ಟೀಂ ಇಂಡಿಯಾ ವಿರುದ್ಧ ಅಮೋಘ ಪ್ರದರ್ಶನ ನೀಡಿ ಏಕದಿನ ಸರಣಿ ಗೆದ್ದಿದ್ದ ಬಾಂಗ್ಲಾದೇಶ ತಂಡ ಟೆಸ್ಟ್ ಸರಣಿಯಲ್ಲಿ ಮುಗ್ಗರಿಸಿದೆ. ಚಟ್ಟೋಗ್ರಾಮ್ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಬಾಂಗ್ಲಾದೇಶ ಎರಡನೇ ದಿನದಾಟದ ಅಂತ್ಯಕ್ಕೆ ಕೇವಲ 133 ರನ್‌ಗಳಿಗೆ ತನ್ನ 8 ವಿಕೆಟ್‌ಗಳನ್ನು ಕಳೆದುಕೊಂಡಿದೆ. ಬಾಂಗ್ಲಾದೇಶದ ಬ್ಯಾಟ್ಸ್‌ಮನ್‌ಗಳಿಗೆ ಚಳ್ಳೆ ಹಣ್ಣು ತಿನ್ನಿಸಿದ ಸಿರಾಜ್ ಹಾಗೂ ಕುಲ್ದೀಪ್ ಯಾದವ್ ಭಾರತಕ್ಕೆ ಇನ್ನಿಂಗ್ಸ್ ಮುನ್ನಡೆ ತಂದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಬಾಂಗ್ಲಾ ಪರ ಉರುಳಿರುವ 8 ವಿಕೆಟ್ಗಳಲ್ಲಿ ಕುಲ್ದೀಪ್ ಯಾದವ್ 10 ಓವರ್‌ಗಳಲ್ಲಿ 33 ರನ್ ನೀಡಿ 4 ವಿಕೆಟ್ ಕಬಳಿಸಿದರೆ, ಸಿರಾಜ್ ಕೂಡ 3 ವಿಕೆಟ್ ಪಡೆದಿದ್ದಾರೆ. ಇನ್ನುಳಿದಂತೆ ಒಂದು ವಿಕೆಟ್ ಉಮೇಶ್ ಯಾದವ್ ಪಾಲಾಯಿತು.