Home ಅಪರಾಧ ಮಂಗಳೂರಿನ ಕಂಕನಾಡಿಯಲ್ಲಿ ನಡು ರಸ್ತೆಯಲ್ಲೇ ಮುಸ್ಲಿಮರಿಂದ ನಮಾಝ್, FIR ದಾಖಲು

ಮಂಗಳೂರಿನ ಕಂಕನಾಡಿಯಲ್ಲಿ ನಡು ರಸ್ತೆಯಲ್ಲೇ ಮುಸ್ಲಿಮರಿಂದ ನಮಾಝ್, FIR ದಾಖಲು

18
0

ದಕ್ಷಿಣ ಕನ್ನಡ: ಮಸೀದಿ ಮುಂದೆ ಇರುವ ರಸ್ತೆಯಲ್ಲಿಯೇ ಯುವಕರ ತಂಡವೊಂದು ನಮಾಜ್ ಮಾಡಿರುವ ಘಟನೆ ಇದೇ ಮೇ.24 ರಂದು ಮಂಗಳೂರಿನ ಕಂಕನಾಡಿಯಲ್ಲಿ ಜರುಗಿತ್ತು. ಅಲ್ಲದೇ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿತ್ತು.

ಇದೇ ಘಟನೆಗೆ ಸಂಬಂಧಿಸಿದಂತೆ ಇದೀಗ ಕೇಸ್ ದಾಖಲಾಗಿದೆ. ಕದ್ರಿ ಠಾಣೆ ಪೊಲೀಸರು ವಿವಿಧ ಕಾಯ್ದೆಗಳಡಿ FIR ದಾಖಲಿಸಿದ್ದಾರೆ.

ಕಳೆದ ಶುಕ್ರವಾರ ಮಂಗಳೂರಿನ ಕಂಕನಾಡಿಯಲ್ಲಿ ಹಗಲು ವೇಳೆಯಲ್ಲಿಯೇ ನಡು ರಸ್ತೆಯಲ್ಲಿ ಮುಸ್ಲಿಮರು ನಮಾಜ್ ಮಾಡಿದ್ದರು. ನಮಾಜ್​ ಮಾಡಿದ ವಿಡಿಯೋ ಎಲ್ಲಡೆ ಹರಿದಾಡಿತ್ತು. ಇದಕ್ಕೆ ಎಲ್ಲೆಡೆ ಅಸಮಧಾನ ವ್ಯಕ್ತವಾಗಿತ್ತು.

ಸಾರ್ವಜನಿಕ ಸ್ಥಳದಲ್ಲಿ ಸಾರ್ವಜನಿಕರಿಗೆ ಓಡಾಡಲು ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ತಡೆಯಾಗಿದ್ದು, ವಾಹನ ಸವಾರರು ಯೂಟರ್ನ್ ತೆಗೆದುಕೊಂಡು ಹೋಗಿದ್ದರು. ಈ ಹಿನ್ನಲೆ ಅಪರಿಚಿತ ವ್ಯಕ್ತಿಗಳ ಮೇಲೆ ಎಫ್​ಐಆರ್​ ದಾಖಲಾಗಿದೆ.

LEAVE A REPLY

Please enter your comment!
Please enter your name here