Home ಕರ್ನಾಟಕ 7ನೆ ವೇತನ ಆಯೋಗದ ವರದಿ ಜಾರಿ ; ರಾಜ್ಯ ಆರ್ಥಿಕ ಇಲಾಖೆಯ ಅಧಿಕೃತ ಆದೇಶ

7ನೆ ವೇತನ ಆಯೋಗದ ವರದಿ ಜಾರಿ ; ರಾಜ್ಯ ಆರ್ಥಿಕ ಇಲಾಖೆಯ ಅಧಿಕೃತ ಆದೇಶ

14
0

ಬೆಂಗಳೂರು: ಕಳೆದ ವಾರ ನಡೆದ ಸಂಪುಟ ಸಭೆಯಲ್ಲಿ ರಾಜ್ಯ ಸರಕಾರಿ ನೌಕರರಿಗೆ ಏಳನೇ ವೇತನ ಆಯೋಗದ ವರದಿ ಜಾರಿಗೆ ಅನುಮೋದನೆ ನೀಡಲಾಗಿದ್ದು, ಈ ಸಂಬಂಧ ಸರಕಾರದಿಂದ ಸೋಮವಾರ ಅಧಿಕೃತ ಆದೇಶ ಹೊರಬಿದ್ದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿರುವ ಸಿದ್ದರಾಮಯ್ಯ, ‘ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಸರಕಾರಿ ನೌಕರರಿಗೆ ನೀಡಿದ್ದ ಬಹುದೊಡ್ಡ ಭರವಸೆಯನ್ನು ಈಡೇರಿಸುವ ಮೂಲಕ ರಾಜ್ಯ ಸರಕಾರವು ನುಡಿದಂತೆ ನಡೆದಿದೆʼ ಎಂದು ಪ್ರಕಟಿಸಿದ್ದಾರೆ.

7ನೇ-ವೇತನ-ಆಯೋಗದ-ಆದೇಶ

ವೇತನ ಆಯೋಗದ ವರದಿಯ ಶಿಫಾರಸ್ಸುಗಳನ್ನು ಆಗಸ್ಟ್ 1ರಿಂದ ಜಾರಿಗೆ ಬರಲಿದ್ದು, ಇದರಿಂದ ಸರಕಾರಿ ನೌಕರರ ಮೂಲವೇತನ ಮತ್ತು ಪಿಂಚಣಿಯಲ್ಲಿ ಶೇ.58.50 ಹಾಗೂ ಮನೆಬಾಡಿಗೆ ಭತ್ಯೆಯಲ್ಲಿ ಶೇ.32 ಹೆಚ್ಚಳವಾಗಲಿದೆ. ಈ ಪರಿಷ್ಕರಣೆಯು ಅನುದಾನಿತ ಶಿಕ್ಷಣ ಸಂಸ್ಥೆ ಹಾಗೂ ಸ್ಥಳೀಯ ಸಂಸ್ಥೆಗಳ ನೌಕರರು ಮತ್ತು ವಿವಿಗಳ ಬೋಧಕೇತರ ಸಿಬ್ಬಂದಿಗಳಿಗೂ ಅನ್ವಯವಾಗಲಿದ್ದು, ಇದಕ್ಕಾಗಿ ವಾರ್ಷಿಕ 20,208 ಕೋಟಿ ರೂ.ಹೆಚ್ಚುವರಿ ವೆಚ್ಚವನ್ನು ಸರಕಾರ ಭರಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here