Home ಬೆಂಗಳೂರು ನಗರ ಬೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ ನಾನು ಸಂಪುಟ ಸೇರ್ಪಡೆಯಾಗುವುದಿಲ್ಲ :ಜಗದೀಶ್ ಶೆಟ್ಟರ್

ಬೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ ನಾನು ಸಂಪುಟ ಸೇರ್ಪಡೆಯಾಗುವುದಿಲ್ಲ :ಜಗದೀಶ್ ಶೆಟ್ಟರ್

83
0

ಬೆಂಗಳೂರು:

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ ನಾನು ಸಂಪುಟ ಸೇರ್ಪಡೆಯಾಗುವುದಿಲ್ಲ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಯಡಿಯೂರಪ್ಪ ನಮ್ಮ ಹಿರಿಯರು ಹೀಗಾಗಿ ಅವರ ಸಂಪುಟದಲ್ಲಿ ಸಚಿವನಾಗಿ ಕಾರ್ಯ ನಿರ್ವಹಿಸಿದ್ದೇನೆ.

ಇದೀಗ ಸಚಿವನಾಗಿ ಕಾರ್ಯ ನಿರ್ವಹಿಸುವುದಿಲ್ಲ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಜತೆ ಚರ್ಚಿಸಿದ್ದೇನೆ.ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇನೆ. ಸಚಿವ ಸಂಪುಟ ಸೇರ್ಪಡೆಯಾಗದಿರುವುದು ನೈತಿಕತೆಯ ನಿರ್ಧಾರವಾಗಿದೆ ಎಂದು ಶೆಟ್ಟರ್ ಹೇಳಿದರು.

LEAVE A REPLY

Please enter your comment!
Please enter your name here