ಬೆಂಗಳೂರು:
ಜೂನ್ 30ಕ್ಕೆ ಹಾಲಿ ಹಣಕಾಸು ಇಲಾಖೆಯ ಪ್ರಧಾನ ಕಾರ್ಯದರ್ಶಿ ಐಎಸ್ಎನ್ ಪ್ರಸಾದ್ ಅವರು ನಿವೃತ್ತಿಯಾಗಲಿದ್ದಾರೆ. ಹೀಗಾಗಿ ಹಣಕಾಸು ಇಲಾಖೆಯ ವಿಶೇಷ ಕರ್ತವ್ಯದ ಮೇಲೆ ಎಲ್ಕೆ ಅತಿಕ್ ಅವರನ್ನು ನಿಯೋಜನೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.
ಜೂನ್ 30ರಿಂದ ಹಣಕಾಸು ಇಲಾಖೆ ಅಡಿಷನಲ್ ಚೀಫ್ ಸೆಕ್ರೆಟರಿಯಾಗಿ ಎಲ್ಕೆ ಅತೀಕ್ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ವಿಶೇಷ ಕರ್ತವ್ಯದ ಮೇಲೆ ಜೂನ್ 30ರ ವರೆಗೆ ಹಣಕಾಸು ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಎಲ್ಕೆ ಅತಿಕ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ