Home ಬೆಂಗಳೂರು ನಗರ Illegal Banners: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ 50,000 ರೂ ದಂಡ ವಿಧಿಸದ BBMP

Illegal Banners: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ 50,000 ರೂ ದಂಡ ವಿಧಿಸದ BBMP

9
0
Illegal Banners: BBMP fine Karnataka Pradesh Congress Committee Rs 50,000
Illegal Banners: BBMP fine Karnataka Pradesh Congress Committee Rs 50,000
Advertisement
bengaluru

ಬೆಂಗಳೂರು:

ನಗರದ ಮಿಲ್ಲರ್ ಟ್ಯಾಂಕ್ ಬೆಡ್ ಏರಿಯಾ(ಕ್ವೀನ್ಸ್ ರಸ್ತೆ) ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಅಳವಡಿಸಿದ್ದ ಅನಧಿಕೃತ ಬ್ಯಾನರ್ ಅನ್ನು ತೆರವುಗೊಳಿಸಿ 50,000 ರೂ. ದಂಡ ವಿಧಿಸಲಾಗಿದೆ.

ವಸಂತನಗರ ವಾರ್ಡ್-93 ವ್ಯಾಪ್ತಿಯ ಕ್ಲೀನ್ಸ್ ರಸ್ತೆಯ ಸ್ವತ್ತಿನ ಸಂಖ್ಯೆ:12/1 ಮಿಲ್ಲರ್ ಟ್ಯಾಂಕ್ ಬೆಡ್ ಏರಿಯಾದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗ, ರಾಜ್ಯಾಧ್ಯಕ್ಷರು, ಜಿಲ್ಲಾಧ್ಯಕ್ಷರು, ಹಾಗೂ ರಾಜ್ಯದ ಎಲ್ಲಾ ಪಧಾಧಿಕಾರಿಗಳು ರವರುಗಳು ಮಾಜಿ ಪ್ರಧಾನಿ ಆಧುನಿಕ ಭಾರತದ ಹರಿಕಾರ ದಿ. ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ದಿ‌. ಡಿ. ದೇವರಾಜ ಅರಸು ರವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಕಛೇರಿಯ ಮುಂಭಾಗದಲ್ಲಿ ಅನಧಿಕೃತವಾಗಿ ಬ್ಯಾನರ್ ಅಳವಡಿಸಿರುವುದು ಕಂಡುಬಂದಿರುತ್ತದೆ.

ಸದರಿ ಸ್ವತ್ತಿನಲ್ಲಿ ಅನಧಿಕೃತವಾಗಿ ಬ್ಯಾನರ್ ಅಳವಡಿಸಿರುವ ಬಗ್ಗೆ ಪಾಲಿಕೆವತಿಯಿಂದ ಅಧಿಕೃತವಾಗಿ ಪರವಾನಿಗೆ/ಅನುಮತಿಯನ್ನು ಪಡೆದಿರುವುದಿಲ್ಲ. ಈ ಸಂಬಂಧ ಅಧ್ಯಕ್ಷರು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ, ಬೆಂಗಳೂರು ರವರಿಗೆ 50,000 ರೂ.ಗಳ ದಂಡವನ್ನು ವಿಧಿಸಲಾಗಿದ್ದು, ಮಾನ್ಯ ಮುಖ್ಯ ಆಯುಕ್ತರು ರವರ ಖಾತೆಗೆ ದಂಡದ ಮೊತ್ತ ಪಾವತಿಸುವಂತೆ ಸೂಚಿಸಲಾಗಿರುತ್ತದೆ.

bengaluru bengaluru

bengaluru

LEAVE A REPLY

Please enter your comment!
Please enter your name here