ಏಕದಿನ ವಿಶ್ವಕಪ್ನಲ್ಲಿ ಸಚಿನ್ ಹಾಗೂ ಡಿವಿಲಿಯರ್ಸ್ ದಾಖಲೆಯನ್ನು ವಾರ್ನರ್ ಮುರಿದಿದ್ದಾರೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಏಕದಿನ ವಿಶ್ವಕಪ್ನ ಮೊದಲ ಪಂದ್ಯದಲ್ಲಿ ಆಸೀಸ್ ತಂಡದ ಆರಂಭಿಕ ಬ್ಯಾಟರ್ ಡೇವಿಡ್ ವಾರ್ನರ್ 41 ರನ್ಗಳ ಇನ್ನಿಂಗ್ಸ್ ಆಡುವ ಮೂಲಕ ಸಚಿನ್ ತೆಂಡೂಲ್ಕರ್ ದಾಖಲೆ ಮುರಿದಿದ್ದಾರೆ.
ಟೀಂ ಇಂಡಿಯಾ ವಿರುದ್ಧ 52 ಎಸೆತಗಳಲ್ಲಿ 6 ಬೌಂಡರಿ ಸಹಿತ 41 ರನ್ ಬಾರಿಸಿದ ಡೇವಿಡ್ ವಾರ್ನರ್, ಏಕದಿನ ವಿಶ್ವಕಪ್ನಲ್ಲಿ ಅತಿ ಕಡಿಮೆ ಇನ್ನಿಂಗ್ಸ್ನಲ್ಲಿ ಸಾವಿರ ರನ್ ಪೂರೈಸಿದ ದಾಖಲೆ ನಿರ್ಮಿಸಿದ್ದಾರೆ.
ಡೇವಿಡ್ ವಾರ್ನರ್ ಇದುವರೆಗೆ ಏಕದಿನ ವಿಶ್ವಕಪ್ನಲ್ಲಿ 19 ಇನ್ನಿಂಗ್ಸ್ಗಳನ್ನು ಆಡಿದ್ದು, 1000 ರನ್ ಪೂರೈಸಿದ್ದಾರೆ. ಈ ವಿಚಾರದಲ್ಲಿ ಭಾರತ ಸಚಿನ್ ತೆಂಡೂಲ್ಕರ್ ಹಾಗೂ ದಕ್ಷಿಣ ಆಫ್ರಿಕಾದ ಮಾಜಿ ಬ್ಯಾಟರ್ ಡಿವಿಲಿಯರ್ಸ್ ದಾಖಲೆಯನ್ನು ಮುರಿದಿದ್ದಾರೆ.
The post ICC ODI World Cup 2023: ತೆಂಡೂಲ್ಕರ್ ಹಾಗೂ ಡಿವಿಲಿಯರ್ಸ್ ದಾಖಲೆ ಮುರಿದ ಡೇವಿಡ್ ವಾರ್ನರ್ appeared first on Ain Live News.