ಬೆಂಗಳೂರು:
‘ಸರ್ವ ಜನಾಂಗದ ಶಾಂತಿಯ ತೋಟ,ಇದುವೆ ಕಾಂಗ್ರೆಸ್ ಬದ್ದತೆ’ ಹೆಸರಿನಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆ ಇಂದು ಮಂಗಳವಾರ ಬಿಡುಗಡೆಯಾಗಿದೆ.
ಕಾಂಗ್ರೆಸ್ ಬರಲಿದೆ ಪ್ರಗತಿ ತರಲಿದೆ ಎಂದು ಘೋಷ ವಾಕ್ಯವನ್ನು ಪ್ರಣಾಳಿಕೆಯಲ್ಲಿ ನೀಡಲಾಗಿದೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪ್ರಮುಖ ನಾಯಕರಾದ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್, ರಂದೀಪ್ ಸಿಂಗ್ ಸುರ್ಜೆವಾಲಾ, ಡಾ ಜಿ ಪರಮೇಶ್ವರ್ ಮೊದಲಾದ ನಾಯಕರ ಸಮ್ಮುಖದಲ್ಲಿ ಬಿಡುಗಡೆಯಾಯಿತು.
Also Read: Karnataka Polls: “Will ban…,” Congress cites Bajrang Dal, PFI in manifesto
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ, ಪಿಎಫ್ಐ ನಿಷೇಧ, ಅಂಗನವಾಡಿ ಕಾರ್ಯಕರ್ತೆಯರ ವೇತನ 11,500ರಿಂದ 15 ಸಾವಿರಕ್ಕೆ ಹೆಚ್ಚಳ, ಆಶಾ ಕಾರ್ಯಕರ್ತೆಯರ ಗೌರವಧನ 8 ಸಾವಿರ ರೂ.ಗೆ ಹೆಚ್ಚಳ, ಬಿಸಿಯೂಟ ನೌಕರರ ಮಾಸಿಕ ಗೌರವಧನ 6 ಸಾವಿರ ರೂ.ಗೆ ಹೆಚ್ಚಳ, ರಾತ್ರಿ ಪಾಳಿಯ ಪೊಲೀಸ್ ಸಿಬ್ಬಂದಿಗೆ 5 ಸಾವಿರ ರೂ. ವಿಶೇಷ ಭತ್ಯೆ, ಎಲ್ಲಾ ಪೊಲೀಸರಿಗೆ ವರ್ಷಕ್ಕೆ ಒಂದು ತಿಂಗಳ ವೇತನ ಹೆಚ್ಚುವರಿ ಪಾವತಿ, ಆದ್ಯತೆಯ ಮೇರೆಗೆ ಕಾಲ ಕಾಲಕ್ಕೆ ಎಲ್ಲಾ ಖಾಲಿ ಹುದ್ದೆಗಳ ಭರ್ತಿ, ನಾಲ್ಕು ವರ್ಷದೊಳಗೆ ಎಲ್ಲಾ ಪೊಲೀಸ್ ಸಿಬ್ಬಂದಿಗೂ ವಸತಿ ಸೌಲಭ್ಯ, ಪ್ರತಿ ಜಿಲ್ಲೆಯಲ್ಲೂ ಸುಸಜ್ಜಿತ ಸೈಬರ್ ಪೊಲೀಸ್ ಠಾಣೆಗಳ ನಿರ್ಮಾಣ, ಕನಕಪುರದಲ್ಲಿ ವಿಶ್ವದರ್ಜೆಯ ವಿಧಿವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ ಮಾಡುವ ಭರವಸೆಯನ್ನು ಕಾಂಗ್ರೆಸ್ ನೀಡಿದೆ.
LIVE : ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮ, ಬೆಂಗಳೂರು https://t.co/PfpTRynh0i
— Karnataka Congress (@INCKarnataka) May 2, 2023
ಪ್ರಣಾಳಿಕೆಯಲ್ಲಿ ರಾಜ್ಯದ ಜನತೆಗೆ ಘೋಷಿಸಿರುವ ಪ್ರಮುಖ ಯೋಜನೆಗಳು: ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ಉಚಿತ ವಿದ್ಯುತ್, ಅನ್ನ ಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ 10 ಕೆಜಿ ಉಚಿತ ಅಕ್ಕಿ, ಗೃಹಲಕ್ಷ್ಮೀ ಯೋಜನೆಯಡಿ ಮನೆ ಯಜಮಾನಿಗೆ 2 ಸಾವಿರ ರೂ, ಯುವನಿಧಿ ಯೋಜನೆಯಡಿ ನಿರುದ್ಯೋಗ ಯುವಕರಿಗೆ ನೆರವು, ಪದವೀಧರರಿಗೆ 3 ಸಾವಿರ ರೂ., ಡಿಪ್ಲೊಮೊ ಪದವೀಧರರಿಗೆ 1,500 ರೂ, ಸರ್ಕಾರದಲ್ಲಿ ಒಂದು ವರ್ಷದಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳ ಭರ್ತಿ, ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡ್ತಿರುವ ನೌಕರರಿಗೆ ಖಾಯಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೌಕರರ ಖಾಯಂ,
ಬಿಬಿಎಂಪಿ ನಿರ್ವಹಣೆಗಾಗಿಯೇ ಸಮಗ್ರ ಶಾಸನ ಜಾರಿ, ಒಂದೇ ವೇದಿಕೆ ಅಡಿ ಸಾರಿಗೆ ವಿದ್ಯುತ್ ವಸತಿ ಒಳಚರಂಡಿ, ನೀರು ಸರಬರಾಜು ಸೌಕರ್ಯ, ಬೆಂಗಳೂರು ನಗರದ ವಿವಿಧ ಪ್ರದೇಶಗಳಿಗೆ ರಾತ್ರಿ 1 ಗಂಟೆ ತನಕ ಬಸ್ ವ್ಯವಸ್ಥೆ, NEP ರದ್ದು ಮಾಡಿ ಕರ್ನಾಟಕ ಶಿಕ್ಷಣ ನೀತಿಯ ಅನುಷ್ಠಾನ, ಸರ್ಕಾರದಿಂದಲೇ ಮನೆಗಳ ನಿರ್ಮಾಣ, ಮಂಗಳಮುಖಿರಿಗಾಗಿ ಮಂಡಳಿ ಸ್ಥಾಪನೆ (100 ಕೋಟಿ ಅನುದಾನ), ಆಟೋ ಚಾಲಕರ ಮಂಡಳಿ ಹಾಗೂ ಟ್ಯಾಕ್ಸಿ ಚಾಲಕರ ಮಂಡಳಿ ಸ್ಥಾಪನೆ, ಪತ್ರಕರ್ತರ ಕಲ್ಯಾಣ ನಿಧಿಗೆ 500 ಕೋಟಿ ರೂ ಮೀಸಲು (ಪತ್ರಕರ್ತರಿಗೆ ಸಾಮಾಜಿಕ ಭದ್ರತಾ ಯೋಜನೆ ಜಾರಿ, ಮೊದಲ ಅಧಿವೇಶನದಲ್ಲಿ ಸದಾಶಿವ ಆಯೋಗದ ವರದಿ ಮಂಡನೆ), SC-ST ಒಳ ಮೀಸಲಾತಿಗೆ ನ್ಯಾಯ ಕೊಡಿಸಲು ಕಾಂಗ್ರೆಸ್ ಬದ್ದ.