ಬೆಂಗಳೂರು:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲಾ ಇಂದಿರಾ ಕ್ಯಾಂಟೀನ್‌ಗಳಲ್ಲಿ ಇಂದಿನಿಂದ ಬಡವರ್ಗದ ಜನರು, ವಲಸಿಗರು, ಕೂಲಿ ಕಾರ್ಮಿಕರಿಗೆ ಬೆಳಗಿನ ಉಪಹಾರ, ಮಧ್ಯಾಹ್ನ ಹಾಗೂ ರಾತ್ರಿ ಊಟ ಸೇರಿದಂತೆ ದಿನದ ಮೂರು ಹೊತ್ತು ಆಹಾರ ಪೊಟ್ಟಣಗಳನ್ನು ಉಚಿತವಾಗಿ ವಿತರಣೆ ಮಾಡಲಾಗುತ್ತಿದೆ.
ಸದರಿ ವಿಷಯಕ್ಕೆ ಸಂಬಂಧಿಸಿದಂತೆ ಇಂದಿರಾ ಕ್ಯಾಂಟೀನ್‌ನಲ್ಲಿ ಆಹಾರದ ಪೊಟ್ಟಣಗಳನ್ನು ಪಡೆಯಲು ಬರುವ ಫಲಾನುಭವಿಗಳೂ ಯಾವುದಾದರೊಂದು ಗುರುತಿನ ಚೀಟಿ ಸರಬರಾಜುದಾರರಿಗೆ ಒದಗಿಸಿ ಆಹಾರದ ಪೊಟ್ಟಣಗಳನ್ನು ಪಡೆಯಬೇಕು ಎಂದು ತಿಳಿಸಲಾಗಿತ್ತು.
ಆದರೆ, ಅರ್ಹ ಫಲಾನುಭವಿಗಳು ಗುರುತಿನ ಚೀಟಿ ತೋರಿಸಿ ಆಹಾರ ಪೊಟ್ಟಣಗಳನ್ನು ಪಡೆಯುವುದು ಸಮಸ್ಯೆ ಆಗುತ್ತಿರುವುದರಿಂದ ಇನ್ನುಮುಂದೆ ಆಹಾರ ಪೊಟ್ಟಣ ಪಡೆಯಲು ಗುರುತಿನ ಚೀಟಿ ಕಡ್ಡಾಯವಲ್ಲ. ಅರ್ಹ ಫಲಾನುಭವಿಗಳು ಗುರುತಿನ ಚೀಟಿ ತೊರಿಸದೆ ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡಿ ಆಹಾರದ ಪೊಟ್ಟಣಗಳನ್ನು ಉಚಿತವಾಗಿ ಪಡೆಯಬಹುದೆಂದು ಮಾನ್ಯ ಮುಖ್ಯ ಆಯುಕ್ತರು ಗೌರವ್ ಗುಪ್ತಾ ರವರು ಸ್ಪಷ್ಟಪಡಿಸಿರುತ್ತಾರೆ.