ಬರೋಬ್ಬರಿ ಮೂರು ವರ್ಷಗಳ ನಂತರ ಅಂದರೆ 1443 ದಿನಗಳ ಬಳಿಕ ಭಾರತದ ಬ್ಯಾಟ್ಸ್‌ಮನ್ ಚೇತೇಶ್ವರ ಪೂಜಾರ ಟೆಸ್ಟ್ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿದ್ದಾರೆ. ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಪೂಜಾರ ತಮ್ಮ ಟೆಸ್ಟ್ ವೃತ್ತಿಜೀವನದ ಅತಿ ವೇಗದ ಶತಕ ಸಿಡಿಸಿದ್ದಾರೆ. ಪೂಜಾರ ಶತಕ ಪೂರೈಸಿದ ಕೂಡಲೇ ಭಾರತ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿದ್ದು, ಬಾಂಗ್ಲಾದೇಶಕ್ಕೆ 512 ರನ್ಗಳ ಟಾರ್ಗೆಟ್ ನೀಡಲಾಗಿದೆ. ಈ ಟೆಸ್ಟ್ನ ಮೊದಲ ಇನ್ನಿಂಗ್ಸ್ನಲ್ಲೂ ಶತಕದಂಚಿನಲ್ಲಿ ಎಡವಿದ್ದ ಪೂಜಾರ 90 ರನ್ಗಳಿಸಿ ತಮ್ಮ ವಿಕೆಟ್ ಒಪ್ಪಿಸಿದ್ದರು. ಆದರೆ ಎರಡನೇ ಇನ್ನಿಂಗ್ಸ್‌ನಲ್ಲಿ ಅರ್ಧಶತಕವನ್ನು ಶತಕವನ್ನಾಗಿ ಪರಿವರ್ತಿಸುವಲ್ಲಿ ಯಶಸ್ವಿಯಾದ ಪೂಜಾರ, 2019ರ ನಂತರ ತಮ್ಮ ಮೊದಲ ಟೆಸ್ಟ್ ಶತಕ ಸಿಡಿಸಿದ್ದಾರೆ.
