ಭಾರತೀಯ ವಾಯುಪಡೆಯ ತರಬೇತಿ ಕಮಾಂಡ್ ಮುಖ್ಯಸ್ಥ ಏರ್ ಮಾರ್ಷಲ್ ಎಸ್. ಶ್ರೀನಿವಾಸ್ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ
ಬೆಂಗಳೂರು, ಆಗಸ್ಟ್ 4: ಭಾರತೀಯ ವಾಯುಪಡೆಯ ತರಬೇತಿ ಕಮಾಂಡ್ ಮುಖ್ಯಸ್ಥ ಏರ್ ಮಾರ್ಷಲ್ ಎಸ್. ಶ್ರೀನಿವಾಸ್ ಅವರ ನೇತೃತ್ವದ ನಿಯೋಗವು ಮಂಗಳವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿತು.
ಸಭೆಯಲ್ಲಿ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಎಲ್.ಕೆ. ಅತೀಕ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರ ರಾವ್ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಉಪಸ್ಥಿತರಿದ್ದರು.
