Home ರಾಜಕೀಯ If Congress wins more seats in the Lok Sabha elections, Siddaramaiah will...

If Congress wins more seats in the Lok Sabha elections, Siddaramaiah will be the full-time CM – Yathindra| ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗೆದ್ದರೆ ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ – ಯತೀಂದ್ರ

29
0
If Congress wins more seats in the Lok Sabha elections, Siddaramaiah will be the full-time CM – Yathindra

ಹಾಸನ:

ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಹೆಚ್ಚು ಸ್ಥಾನ ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಆಗಿರಲಿದ್ದಾರೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಚುನಾವಣೆಗೂ ಮೊದಲು 5 ಉಚಿತ ಗ್ಯಾರಂಟಿಗಳನ್ನು ಘೋಷಣೆ ಮಾಡಲಾಗಿತ್ತು. ಸರ್ಕಾರಕ್ಕೆ ಒಂದು ವರ್ಷ ತುಂಬುವ ಮೊದಲೇ ಅವುಗಳನ್ನು ಜಾರಿಗೊಳಿಸಲಾಗಿದೆ. ಬಡವರು, ಶೋಷತರಿಗಾಗಿ ಕೆಲಸ ಮಾಡುವ ಹಂಬಲ ಕಾಂಗ್ರೆಸ್​ಗೆ ಇದೆ. ಹಾಗಾಗಿ ನೀವೆಲ್ಲರೂ ಸಿಎಂ ಸಿದ್ದರಾಮಯ್ಯಗೆ ಬೆಂಬಲ ನೀಡಬೇಕು ಎಂದು ಯತೀಂದ್ರ ಕರೆ ನೀಡಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆದ್ದರೆ ನೈತಿಕವಾಗಿ ಸಿದ್ದರಾಮಯ್ಯ ಅವರಿಗೆ ಮತ್ತಷ್ಟು ಬೆಂಬಲ ಸಿಗಲಿದೆ. ಗ್ಯಾರಂಟಿ ಯೋಜನೆಗಳಿಗೆ ವರ್ಷಕ್ಕೆ 56 ಸಾವಿರ ಕೋಟಿ ರೂಪಾಯಿ ಖರ್ಚು ಆಗುತ್ತದೆ. ರಾಜ್ಯದಲ್ಲಿ ಯಾವ ಸರ್ಕಾರವೂ ಇಷ್ಟು ಹಣವನ್ನು ಖರ್ಚು ಮಾಡಿಲ್ಲ. ಇಷ್ಟೊಂದು ಹಣ ಖರ್ಚು ಮಾಡುತ್ತಿರುವಾಗ ಜನರ ಬೆಂಬಲ ಬೇಕು. ಆಗ ಸಿದ್ದರಾಮಯ್ಯ 5 ವರ್ಷ ಗ್ಯಾರಂಟಿ ಯೋಜನೆ ಮುಂದುವರಿಸುತ್ತಾರೆ ಎಂದರು.

LEAVE A REPLY

Please enter your comment!
Please enter your name here