ಬೆಂಗಳೂರು:
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ ) ಸೇರಿದಂತೆ 10 ಯೋಜನಾ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಕೇಶ್ ಸಿಂಗ್ ಅವರು ಆನೇಕಲ್ ಯೋಜನಾ ಪ್ರಾಧಿಕಾರ, ಹೊಸಕೋಟೆ ಯೋಜನಾ ಪ್ರಾಧಿಕಾರ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ, ಮಾಗಡಿ ಯೋಜನಾ ಪ್ರಾಧಿಕಾರ, ಚನ್ನಪಟ್ಟಣ ಅಭಿವೃದ್ಧಿ ಪ್ರಾಧಿಕಾರ, ಕನಕಪುರ ಯೋಜನಾ ಪ್ರಾಧಿಕಾರ, ನೆಲಮಂಗಲ ಯೋಜನಾ ಪ್ರಾಧಿಕಾರ, ಸ್ಯಾಟಲೈಟ್ ಬೆಂಗಳೂರು – ಗ್ರೇಟರ್ ರಿಂಗ್ ರಸ್ತೆ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿಯೂ ಕಾರ್ಯ ವಹಿಸಲಿದ್ದಾರೆ.
Also Read: IAS officer Rakesh Singh appointed as chairman of 10 planning authorities including BDA