ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಈಗ ಮುಖ್ಯ ಸಂಪಾದಕರು

Rohini Sinduri..

ಬೆಂಗಳೂರು:

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ದಾಸರಿ ಅವರಿಗೆ ಕರ್ನಾಟಕ ಗೆಜೆಟಿಯರ್ ಇಲಾಖೆಗೆ ಮುಖ್ಯ ಸಂಪಾದಕರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಬುಧವಾರ ರಾಜ್ಯದ ಹಲವು ಐಎಎಸ್‌ ಅಧಿಕಾರಿಗಳ ವರ್ಗಾವಣೆಯಾಗಿದ್ದು, ಈ ವೇಳೆ ಹಲವು ದಿನಗಳಿಂದ ಹುದ್ದೆಗಾಗಿ ಕಾದು ಕುಳಿತಿದ್ದ ರೋಹಿಣಿ ಸಿಂಧೂರಿ ಅವರಿಗೆ ಹುದ್ದೆ ನಿಯೋಜನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈಗಿನಿಂದ ಮುಂದಿನ ಆದೇಶದವರೆಗೂ ಅವರು ಕರ್ನಾಟಕ ಗೆಜೆಟಿಯರ್‌ ಇಲಾಖೆಯ ಮುಖ್ಯ ಸಂಪಾದಕರು ಹುದ್ದೆ ನಿರ್ವಹಿಸುವಂತೆ ಸೂಚಿಸಲಾಗಿದೆ.

ಕಳೆದ ಕೆಲ ತಿಂಗಳ ಹಿಂದೆ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ನಡುವೆ ಕಿತ್ತಾಟ ನಡೆದಿತ್ತು. ಈ ವೇಳೆ ಇಬ್ಬರಿಗೂ ಸರ್ಕಾರ ಹುದ್ದೆಯನ್ನು ನೀಡದೆ ವರ್ಗಾವಣೆ ಮಾಡಿತ್ತು. ಕಳೆದ 6 ತಿಂಗಳಿನಿಂದ ಸರ್ಕಾರ ರೋಹಿಣಿ ಸಿಂಧೂರಿಗೆ ಯಾವುದೇ ಹುದ್ದೆ ನೀಡಿರಲಿಲ್ಲ.

Comments

Leave a Reply

Your email address will not be published. Required fields are marked *

More posts