Home ಬೆಂಗಳೂರು ನಗರ ರಾಜ್ಯದ 11 ಜಿಲ್ಲೆಗಳಲ್ಲಿ ಎರಡು ದಿನ ಮಳೆ ಸಂಭವ : ಐಎಂಡಿ

ರಾಜ್ಯದ 11 ಜಿಲ್ಲೆಗಳಲ್ಲಿ ಎರಡು ದಿನ ಮಳೆ ಸಂಭವ : ಐಎಂಡಿ

36
0

ಬೆಂಗಳೂರು:

ಕೆಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂಬ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಾಮರಾಜನಗರ, ಹಾಸನ, ಕೊಡಗು, ಮೈಸೂರು, ರಾಮನಗರದಲ್ಲಿ ಇದೇ 17ರವರೆಗೂ ಮಳೆಯಾಗಲಿದೆ ಎಂದೂ ವರದಿ ಹೇಳಿದೆ.

ಬೆಂಗಳೂರಲ್ಲಿ ಕೂಡ ಮೋಡಕವಿದ ವಾತಾವರಣ ಮುಂದುವರೆಯಲಿದೆ. ಮುಂದಿನ ಎರಡು ದಿನಗಳ ಕಾಲ, ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕದಲ್ಲೂ ಭಾರಿ ಮಳೆಯಾಗಲಿದೆ. UNI

LEAVE A REPLY

Please enter your comment!
Please enter your name here