸವಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನಗಳನ್ನು ಗೆಲ್ಲಲಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಸದಾಶಿವನಗರ ನಿವಾಸದ ಬಳಿ ಶನಿವಾರ ಸುದ್ದಿಗಾರೊಂದಿಗೆ ಮಾತನಾಡಿದ ಅವರು,”ಚುನಾವಣೋತ್ತರ ಸಮೀಕ್ಷೆ ನಡೆಸುವವರು ಅಲ್ಪಪ್ರಮಾಣದ ಮಾದರಿಗಳನ್ನು ಸಂಗ್ರಹಿಸಿರುತ್ತಾರೆ. ಆಳವಾದ ಸಮೀಕ್ಷೆ ನಡೆಯುವುದಿಲ್ಲ. ಹೀಗಾಗಿ ಈ ಸಮೀಕ್ಷೆಗಳಿಂದ ನಿಖರ ಮಾಹಿತಿ ಬರುವುದಿಲ್ಲ. ಹೀಗಾಗಿ ನನಗೆ ಎಕ್ಸಿಟ್ ಪೋಲ್ ಮೇಲೆ ವಿಶ್ವಾಸವಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ 3-4 ಸ್ಥಾನ ಪಡೆಯಲಿದೆ ಎಂದು ಎಕ್ಸಿಟ್ ಪೋಲ್ ಮಾಹಿತಿ ತೋರಿಸುತಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಎರಡಂಕಿ ಸ್ಥಾನಗಳನ್ನು ಗೆಲ್ಲಲಿದೆ. ದೇಶದ ಅಧಿಕಾರವನ್ನು ಇಂಡಿಯಾ ಮೈತ್ರಿಕೂಟ ಪಡೆಯಲಿದೆ ” ಎಂದರು.

LEAVE A REPLY

Please enter your comment!
Please enter your name here