Illegal tree felling case: MP Pratap Simha’s brother Vikram Simha granted bail | ಅಕ್ರಮವಾಗಿ ಮರ ಕಡಿತಲೆ ಪ್ರಕರಣ: ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹಗೆ ಜಾಮೀನು
ಬೆಂಗಳೂರು:
ನಂದಗೋಡನಹಳ್ಳಿಯ 10 ಎಕರೆ ಸರ್ಕಾರಿ ಗೋಮಾಳದಲ್ಲಿ 126 ಮರಗಳನ್ನು ಕಡಿದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ , ಬಂಧಿತನಾಗಿರುವ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹಗೆ ಬೇಲೂರು ನ್ಯಾಯಾಲಯದ ಸೀನಿಯರ್ ಸಿವಿಲ್ ಜಡ್ಜ್ ಜಾಮೀನು ಮಂಜೂರು ಮಾಡಿ ಅದೇಶ ಹೊರಡಿಸಿದ್ದಾರೆ.
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಂದಗೋಡನಹಳ್ಳಿಯಲ್ಲಿ ಕೋಟ್ಯಂತರ ರೂ. ಮೌಲ್ಯದ ನೂರಾರು ಮರ ಕಡಿದು ಸಾಗಿಸಿದ ಆರೋಪದಡಿ ವಿಕ್ರಮ್ ಸಿಂಹ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬೆಂಗಳೂರಿನಲ್ಲಿ ವಶಕ್ಕೆ ಪಡೆದಿದ್ದರು.
ಬೇಲೂರು ತಾಲೂಕಿನ ನಂದಗೋಡನಹಳ್ಳಿಯ 10 ಎಕರೆಯಲ್ಲಿ ಬೆಳೆದಿದ್ದ 126 ಮರಗಳನ್ನು ಕಡಿಯಲಾಗಿದ್ದು, ಈ ಸಂಬಂಧ ಬೇಲೂರು ಆರ್ಎಫ್ಒ, ಜಮೀನಿನ ಮಾಲೀಕರಾದ ಜಯಮ್ಮ, ರಾಕೇಶ್ ಶೆಟ್ಟಿ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಡಿದಿರುವ ಮರಗಳನ್ನು ಅರಣ್ಯ ಇಲಾಖೆ ಡಿಪೊದಲ್ಲಿ ಸಂಗ್ರಹಿಸಲಾಗಿದೆ.